ಹಾಸನದಲ್ಲಿ ಗಣೇಶನ ಮೂರ್ತಿಗಳ ಮೆರವಣಿಗೆ ನಿಷೇಧ: ಜಿಲ್ಲಾಧಿಕಾರಿ ಆರ್. ಗಿರೀಶ್
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಗಣೇಶ ಹಬ್ಬ ಆಚರಣೆಯಲ್ಲಿ ಕೆಲವಾರು ನಿರ್ಬಂಧಗಳನ್ನ ಹಾಸನ ಜಿಲ್ಲಾಡಳಿತ ವಿಧಿಸಿದೆ. ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಇತ್ಯಾದಿ ಸೇರಿದಂತೆ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕೆಂದು ಸೂಚಿಸಿದೆ.
ಹಾಸನ ಜಿಲ್ಲಾಧಿಕಾರಿ ಆರ್ ಗಿರೀಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ
Ganesh Chaturthi 2020: ಹಾಸನ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಹಬ್ಬದ ಆಚರಣೆಗೆ ಅನುಮತಿ ನೀಡಿದ್ದು, ಮೆರವಣಿಗೆ ಮೂಲಕ ಗಣೇಶನ ಮೂರ್ತಿಯನ್ನು ತರುವುದಾಗಲಿ ಅಥವಾ ವಿಸರ್ಜನೆ ಮಾಡುವುದಾಗಲೀ ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಗಣೇಶ ಚತುರ್ಥಿ ಆಚರಣೆ ಕುರಿತು ಮಾತನಾಡಿದ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಜೊತೆಗೆ ಗಣೇಶ ಕೂರಿಸಿರುವ ಸ್ಥಳದಲ್ಲಿ 20 ಜನಕ್ಕಿಂತ ಹೆಚ್ಚಿನ ಜನ ಸೇರಿದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿರುವವರು ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಹಾಗೂ ಸ್ವಯಂ ಸೇವಕರನ್ನು ಇಡುವ ಮೂಲಕ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ಹೇಳಿದರು.
ಒಂದು ಅಥವಾ ಎರಡು ತಿಂಗಳವರೆಗೆ ಗಣೇಶ ಪ್ರತಿಷ್ಠಾಪನೆ ಮಾಡುತ್ತಿದ್ದ ಸಂಘ-ಸಂಸ್ಥೆಗಳು 1 ಅಥವಾ 3 ದಿನಗಳ ಕಾಲ ಗಣೇಶನನ್ನು ಕೂರಿಸಿ ವಿಸರ್ಜಿಸನೆ ಮಾಡಲು ಒಪ್ಪಿಗೆ ನೀಡಿದ್ದು, ಎಲ್ಲರೂ ನಿಯಮಾನುಸಾರ ಗಣೇಶ ಹಬ್ಬವನ್ನು ಅಚರಿಸುವಂತೆ ಅವರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಮಾತನಾಡಿ, ಮದುವೆ ಸಮಾರಂಭಗಳಲ್ಲಿ ಹೆಚ್ಚಿನ ಜನರು ಭಾಗವಹಿಸಿದ್ದಾರೆ. ಈಗಾಗಲೇ ಎಚ್ಚರಿಕೆ ನೀಡಿದ್ದರೂ ಮತ್ತೆ ಮತ್ತೆ ಮರುಕಳಿಸುತ್ತಿರುವ ಕಾರಣ ಕುಟುಂಬದವರು ಮತ್ತು ಕಲ್ಯಾಣ ಮಂಟಪಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಸಾರ್ವಜನಿಕರು ಅನುಸರಿಸುವಂತೆ ಅವರು ಮನವಿ ಮಾಡಿದರು.
ವರದಿ: ಡಿಎಂಜಿ ಹಳ್ಳಿ ಅಶೋಕ್
Published by:Vijayasarthy SN
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ