• Home
  • »
  • News
  • »
  • district
  • »
  • ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ: ಡಿ.ಕೆ. ಸುರೇಶ್

ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ: ಡಿ.ಕೆ. ಸುರೇಶ್

ಸಂಸದ ಡಿ.ಕೆ. ಸುರೇಶ್.

ಸಂಸದ ಡಿ.ಕೆ. ಸುರೇಶ್.

ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಇದರಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ ಎಂದು ಸಂಸದ ಡಿ.ಕೆ. ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Share this:

ಚನ್ನಪಟ್ಟಣ (ಜೂನ್ 14): ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಸಂಕಷ್ಟ ಮತ್ತು ಲಾಕ್​ಡೌನ್ ಸಮಸ್ಯೆಯ ನಡುವೆಯೂ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಹೆಚ್ಚಿಸುತ್ತಲೇ ಇದೆ. ಪರಿಣಾಮ ದಿನೋಪಯೋಗಿ ವಸ್ತುಗಳ ಬೆಲೆಯೂ ಏರುತ್ತಲೇ ಇದ್ದು, ಜನ ಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸತತ ವಾಗ್ದಾಳಿ ನಡೆಸುತ್ತಲೇ ಇದೆ. ಈ ನಡುವೆ ಇಂದು ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ ಡಿ.ಕೆ. ಸುರೇಶ್, "ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರುತ್ತಲೇ ಇದೆ. ಇದರಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ, ಕರೆಂಟ್ ಬಿಲ್, ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಮಾಡುವ ಯೋಗ್ಯತೆ ಸರ್ಕಾರಕ್ಕೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸಂಸದ ಡಿ.ಕೆ. ಸುರೇಶ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಹಲವೆಡೆ ಆಶಾಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಫುಡ್ ಕಿಟ್ ವಿತರಣೆ ಮಾಡಿದ ಡಿ.ಕೆ. ಸುರೇಶ್ ಮಾತನಾಡಿ ರಾಜ್ಯ ಸರ್ಕಾರದ ವಿರುದ್ಧ ತೀವ್ರತರವಾಗಿ ಕಿಡಿಕಾರಿದರು.


"ಈ ಸರ್ಕಾರಕ್ಕೆ ಕರೆಂಟ್ ಬಿಲ್ ಕಡಿಮೆ ಮಾಡುವ ಯೋಗ್ಯತೆ ಇಲ್ಲ. ಪೆಟ್ರೋಲ್, ಡೀಸೆಲ್‌, ಪ್ರಾಪರ್ಟಿ ಟ್ಯಾಕ್ಸ್ ಕಡಿತ ಮಾಡುವ ಯೋಗ್ಯತೆ ಇಲ್ಲ.‌ ಆದರೆ, ಇವರು ಖಾಸಗಿ ಶಾಲೆಗಳ ಮೇಲೆ ಒತ್ತಡ ಹಾಕ್ತಿದ್ದಾರೆ. ಇವರ ಬಳಿ ಇರುವುದನ್ನ ಕಡಿತ ಮಾಡಲು ಇವರಿಗೆ ಆಗ್ತಿಲ್ಲ. ಆದರೆ ಖಾಸಗಿಯವರಿಗೆ ಒಂದು ನ್ಯಾಯ, ಸರ್ಕಾರಕ್ಕೆ ಒಂದು ನ್ಯಾಯ" ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: TamilNadu Politics| ತಮಿಳುನಾಡು ರಾಜಕಾರಣಕ್ಕೆ ಚಿನ್ನಮ್ಮ ಎಂಟ್ರಿ; ಚುನಾವಣೆ ಬೆನ್ನಿಗೆ AIADMK ಯಲ್ಲಿ ಬಂಡಾಯದ ಬಿರುಗಾಳಿ


ಖಾಸಗಿ ಶಾಲಾ ಶುಲ್ಕ ಪಾವತಿ ವಿಚಾರವಾಗಿ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, "ರಾಜ್ಯ ಸರ್ಕಾರ ಮೊದಲಿನಿಂದಲೂ ಈ ಬಗ್ಗೆ ಗೊಂದಲದಲ್ಲಿಯೇ ಇದೇ. ಸಂಪೂರ್ಣ ಶಿಕ್ಷಣ ವ್ಯವಸ್ಥೆಯನ್ನೇ ಹಾಳು ಮಾಡಿದೆ. ಇನ್ನು ರಾಜ್ಯ ಸರ್ಕಾರ ಲಾಕ್​ಡೌನ್ ಸಡಿಲಿಕೆಯಲ್ಲಿ ಆತುರದ ನಿರ್ಧಾರ ಮಾಡಿದೆ. ಈಗಲೂ ಸಹ ಕೊರೋನಾ ಕೇಸ್ ಗಳು ಇವೆ. ಗ್ರಾಮಾಂತರ ಭಾಗದಲ್ಲಿ ಸೋಂಕು ಈಗಲೂ ಇದೇ. ಜೊತೆಗೆ ಬೆಂಗಳೂರಿನ ಕಡೆಗೆ ಉದ್ಯೋಗಕ್ಕಾಗಿ ಹೋಗುವ ಜನರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಇವರು ಟೆಸ್ಟಿಂಗ್ ಕಡಿಮೆ ಮಾಡಿ ಕೇಸ್ ಇಲ್ಲ ಎನ್ನುತ್ತಿದ್ದಾರೆ. ಪಾಸಿಟಿವ್ ಕೇಸ್ ಕಡಿಮೆ ತೋರಿಸಲು ಟೆಸ್ಟಿಂಗ್ ಕಡಿತ ಮಾಡಿದ್ದಾರೆ.


ಇದನ್ನೂ ಓದಿ: Crime News| ನಾಗ್ಪುರದ ಶಾಲೆಯ ಶೌಯದಲ್ಲಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ


ಆದರೆ ಇಂತಹ ಸಮಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಚಿಂತಿಸಬೇಕಿತ್ತು‌. ಅಗತ್ಯ ವಸ್ತುಗಳ ಮಾರಾಟ ಮಾಡಲಿ, ಆದರೆ ಇದರಿಂದಾಗಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೇ.ಹಾಗಾಗಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸಲಿ" ಎಂದು ತಿಳಿಸಿದ್ದಾರೆ.


ಆಶಾಕಾರ್ಯಕರ್ತೆಯರ ಬಗ್ಗೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ:


ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡಿದೆ. ಈ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವವನ್ನು ಲೆಕ್ಕಿಸದೇ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ. ಆದರೆ ಅವರಿಗೆ ಸರಿಯಾದ ವೇತನ‌ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಇನ್ನು ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ, ನಮ್ಮ ಆಡಳಿತದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಯರಿಗೆ ಸೂಕ್ತ ವೇತನವನ್ನ ಕೊಡಲಾಗುತ್ತೆ ಎಂದು ಸಂಸದ ಡಿ.ಜೆ.ಸುರೇಶ್ ‌ತಿಳಿಸಿದರು. ಜೊತೆಗೆ ಕೊರೋನಾ ಕಷ್ಟಕಾಲದಲ್ಲಿ ನಿಮ್ಮ ಸಹಾಯಕ್ಕೆ ಸದಾ ನಾವಿದ್ದೇವೆಂದು ಭರವಸೆ ನೀಡಿದರು.


(ವರದಿ : ಎ.ಟಿ.ವೆಂಕಟೇಶ್)

Published by:MAshok Kumar
First published: