HOME » NEWS » District » HAVERI DISTRICT ADMINISTRATION IN CHARGE MANOJ JAIN TAKES STOCK OF COVID SITUATION SNVS

ಹಾವೇರಿಯಲ್ಲಿ ಕೊರೋನಾ ಪ್ರಕರಣ ನಿಯಂತ್ರಿಸಲು ವಿವಿಧ ಕ್ರಮಗಳಿಗೆ ಜಿಲ್ಲಾಡಳಿತ ಸಜ್ಜು

ಕೋವಿಡ್ ಪ್ರಕರಣಗಳು ಹೆಚ್ಚಾದಂತೆ ಹೆಚ್ಚುವರಿ ಸೌಲಭ್ಯಗಳು ಅವಶ್ಯವಾಗಿವೆ. ಚುನಾವಣಾ ಸಂದರ್ಭದ ಮಾದರಿಯಲ್ಲಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಸೌಲಭ್ಯ ಮತ್ತು ಸಿಬ್ಬಂದಿಯನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತದ ಅಧಿಕಾರಿಗಳಿಗೆ ಮನೋಜ್ ಜೈನ್ ಸೂಚಿಸಿದರು.

news18-kannada
Updated:July 2, 2020, 9:21 PM IST
ಹಾವೇರಿಯಲ್ಲಿ ಕೊರೋನಾ ಪ್ರಕರಣ ನಿಯಂತ್ರಿಸಲು ವಿವಿಧ ಕ್ರಮಗಳಿಗೆ ಜಿಲ್ಲಾಡಳಿತ ಸಜ್ಜು
ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು
  • Share this:
ಹಾವೇರಿ(ಜುಲೈ 02): ಮುಂದಿನ ದಿನಮಾನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗಬಹುದಾದ ಕೋವಿಡ್ ಪ್ರಕರಣಗಳ ಗಮನದಲ್ಲಿರಿಸಿಕೊಂಡು ವೈದ್ಯಕೀಯ ಸೌಲಭ್ಯ, ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲಗಳ ಹೆಚ್ಚುವರಿ ಕುರಿತಂತೆ ಯೋಜಿತ ವ್ಯವಸ್ಥೆ ಮಾಡಿಕೊಳ್ಳುವಂತೆ ಹಾವೇರಿ ಜಿಲ್ಲಾಡಳಿತಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸಲಹೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಹೆಚ್ಚಾದಂತೆ ಹೆಚ್ಚುವರಿ ಸೌಲಭ್ಯಗಳು ಅವಶ್ಯವಾಗಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಸಂದರ್ಭದ ಮಾದರಿಯ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು. ಸೌಲಭ್ಯ ಮತ್ತು ಸಿಬ್ಬಂದಿಯನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್-19 ಸೋಂಕು ನಿಯಂತ್ರಣದಲ್ಲಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ದಾದಿಯರು, ಪೊಲೀಸರು, ಸರ್ಕಾರಿ ಅಧಿಕಾರಿ, ನೌಕರರಿಗೆ ಕೊರೊನಾ ಹರಡುತ್ತಿರುವುದು ಅತ್ಯಂತ ಕಳವಳಕಾರಿ ವಿಷಯ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್ ಸೋಂಕುಪೀಡಿತರಾದ ಆಶಾ ಕಾರ್ಯಕರ್ತೆಯರ ಪ್ರಾಥಮಿಕ ಸಂಪರ್ಕಿತರು, ದ್ವಿತೀಯ ಸಂಪರ್ಕಿತರು, ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಯಾವ ಯಾವ ವ್ಯಕ್ತಿಗಳನ್ನು ಸಂಪರ್ಕಿಸಿದ್ದಾರೆ. ಕರ್ತವ್ಯ ದಿನ ಹೊರತುಪಡಿಸಿ ಇತರ ದಿನಗಳಲ್ಲಿ ಎಲ್ಲೆಲ್ಲಿಗೆ ಹೋಗಿದ್ದಾರೆ ಎಂಬ ಪ್ರವಾಸ ಹಿನ್ನೆಲೆಯನ್ನು ಸಂಗ್ರಹಿಸಬೇಕು ಹಾಗೂ ಅವರ ಮೇಲುಸ್ತುವಾರಿ ಅಧಿಕಾರಿಗಳು, ವೈದ್ಯರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಬೇಕು.ಇದೇ ಮಾದರಿಯಲ್ಲಿ ಸೋಂಕಿತ ದಾದಿಯರು, ಇತರ ನೌಕರರೂ ಕಳೆದ ಎಂಟತ್ತು ದಿನಗಳಲ್ಲಿ ಅವರ ಒಡನಾಟದ ವಿವರವನ್ನು ಪತ್ತೆಹಚ್ಚಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿ ಸಿಬ್ಬಂದಿಗಳ SARI ಹಾಗೂ ILI ಲಕ್ಷಣಗಳ ಕುರಿತಂತೆ ತಕ್ಷಣ ತಪಾಸಣೆಗೆ ಕ್ರಮ ಕೈಗೊಳ್ಳಬೇಕು. ಈ ಕುರಿತಂತೆ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸುವ ವ್ಯವಸ್ಥೆ ರೂಪುಗೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಇದನ್ನೂ ಓದಿ: ಸುಧಾಮೂರ್ತಿಯವರಿಂದ ಸ್ಪೂರ್ತಿ; ತನ್ನ ಮನೆ ಮುಂದಿನ ರಸ್ತೆಗೆ ವಿಮೆ ಮಾಡಿಸಿದ ಮೈಸೂರಿನ ಕ್ಯಾಬ್‌ ಚಾಲಕಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದಂತೆ ವೈದ್ಯರ ಬೇಡಿಕೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಆಯುಷ್ ವೈದ್ಯರಿಗೂ ತಪಾಸಣೆ ನೀಡಿ. ಕ್ವಾರಂಟೈನ್ ಸೆಂಟರ್‌ನಲ್ಲಿರುವವರಿಗೆ ಹಾಗೂ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾದವರಿಗೆ ಆಹಾರ ಇತರ ಮೂಲಭೂತ ಸೌಕರ್ಯ ಒದಗಿಸುವ ಜವಾಬ್ದಾರಿಯನ್ನು ವೈದ್ಯರಿಗೆ ನೀಡಬೇಡಿ. ಆರೋಗ್ಯ ಇಲಾಖೆ ಹೊರತುಪಡಿಸಿ ಸಮಾಜ ಕಲ್ಯಾಣ, ಆಹಾರ ಇಲಾಖೆ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಿ ಆಹಾರದ ಗುಣಮಟ್ಟ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ನಿತ್ಯ ಜಿಲ್ಲಾಡಳಿತಕ್ಕೆ ವರದಿ ನೀಡಲು ವ್ಯವಸ್ಥೆ ಮಾಡಿ ಎಂದು ಮನೋಜ್ ಜೈನ್ ಹೇಳಿದರು.
First published: July 2, 2020, 9:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories