SriRamulu: ಮಹಿಳೆಯರಿಗೆ ಉಚಿತ ಬಸ್ ಪಾಸ್, ಸಚಿವ ಬಿ.ಶ್ರೀರಾಮುಲು ಹೇಳಿಕೆ

ಗದಗದಲ್ಲಿ ಮಾತಾಡಿದ ಸಚಿವ ಶ್ರೀರಾಮುಲು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಅಂತ ಹೇಳಿದ್ದಾರೆ.

ಸಚಿವ ಶ್ರೀರಾಮುಲು

ಸಚಿವ ಶ್ರೀರಾಮುಲು

  • Share this:
ಗದಗ (ಮಾ.13): ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Assembly Election), ಒಂದು ವರ್ಷ ಬಾಕಿ ಇದೆ. ಈಗಾಗಲೇ ಎಲ್ಲ ಪಕ್ಷಗಳು ರಾಜಕೀಯದಾಟ ಶುರುಮಾಡಿಕೊಂಡಿವೆ. ಚುನಾವಣೆ ದೃಷ್ಟಿಯಲ್ಲೇ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಜನರ ಮನವೊಲಿಕೆಗೆ ಮುಂದಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (Congress)​, ಜೆಡಿಎಸ್ (JDS)​ ಕೂಡ ಮತದಾರರ (Voters) ಮನವೊಲಿಕೆಗೆ ಮುಂದಾಗಿದೆ. ಇತ್ತ ಆಡಳಿತ ಪಕ್ಷ ಬಿಜೆಪಿ ಸಹ ಮುಂದಿನ ಬಾರಿ ತಾವೇ ಅಧಿಕಾರಕ್ಕೆ ಬರಲು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಜೊತೆಗೆ ರಾಜ್ಯದ ಜನರಿಗೆ ಹಲವು ಭರವಸೆಗಳನ್ನು ನೀಡುತ್ತಾರೆ. ಇದೀಗ ಸಾರಿಗೆ ಸಚಿವ ಶ್ರೀರಾಮುಲು (B. Shriramulu) ಸಹ ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಉಚಿತ ಬಸ್​ ಪಾಸ್​ (Free Bus Pass)  ನೀಡೋದಾಗಿ ಹೇಳಿದ್ದಾರೆ.

ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ಮಹಿಳೆಯರಿಗೆ ಉಚಿತ ಬಸ್​ ಪಾಸ್​

ಗದಗದಲ್ಲಿ ಮಾತಾಡಿದ ಸಚಿವ ಶ್ರೀರಾಮುಲು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಅಂತ ಹೇಳಿದ್ದಾರೆ. ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪಾಸ್ ಕೊಡುವ ವ್ಯವಸ್ಥೆ ಬಿಜೆಪಿ ಮಾಡುತ್ತದೆ ಎಂದು ಸಚಿವರು ಹೇಳಿಕೆ ನೀಡಿದ್ದು, ಮುಂದಿನ ಚುನಾವಣೆಗೆ ಹೊಸ ತಂತ್ರ ರೂಪಿಸಿದ್ದಂತೆ ಗೋಚರವಾಗುತ್ತಿದೆ. ಕೆಎಸ್​ಆರ್​ಟಿಸಿ ಯಾವುದೇ ಆಸ್ತಿ ಅಡಮಾನವಾಗಿ ಇಟ್ಟಿಲ್ಲ. ಬೆಂಗಳೂರು ಶಾಂತಿ ನಗರ ಕಾಂಪ್ಲೆಕ್ಸ್ ಅಡಮಾನ‌ ಇಡಲಾಗಿದೆ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಕಡೆ 16 ಎಕರೆ ಅಡಮಾನ ಇಡಲಾಗಿದೆ. ಕಲ್ಯಾಣ ಕರ್ನಾಟಕದಲ್ಲೂ ಕೆಲವು ಜಮೀನು ಅಡಮಾನ ಇಡಲಾಗಿದೆ. ಸಂಸ್ಥೆ ಜಾಗ ಅಡಮಾನ ಇಟ್ಟ ಹಣ ಸಿಬ್ಬಂದಿ ಭವಿಷ್ಯ ನಿಧಿಗೆ ನೀಡಲಾಗಿದೆ. ಕಡಿಮೆ ದರದಲ್ಲಿ ಬಡ್ಡಿ ಇದ್ದ ಕಾರಣ ಆಸ್ತಿ ಅಡಮಾನ ಇಡಲಾಗಿದೆ. ಇನ್ನೂ ಒಂದೂವರೆ ತಿಂಗಳ ಸಂಬಳ ಮಾತ್ರ ಬಾಕಿ ಇದೆ. ಒಂದು ವಾರದೊಳಗೆ ಆ ಬಾಕಿ ಸಂಬಳ ನೀಡಿದರೆ ಕ್ಲಿಯರ್ ಆಗುತ್ತೆ ಅಂತ ಸಚಿವರು ತಿಳಿಸಿದರು.

ಇದನ್ನೂ ಓದಿ: Deve Gowda: "ಕಾಂಗ್ರೆಸ್‌ನಿಂದ ಕಹಿ ಅನುಭವ ಆಗಿದೆ, ಮತ್ತೆ ಸಹವಾಸವೇ ಬೇಡ" ಎಂದ ದೇವೇಗೌಡ! ಮಾಜಿ ಪ್ರಧಾನಿ Exclusive ಮಾತು

ಮುಂದಿನ ತಿಂಗಳಿಂದ ಸಿಬ್ಬಂದಿಗೆ ನಿರಂತರವಾಗಿ ಸಂಬಳ ನೀಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ 3 ಸಾವಿರ ಕೋಟಿ ಇಲಾಖೆಗೆ ನೀಡಿದ್ದಾರೆ. 3 ಸಾವಿರ ಕೋಟಿ ಸಂಬಳ ನೀಡಲು ಕೊಟ್ಟಿದ್ದಾರೆ. ಇನ್ನು ಮುಂದೆ ಚಾಲಕರ, ನಿರ್ವಾಹಕರು ಹಾಗೂ ಸಿಬ್ಬಂದಿ ಸಂಬಳಕ್ಕೆ ಕಾಯಬೇಕಿಲ್ಲ. ಅಡಮಾನ ಇಟ್ಟಿದ್ದು ವೈಯಕ್ತಿಕ ಬಳಕೆಗೆ ಅಲ್ಲ. ಸಿಬ್ಬಂದಿ ಭವಿಷ್ಯದ ನಿಧಿಗಾಗಿ ಎಂದು ಸ್ಪಷ್ಟಪಡಿಸಿದ ರಾಮುಲು, ನಮ್ಮ ಇಲಾಖೆ ದಿವಾಳಿ ಆಗಿದೆ ಅಂತ ಹೇಳುತ್ತಾರಲ್ಲ. ಇದು ಲಾಭದಾಯಕ ಮಾಡುವ ಉದ್ದೇಶ ಅಲ್ಲ ಎಂದರು.

ಗಾರ್ಮೆಂಟ್ಸ್  ಮಹಿಳಾ ನೌಕರರಿಗೆ ಬಂಪರ್ ಗಿಫ್ಟ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದ (BMTC) ಗಾರ್ಮೆಂಟ್ಸ್  ನ ಮಹಿಳಾ ನೌಕರರಿಗೆ ಬಂಪರ್ ಗಿಫ್ಟ್ ನೀಡಿದೆ. ಬಿಎಂಟಿಸಿಯಿಂದ ನಗರದ 3 ಲಕ್ಷ ಮಹಿಳಾ ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಉಚಿತ ಬಸ್ ಪಾಸ್ (Free BusPass) ನೀಡಲಾಗುತ್ತಿದೆ.  ವನಿತಾ ಸಂಗಾತಿ ಯೋಜನೆ (Vanita Sangati yojana) ಅಡಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರಿಗೆ (Women Garments Workers) ಪಾಸ್ ವಿತರಣೆ ಮಾಡಲು ಬಿಎಂಟಿಸಿ ಮುಂದಾಗಿದೆ. ಇದು ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ನೀಡೋದಾಗಿ ಹೇಳಿದ್ದರು.  ಅಂದು ಬಜೆಟ್ (Budget) ಮಂಡಿಸಿದ್ದ ಯಡಿಯೂರಪ್ಪನವರು ವನಿತಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್ (Bus Pass) ನೀಡುವುದಾಗಿ ಘೋಷಣೆ ಮಾಡಿದ್ದರು.

ಇದನ್ನೂ ಓದಿ: Flyover: ಬೆಂಗಳೂರು -ತುಮಕೂರು ಹೆದ್ದಾರಿಯ ಮೇಲ್ಸೇತುವೆ ಮೇಲೆ ಮತ್ತೆ ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

ಈ ಮೂಲಕ ಮಹಿಳಾ ಕಾರ್ಮಿಕರ ಬದುಕಿಗೆ ನೆರವಾಗಲು ಹೊರಟಿರುವ ಸರ್ಕಾರ ಮತ್ತು ಬಿಎಂಟಿಸಿ ಮುಂದಾಗಿದೆ. ಕಾರ್ಮಿಕ ಸಂಘಟನೆಗಳು ಸರ್ಕಾರದ ಆದೇಶವನ್ನು ಸ್ವಾಗತಿಸಿದ್ದಾರೆ.
Published by:Pavana HS
First published: