• Home
  • »
  • News
  • »
  • district
  • »
  • ಎಬಿಎಆರ್​ಕೆ  ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಚಿಕಿತ್ಸೆ ಪಡೆಯಿರಿ; ಸಂಸದ ಜಿ.ಎಂ. ಸಿದ್ದೇಶ್ವರ ಮನವಿ

ಎಬಿಎಆರ್​ಕೆ  ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಚಿಕಿತ್ಸೆ ಪಡೆಯಿರಿ; ಸಂಸದ ಜಿ.ಎಂ. ಸಿದ್ದೇಶ್ವರ ಮನವಿ

ಸಂಸದ ಜಿ.ಎಮ್. ಸಿದ್ದೇಶ್ವರ್ ನಡೆಸಿದ ಕೋವಿಡ್ ಸಭೆ.

ಸಂಸದ ಜಿ.ಎಮ್. ಸಿದ್ದೇಶ್ವರ್ ನಡೆಸಿದ ಕೋವಿಡ್ ಸಭೆ.

ಆಕ್ಸಿಜನ್ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಪ್ರಸ್ತುತ ಜಿಲ್ಲೆಯಲ್ಲಿ ಸ್ವಲ್ಪ ಆಕ್ಸಿಜನ್ ಕೊರತೆ ಇರುವುದು ನಿಜ ಎಂದು ಸಂಸದ ಜಿ.ಎಮ್. ಸಿದ್ಧೇಶ್ವರ್​ ತಿಳಿಸಿದ್ದಾರೆ.

  • Share this:

    ದಾವಣಗೆರೆ: ಕೋವಿಡ್ ರೋಗಿಗಳು ಸರ್ಕಾರಿ ಆಸ್ಪತ್ರೆಯಿಂದ ರೆಫರೆನ್ಸ್ ಪಡೆದು ಎಬಿಎಆರ್​ಕೆ ಯೋಜನೆಯಡಿ ಎಂಪಾನೆಲ್ ಆಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು, ಕೋವಿಡ್ ಸೋಂಕಿತರು ಈ ಯೋಜನೆಯ ಸದುಪಯೋಗ  ಪಡೆಯಬೇಕೆಂದು ಸಂಸದರಾದ ಜಿ.ಎಂ ಸಿದ್ದೇಶ್ವರ ಮನವಿ ಮಾಡಿದ್ದಾರೆ.  ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಬೆಡ್‍ಗಳು , ಲಸಿಕೆ ನಿರ್ವಹಣೆ ಕುರಿತು ಚರ್ಚಿಸಲು ಏರ್ಪಡಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿ, "ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಸರ್ಕಾರ ಜಾರಿಗೊಳಿಸಿರುವ ಎ ಬಿ ಎ ಆರ್  ಕೆ ಯೋಜನೆಯಡಿ ನೋಂದಾಯಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಜನ ಸಾಮಾನ್ಯರು ಪಡೆಯಬೇಕು" ಎಂದಿದ್ದಾರೆ.


    ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಮತ್ತು ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಶೇ.75 ರಷ್ಟು ಬೆಡ್‍ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕೆಂಬ ನಿಯಮವಿದೆ. ಇದುವರೆಗೆ ಎ ಬಿ ಎ ಆರ್ ಕೆ ಯಿಂದ ಖಾಸಗಿ ಆಸ್ಪತ್ರೆಗೆ ರೆಫರೆನ್ಸ್ ಪಡೆದು ಇದುವರೆಗೆ ಕೇವಲ 64 ಜನರು ಮಾತ್ರ ಉಚಿತ ಚಿಕಿತ್ಸೆಯ ಸದುಪಯೋಗ ಪಡೆದಿದ್ದಾರೆ.


    ಸಿ.ಜಿ. ಆಸ್ಪತ್ರೆ ಹೊರತುಪಡಿಸಿ ಖಾಸಗಿಯಲ್ಲಿ 1535 ಬೆಡ್‍ಗಳು ರೋಗಿಗಳಿಗೆ ನಿಗದಿ ಆಗಿದ್ದು ಬಹಳಷ್ಟು ಜನರು ಈ ಯೋಜನೆಯ ಬಳಕೆ ಮಾಡುತ್ತಿಲ್ಲ. ಆದ್ದರಿಂದ  ಸೋಂಕಿತರು ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಯಲ್ಲಿ ರೆಫರೆನ್ಸ್ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಿದ ವೆಚ್ಚ ಭರಿಸುತ್ತದೆ ಎಂದು ಮಾಹಿತಿ ನೀಡಿದರು.


    ಎ ಬಿ ಎ ಆರ್  ಕೆ ಅಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರೆಫರೆನ್ಸ್ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ಮಾಡುವ ವೈದ್ಯರು ಸೇರಿದಂತೆ 8 ಜನರ ಹೆಲ್ಪ್ ಡೆಸ್ಕ್ ತಂಡ ರಚಿಸಲಾಗಿದೆ. ಇವರನ್ನು ಭೇಟಿ ಮಾಡಿ ಖಾಸಗಿ ಆಸ್ಪತ್ರೆ ದಾಖಲಾತಿಗೆ ಮುನ್ನ ರೆಫರೆನ್ಸ್ ಪಡೆಯಬೇಕು ಎಂದರು.


    ಸಿಸಿಸಿ ಐಸೊಲೇಷನ್  ಪ್ರತಿಷ್ಟಿತ ಬಡಾವಣೆಗಳಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರತ್ಯೇಕ ಕೊಠಡಿ ಇತರೆ ವ್ಯವಸ್ಥೆ ಇದೆ ಎಂದು ಮನೆಯಲ್ಲಿಯೇ ಐಸೊಲೇಟ್ ಆಗುತ್ತಿದ್ದಾರೆ. ಆದರೆ ಸಮರ್ಪಕವಾಗಿ ಐಸೊಲೇಷನ್ ನಿಯಮ ಪಾಲಿಸದೇ ಮನೆಯವರೆಲ್ಲ ಪಾಸಿಟಿವ್ ಆಗುತ್ತಿರುವುದು ಕಂಡುಬರುತ್ತಿದೆ. ಆದ ಕಾರಣ ನಗರದ ತರಳಬಾಳು ಶ್ರೀಗಳು ಎಲ್ಲ ರೀತಿಯ ವ್ಯವಸ್ಥೆ ಇರುವ ತರಳಬಾಳು ಬಾಲಕಿಯರ ಹಾಸ್ಟೆಲ್‍ನ್ನು ಕೋವಿಡ್ ಆರೈಕೆ ಕೇಂದ್ರವಾಗಿಸಲು ನೀಡಿದ್ದು ಇಲ್ಲಿ 90 ಜನರಿಗೆ ಅವಕಾಶವಿದೆ. ಇಲ್ಲಿ ಐಸೋಲೇಟ್ ಆಗುವ ಮೂಲಕ ಕೋವಿಡ್ ಸರಪಳಿಯನ್ನು ತುಂಡರಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.


    ಅಲ್ಲದೇ ಆಕ್ಸಿಜನ್ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಪ್ರಸ್ತುತ ಜಿಲ್ಲೆಯಲ್ಲಿ ಸ್ವಲ್ಪ ಆಕ್ಸಿಜನ್ ಕೊರತೆ ಇರುವುದು ನಿಜ. ಪ್ರಸ್ತುತ 14 ಕೆ ಎಲ್ ಆಕ್ಸಿಜನ್ ಸರಬರಾಜಾಗುತ್ತಿದ್ದು 23 ಕೆಎಲ್‍ಗೆ ಒತ್ತಾಯ ಮಾಡಲಾಗುತ್ತಿದೆ. ಆಕ್ಸಿಜನ್ ಸಮಸ್ಯೆಯನ್ನು ಪರಿಹರಿಸಲು ಕೇಂದ್ರದ ಸಚಿವರು ಹಾಗೂ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ ಎಂದರು.


    ಇದನ್ನೂ ಓದಿ: ಆತ್ಮೀಯ ಪ್ರಧಾನಿಗಳೇ; ನರೇಂದ್ರ ಮೋದಿಗೆ 9 ಅಂಶಗಳೊಂದಿಗೆ ಜಂಟಿ ಪತ್ರ ಬರೆದ ವಿರೋಧ ಪಕ್ಷಗಳು


    ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ತಮ್ಮಲ್ಲಿ ರೆಮಿಡಿಸಿವಿರ್ ಲಸಿಕೆ ಇಲ್ಲ. ಜಿಲ್ಲಾಧಿಕಾರಿಗಳ ಬಳಿ ಹೋಗಿ ಕೇಳಿದರೆ ನೀಡುತ್ತಾರೆಂದು ಕಳುಹಿಸಿದ್ದಾರೆ. ಹಾಗೂ ಆಕ್ಸಿಜನ್ ಇಲ್ಲ. ನೀವೇ ವ್ಯವಸ್ಥೆ ಮಾಡಿದರೆ ಚಿಕಿತ್ಸೆ ನೀಡುತ್ತೇವೆಂದು ರೋಗಿಗಳ ಕಡೆಯವರಿಗೇ ವ್ಯವಸ್ಥೆ ಮಾಡಲು ತಿಳಿಸಿರುವುದು ಗಮನಕ್ಕೆ ಬಂದಿದೆ.


    ಹೀಗೆ ರೋಗಿಗಳ ಬಳಿಯೇ ವ್ಯವಸ್ಥೆ ಮಾಡಿಸುವುದಾದರೆ ಖಾಸಗಿ ಆಸ್ಪತ್ರೆಗಳ ಪಾತ್ರವೇನು? ಇನ್ನು ಮುಂದೆ ಈ ರೀತಿ ಮಾಡುವುದು ನನ್ನ ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ ಅವರು ಆ ರೀತಿಯ ಅವಶ್ಯಕತೆಗಳನ್ನು ಖುದ್ದಾಗಿ ಜಿಲ್ಲಾಧಿಕಾರಿಗಳು ಅಥವಾ ಜನಪ್ರತಿನಿಧಿಗಳ ಬಳಿ ಕೇಳಿ ಪರಿಹರಿಸಿಕೊಳ್ಳಬೇಕೆಂದು ಖಾಸಗಿ ಆಸ್ಪತ್ರೆಯವರಿಗೆ ಎಚ್ಚರಿಕೆ ನೀಡಲಾಯಿತು.

    Published by:MAshok Kumar
    First published: