ಗ್ರಾಮ ಪಂಚಾಯತ್ ಚುನಾವಣೆ; ರೌಡಿ ಶೀಟರ್ಗಳಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್
ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ರೌಡಿ ಶೀಟರ್ಗಳು ಯಾವುದೇ ಕಾರಣಕ್ಕೂ ಬಾಲ ಬಿಚ್ಚುವಂತಿಲ್ಲ. ಒಂದು ವೇಳೆ ನೀವು ನಿಮ್ಮ ಚಾಳಿ ಮುಂದುವರಿಸಿದರೆ ಮುಲಾಜಿಲ್ಲದೆ ಮಟ್ಟ ಹಾಕಲಾಗುವುದು ಎಂದು ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಹಾದೇವಪ್ಪ ಎಚ್ಚರಿಕೆ ನೀಡಿದ್ದಾರೆ.
ಆನೇಕಲ್; ಗ್ರಾಮ ಪಂಚಾಯಿತಿ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜಾಗ್ರತಾ ಕ್ರಮವಾಗಿ ಬೆಂಗಳೂರು ಹೊರವಲಯ ಆನೇಕಲ್ ಉಪ ವಿಭಾಗದ ಪೊಲೀಸರು ರೌಡಿ ಶೀಟರ್ಗಳ ಪೆರೇಡ್ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಉಳಿದೆಲ್ಲ ಚುನಾವಣೆಗಿಂತ ಹೆಚ್ಚು ಜಿದ್ದಾಜಿದ್ದಿನಿಂದ ಕೂಡಿರುತ್ತದೆ. ಹಾಗಾಗಿ ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಉಂಟಾಗದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಇಂದು ಆನೇಕಲ್ ಉಪವಿಭಾಗದ ಏಳು ಠಾಣೆಗಳ 300 ಅಧಿಕ ರೌಡಿ ಶೀಟರ್ಗಳನ್ನು ಚಂದಾಪುರದ ಸ್ವಾಮಿ ವಿವೇಕಾನಂದ ಶಾಲಾ ಮೈದಾನಲ್ಲಿ ಕರೆಸಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಹಾದೇವಪ್ಪ ಮಾತನಾಡಿ ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ರೌಡಿ ಶೀಟರ್ಗಳು ಯಾವುದೇ ಕಾರಣಕ್ಕೂ ಬಾಲ ಬಿಚ್ಚುವಂತಿಲ್ಲ. ಒಂದು ವೇಳೆ ನೀವು ನಿಮ್ಮ ಚಾಳಿ ಮುಂದುವರಿಸಿದರೆ ಮುಲಾಜಿಲ್ಲದೆ ಮಟ್ಟ ಹಾಕಲಾಗುವುದು. ಅದ್ರಲ್ಲು ಚುನಾವಣೆ ಸಂದರ್ಭದಲ್ಲಿ ರೌಡಿ ಶೀಟರ್ಗಳೆಂದು ಮತದಾರರನ್ನು ಬೆದರಿಸುವ, ಒತ್ತಾಯಪಡಿಸುವ ಕೃತ್ಯ ಮಾಡುವಂತಿಲ್ಲ. ಪೊಲೀಸರು ನೀಡಿದ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಒಂದು ವೇಳೆ ತಾವುಗಳು ಕಾನೂನು ಬಾಹಿರ ಕೃತ್ಯಕ್ಕೆ ಮುಂದಾದರೆ ಪೊಲೀಸರು ತಮ್ಮ ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ಒಳ್ಳೆಯವರಾಗಿ ಸಮಾಜದಲ್ಲಿ ಬದುಕಲು ಮುಂದಾಗಿ. ಒಂದು ವೇಳೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದೆ ಸನ್ನಡತೆ ಹೊಂದಿದ್ದರೆ ರೌಡಿ ಶೀಟರ್ ಪಟ್ಟಿಯಿಂದ ತೆಗೆಯಲು ಹಿರಿಯ ಅಧಿಕಾರಿಳಿಗೆ ಶಿಫಾರಸು ಮಾಡಲಾಗುವುದು ಎಂದು ರೌಡಿ ಪೆರೇಡ್ನಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ಗಳಿಗೆ , ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಹಾದೇವಪ್ಪ ಎಚ್ಚರಿಕೆ ರವಾನಿಸಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ