Farmers: ಪ್ರತೀ ವರ್ಷ ಸಾಂಪ್ರದಾಯಿಕ ಬೆಳೆ ಬೆಳೆದು ಕೈ ಸುಟ್ಟುಕೊಳ್ತಿದ್ದ ರೈತರಿಗೆ ಗುಡ್ ನ್ಯೂಸ್..!

ಜಿಲ್ಲೆಯಲ್ಲಿ ಹೆಚ್ಚಿನ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿದೆ. ಈ ಬೆಳೆಯ ಅಂತರ ಬೆಳೆಯಾಗಿ ಅಥವಾ ಪ್ರತ್ಯೇಕ ಬೆಳೆಯಾಗಿ ಸೋಯಾ, ತೊಗರಿ, ಶೇಂಗಾ, ಸೂರ್ಯಕಾಂತಿಯಂತಹ ಎಣ್ಣೆ ಹಾಗೂ ದ್ವಿದಳ ಧಾನ್ಯಗಳನ್ನು ಬೆಳದರೆ ನಿಶ್ಚಿತವಾದ ಆದಾಯ ಬರಲಿದೆ.

ಅನ್ನದಾತ

ಅನ್ನದಾತ

  • Share this:
    ಹಾವೇರಿ(ಜೂ. 05): ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರೈತರಿಗೆ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇದ್ದಾವೆ. ಒಮ್ಮೊ ಪ್ರಕೃತಿಯ ಮುನಿಸಿ, ಮತ್ತೊಮ್ಮೆ ಬೆಲೆ ಕುಸಿತ ಹೀಗೆ ಏನಾದರೂ ಒಂದು ತೊಂದರೆಗೆ ರೈತರು ಒಳಗಾಗಿ ಸಮಸ್ಯೆಯಲ್ಲಿ ಸಿಲುಕುತ್ತಿದ್ದಾರೆ. ಹೌದು, ಜಿಲ್ಲೆಯಲ್ಲಿನ ಬಹುತೇಕ ರೈತರು ಹತ್ತಿ, ಮೆಕ್ಕೆಜೋಳದಂತಹ ಸಾಂಪ್ರದಾಯಿಕ ಬೆಳೆಗಳನ್ನೆ ಬೆಳೆಯುತ್ತಿದ್ದಾರೆ. ಪ್ರತಿವರ್ಷವೂ ಜಿಲ್ಲೆಯಲ್ಲಿನ ಹೆಚ್ಚಿನ ಸಂಖ್ಯೆಯ ರೈತರು ಎರಡು ಬೆಳೆಗಳನ್ನು ಪ್ರಮುಖ ಬೆಳೆಯಾಗಿ ಬೆಳೆಯುತ್ತಿದ್ದಾರೆ. ಆದರೆ ಹತ್ತಿ ಮತ್ತು ಮೆಕ್ಕೆಜೋಳ ಬೆಳೆದ ರೈತರಿಗೆ ಸೂಕ್ತ‌ ಬೆಲೆ ಸಿಗದಿದ್ದರೆ ಅಥವಾ ಬೆಳೆ ಹಾನಿಯಾಗಿ ತೊಂದರೆಗೆ ಸಿಲುಕುತ್ತಿದ್ದರು. ಒಂದೇ ಬೆಳೆ ಬೆಳೆದು ಕೈಸುಟ್ಟುಕೊಳ್ಳುತ್ತಿದ್ದ ಜಿಲ್ಲೆಯ ರೈತರಿಗೆ ಈಗ ಸರಕಾರ ಗುಡ್ ನ್ಯೂಸ್ ನೀಡಿದೆ.

    ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರಧಾನಮಂತ್ರಿಗಳು ರೂಪಿಸಿರುವ ಎಣ್ಣೆ ಹಾಗೂ ಬೇಳೆ ಕಾಳು ಬೆಳೆಗಳ ಬಹುಬೆಳೆ ಯೋಜನೆಗೆ ಹಾವೇರಿ ಜಿಲ್ಲೆಯನ್ನು ಕರ್ನಾಟಕ ರಾಜ್ಯದಲ್ಲಿ ಪೈಲೆಟ್ ಜಿಲ್ಲೆಯಾಗಿ ಆಯ್ಕೆ ಮಾಡಲಾಗಿದೆ. ಈ ಯೋಜನೆಯಲ್ಲಿ ರೈತರು ಬಹುಬೆಳೆ ಪದ್ಧತಿಯನ್ನು ಅನುಸರಿಸಿದರೆ ಒಂದಲ್ಲ ಒಂದು ಬೆಳೆ ರೈತನ ಕೈಹಿಡಿದು ನಿಶ್ಚಿತ ಆದಾಯದ ಜೊತೆಗೆ ರೈತರ ಆದಾಯ ದ್ವಿಗುಣಗೊಳ್ಳುತ್ತದೆ. ರೈತರ ಬದುಕು ಸುಧಾರಿಸುತ್ತದೆ ಎಂಬ ಆಶಯದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ.

    ಇದನ್ನೂ ಓದಿ: Morning Digest: ರಾಜ್ಯದಲ್ಲಿ ಇನ್ನೂ 2 ದಿನ ಮಳೆ, ಚಿನ್ನದ ಬೆಲೆಯಲ್ಲಿ ಇಳಿಕೆ; ಇಂದಿನ ಪ್ರಮುಖ ಸುದ್ದಿಗಳಿವು

    ಜಿಲ್ಲೆಯಲ್ಲಿ ಹೆಚ್ಚಿನ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿದೆ. ಈ ಬೆಳೆಯ ಅಂತರ ಬೆಳೆಯಾಗಿ ಅಥವಾ ಪ್ರತ್ಯೇಕ ಬೆಳೆಯಾಗಿ ಸೋಯಾ, ತೊಗರಿ, ಶೇಂಗಾ, ಸೂರ್ಯಕಾಂತಿಯಂತಹ ಎಣ್ಣೆ ಹಾಗೂ ದ್ವಿದಳ ಧಾನ್ಯಗಳನ್ನು ಬೆಳದರೆ ನಿಶ್ಚಿತವಾದ ಆದಾಯ ಬರಲಿದೆ. ಆದರೆ ಬಹುತೇಕ ರೈತರು ಇಂತಹ ಪದ್ದತಿ‌ ಅನುಸರಿಸದೆ ಹತ್ತಿ ಮತ್ತು ಮೆಕ್ಕೆಜೋಳವನ್ನೆ ಹೆಚ್ಚಾಗಿ ಬೆಳೆಯುತ್ತಿದ್ದರು. ಹೀಗಾಗಿ ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಈ ಯೋಜನೆಯನ್ನು ಪೈಲಟ್ ಯೋಜನೆಯಾಗಿ ಆಯ್ಕೆ ಮಾಡಲಾಗಿದೆ.

    ಯೋಜನೆ ಅಡಿಯಲ್ಲಿ ಜಿಲ್ಲೆಗೆ 2441 ಕ್ವಿಂಟಲ್ ದ್ವಿದಳ ಧಾನ್ಯ ಬೀಜಗಳು ಪೂರೈಕೆಯಾಗಿವೆ. ಜಿಲ್ಲೆಗೆ ರೂ.2,44,44,240ಗಳ ಮೊತ್ತದ   33,730 ದ್ವಿದಳ ಧಾನ್ಯಗಳ ಬೀಜಗಳ ಕಿಟ್ ಗಳು ಈಗಾಗಲೆ ಪೂರೈಕೆ ಆಗಿವೆ. ಅಂದಾಜು ಆರು ನೂರು ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬೆಳೆಯಬಹುದಾಗಿದೆ.‌ ಎಲ್ಲ ತಾಲೂಕಾ ರೈತ ಸಂಪರ್ಕ ಕೇಂದ್ರಗಳಲ್ಲಿ ದ್ವಿದಳ ಧಾನ್ಯ ಹಾಗೂ ಎಣ್ಣೆ ಕಾಳುಗಳ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ.

    ಇದನ್ನೂ ಓದಿ: World Environment Day: ಇಂದು ಈ ಸಂಸದರು ಕೇವಲ ಸಸ್ಯಾಹಾರ ಮಾತ್ರ ಸೇವನೆ ಮಾಡ್ತಾರೆ; ಯಾಕೆ ಗೊತ್ತಾ?

    ಈ ಯೋಜನೆ ಕುರಿತಂತೆ ದೇಶದಾದ್ಯಂತ ರೈತರೊಂದಿಗೆ ಕೇಂದ್ರದ ಕೃಷಿ ಸಚಿವರಾದ ನರೇಂದ್ರಸಿಂಗ್ ತೋಮರ್ ಮತ್ತು ಕೈಲಾಸ್ ಚೌಧರಿ ನಡೆಸಿದ ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಪ್ರಗತಿಪರ ರೈತರಾದ ಚಂದ್ರಕಾಂತ ಸಂಗೂರ ಎಂಬುವರು ಭಾಗವಹಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಬಹು ಬೆಳೆ ಯೋಜನೆಯಿಂದ ಒಂದೇ ಬೆಳೆ ಬೆಳೆದು ಸಂಕಷ್ಟಕ್ಕೆ ಸಿಲುಕುತ್ತಿದ್ದ ರೈತರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಈಗಾಗಲೆ ಜಿಲ್ಲೆಯಲ್ಲಿ ಯೋಜನೆ ಜಾರಿಗೆ ಬೇಕಾದ ಬಿತ್ತನೆ ಬೀಜ ಬಂದಿದ್ದು, ರೈತರಿಗೆ ವಿತರಣೆ ಮಾಡಲಾಗುತ್ತಿದೆ.

    ಇನ್ನು ಈ ಕುರಿತು ಮಾತನಾಡಿರುವ ಕೃಷಿ ಸಚಿವ ಬಿ.ಸಿ ಪಾಟೀಲ, ನಮ್ಮ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ರೈತರಿಗೆ ತೊಂದರೆಗೆ ಒಳಗಾಗಬಾರದು ಎನ್ನುವ ನಿಟ್ಟಿನಲ್ಲಿ ಮಿಶ್ರ ಬೆಳೆಗೆ ಪ್ರೋತ್ಸಾಹಿಸುವ ಹಾಗೂ ಯಾವುದೋ ಒಂದು ಬೆಳೆ ನಾಶವಾದಲ್ಲಿ ಇನ್ನೊಂದು ಬೆಳೆ ರೈತರನ್ನು ಕೈಹಿಡಿದು  ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುತ್ತದೆ.

    ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮಂಜೂರಾದ ಬಹು ಬೆಳೆ ಯೋಜನೆಯನ್ನು ಪ್ರಾಯೋಗಿಕವಾಗಿ ಹಾವೇರಿ ಜಿಲ್ಲೆಯಲ್ಲಿ ಆನುಷ್ಠಾನ ಮಾಡಲಾಗುತ್ತಿದೆ. ನಮ್ಮ ಜಿಲ್ಲೆಯನ್ನು ಬಹು ಬೆಳೆ ಯೋಜನೆಗೆ ಆಯ್ಕೆ ಮಾಡಿದ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರದ ಕೃಷಿ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

    • ವರದಿ: ಮಂಜುನಾಥ್ ತಳವಾರ

    Published by:Latha CG
    First published: