ನಾಲ್ಕು ಜನ ಸಚಿವರ ತವರು ಜಿಲ್ಲೆಯಲ್ಲಿ ವೈದ್ಯರ ಕೊರತೆ ; ಸರ್ಕಾರದ ನಿರ್ಲಕ್ಷ್ಯಕ್ಕೆ ಅನಿರ್ವಾರ್ಯವಾಗಿ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಬಡ ಜನ

ಬಡ ರೋಗಿಗಳಿಗೆ ಆಪತ್ಬಾಂದವಾಗಬೇಕಿದ್ದ ಸರಕಾರಿ ಆಸ್ಪತ್ರೆಗಳು ತಜ್ಞ ವೈದ್ಯರು ಇಲ್ಲದ ಕಾರಣ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೋರೆ ಹೋಗುವುದು ಅನಿವಾರ್ಯತೆಯಾಗಿದೆ.

news18-kannada
Updated:June 29, 2020, 4:25 PM IST
ನಾಲ್ಕು ಜನ ಸಚಿವರ ತವರು ಜಿಲ್ಲೆಯಲ್ಲಿ ವೈದ್ಯರ ಕೊರತೆ ; ಸರ್ಕಾರದ ನಿರ್ಲಕ್ಷ್ಯಕ್ಕೆ ಅನಿರ್ವಾರ್ಯವಾಗಿ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದ ಬಡ ಜನ
ಸದಲಗಾ ಪ್ರಾಥಮಿಕ ಆರೋಗ್ಯ ಕೇಂದ್ರ
  • Share this:
ಚಿಕ್ಕೋಡಿ(ಜೂ.29): ಗಡಿ ಭಾಗದಲ್ಲಿ ಕಿಲ್ಲರ ಕೊರೋನಾ ತಾಂಡವಾಡುತ್ತಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಸರ್ಕಾರದ ನಾಲ್ಕು ಜನ ಪ್ರಭಾವಿ ಸಚಿವರ ತವರು ಜಿಲ್ಲೆಯಲ್ಲಿಯೇ ತಜ್ಞ ವೈದ್ಯರ ಕೊರತೆ ಎದುರಾಗಿದ್ದು, ಇದರಿಂದ ಸಾರ್ವಜನಿಕ ಆಸ್ಪತ್ರೆಗಳು ಬಣಗೂಡುತ್ತಿವೆ. ಸೂಕ್ತ ಚಿಕಿತ್ಸೆಗಾಗಿ ಗ್ರಾಮೀಣ ಪ್ರದೇಶದ ಜನ ಪರದಾಡುವಂತಾಗಿದೆ.

ಚಿಕ್ಕೋಡಿ ಅಪರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ ಮತ್ತು ಹುಕ್ಕೇರಿ ತಾಲೂಕುಗಳನ್ನು ಒಳಗೊಂಡ ನಿಯೋಜಿತ ಚಿಕ್ಕೋಡಿ ಜಿಲ್ಲೆಯಲ್ಲಿ 52 ಜನ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಬಡ ರೋಗಿಗಳಿಗೆ ಆಪತ್ಬಾಂದವಾಗಬೇಕಿದ್ದ ಸರಕಾರಿ ಆಸ್ಪತ್ರೆಗಳು ತಜ್ಞ ವೈದ್ಯರು ಇಲ್ಲದ ಕಾರಣ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳ ಮೋರೆ ಹೋಗುವುದು ಅನಿವಾರ್ಯತೆಯಾಗಿದೆ.

ಚಿಕ್ಕೋಡಿ ವ್ಯಾಪ್ತಿಯ ತಾಲೂಕುಗಳು ನೆರೆಯ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಮ್ಮೆ ನೋಡಿದರೇ ತಲೆ ತಿರುಗುತ್ತಿದೆ. ಇಂತಹ ನೆರೆ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಚಿಕ್ಕೋಡಿ ವ್ಯಾಪ್ತಿಯ ಸರಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿಲ್ಲದೆ ಇರುವುದು ದುರದೃಷ್ಟಕರವಾಗಿದೆ.
ವೈದ್ಯರ ಕೊರತೆ ಇದೆ ಎಂಬುದು ಸರ್ಕಾರದ ಗಮನಕ್ಕೆ ಇದೆಯೋ ಇಲ್ಲದೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಇಡೀ ತಾಲೂಕಿನಲ್ಲಿ ಇರುವ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು 39 ಜನ ವೈದ್ಯರ ಮಂಜೂರಾತಿದೆ. ಇದರಲ್ಲಿ 11 ಜನ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಿದರೇ 14 ಜನ ವೈದ್ಯರ ಕೊರತೆ ಇದೆ. ಅಥಣಿ ತಾಲೂಕಿನಲ್ಲಿ 38 ಜನ ವೈದ್ಯರ ಹುದ್ದೆ ಮಂಜೂರಾತಿಯಲ್ಲಿ 16 ಜನ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, 4 ಜನ ವೈದ್ಯರ ಹುದ್ದೆ ಖಾಲಿ ಇದೆ.

ಗೋಕಾಕ ತಾಲೂಕಿನಲ್ಲಿ 48 ಹುದ್ದೆಗಳ ಮಂಜೂರಾತಿಯಲ್ಲಿ 17 ಜನ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದು, 14 ಹುದ್ದೆಗಳು ಖಾಲಿ ಇದೆ. ಹುಕ್ಕೇರಿ ತಾಲೂಕಿನ 39 ಹುದ್ದೆಗಳ ಪೈಕಿ 7 ಜನ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದು, 6 ಹುದ್ದೆ ಖಾಲಿ ಇವೆ. ರಾಯಬಾಗ ತಾಲೂಕಿನಲ್ಲಿ 28 ವೈದ್ಯರ ಹುದ್ದೆಯಲ್ಲಿ ಇಬ್ಬರು ಗುತ್ತಿಗೆಯಲ್ಲಿ ಕೆಲಸ ಮಾಡಿ 14 ಹುದ್ದೆಗಳು ಖಾಲಿ ಇವೆ.

ಓರ್ವ ವೈದ್ಯ ಎರಡ್ಮೂರು ಆಸ್ಪತ್ರೆಯಲ್ಲಿ ಕರ್ತವ್ಯ:ನಿಯೋಜಿತ ಚಿಕ್ಕೋಡಿ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಇರುವುದರಿಂದ ಒಬ್ಬೊಬ್ಬರು ವೈದ್ಯರು ಎರಡ್ಮೂರು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ವಾರದಲ್ಲಿ ಒಂದೊಂದು ಆಸ್ಪತ್ರೆಯಲ್ಲಿ ಮೂರು ಮೂರು ದಿನಗಳ ಕರ್ತವ್ಯ ನಿರ್ವಹಿಸುವಂತಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ವೈದ್ಯಕೀಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಗ್ರಾಮೀನ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ : ಬೆಳಗಾವಿ ರಾಜಕೀಯ: ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್​​ ಜಾರಕಿಹೊಳಿ ನಡುವೆ ಮತ್ತೆ ಕೋಲ್ಡ್​ ವಾರ್​​

ಚಿಕ್ಕೋಡಿ ಜಿಲ್ಲೆಯ ವ್ಯಾಪ್ತಿಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಶ್ರೀಮಂತ ಪಾಟೀಲ ತವರು ಜಿಲ್ಲೆಯಲ್ಲಿ ತಜ್ಞ ವೈದ್ಯರು ಇಲ್ಲದೇ ಇರುವುದರಿಂದ ಸರಕಾರಿ ಆಸ್ಪತ್ರೆಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿವೆ.

ಬಡ ಜನರ ಆರೋಗ್ಯದ ಕಡೆ ಗಮನ ಹರಿಸಿ ಸುಸಜ್ಜಿತ ಆಸ್ಪತ್ರೆಗಳಲ್ಲಿ ವೈದ್ಯರನ್ನು ನೇಮಕ ಮಾಡಬೇಕು ಎಂಬುದು ಗಡಿ ಜನರ ಒತ್ತಾಯವಾಗಿದೆ.
First published: June 29, 2020, 4:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading