ಬಾಗಲಕೋಟೆ ಘಟಪ್ರಭಾ ನದಿ ತೀರದಲ್ಲಿ ಪ್ರವಾಹ ಭೀತಿ; ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ಸೇತುವೆ ಮುಳುಗಡೆ!

ಬಾಗಲಕೋಟೆ ಜಿಲ್ಲೆಯಾದ್ಯಂತ ನಾಲ್ಕೈದು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಆಗಾಗ ತುಂತುರು ಮಳೆ ಆಗುತ್ತಿರುವುದರಿಂದ  ಕೃಷಿ ಚಟುವಟಿಕೆಗೆ ಅಡ್ಡಿಯಾಗುತ್ತಿದೆ.

ಘಟಪ್ರಭಾ ನದಿ ಪ್ರವಾಹದಿಂದ ಮುಳುಗಿರುವ ಸೇತುವೆ.

ಘಟಪ್ರಭಾ ನದಿ ಪ್ರವಾಹದಿಂದ ಮುಳುಗಿರುವ ಸೇತುವೆ.

  • Share this:
ಬಾಗಲಕೋಟೆ (ಜು.09); ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದಿಂದ 9 ಸಾವಿರ ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಹರಿಬಿಡಲಾಗಿದ್ದು, ನದಿಯಲ್ಲಿ ಒಳಹರಿವು ಹೆಚ್ಚಳವಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದ ಸಂಪರ್ಕ ಸೇತುವೆ ಮುಳುಗಡೆಯಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಹಾಲಿಂಗಪುರ, ಯಾದವಾಡ ಮಾರ್ಗ ಸಂಪರ್ಕಿಸುವ ಮಿರ್ಜಿ ಗ್ರಾಮದ ಸೇತುವೆ ಸಂಪರ್ಕ ಕಡಿತವಾದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ  ಬಂದ್ ಆಗಿದೆ‌ .ಮುಧೋಳ ತಾಲೂಕಿನ ಘಟಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಇದೀಗ ಪ್ರವಾಹ ಭೀತಿ ಎದುರಾಗಿದೆ.

ಇದನ್ನು ಓದಿ: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ : ಒಂದೇ ದಿನ 17 ಸಾವು, 2,228 ಜನರಿಗೆ ಸೋಂಕು ದೃಢ

ಇನ್ನು ಬಾಗಲಕೋಟೆ ಜಿಲ್ಲೆಯಾದ್ಯಂತ ನಾಲ್ಕೈದು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಮಳೆಯಾಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಆಗಾಗ ತುಂತುರು ಮಳೆ ಆಗುತ್ತಿರುವುದರಿಂದ  ಕೃಷಿ ಚಟುವಟಿಕೆಗೆ ಅಡ್ಡಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹ ಭೀತಿ ಹೆಚ್ಚಾಗುತ್ತಿದೆ.
Published by:HR Ramesh
First published: