ರೈತರಿಗೆ ಗೋಳು ಕೊಡುವ ರಾಷ್ಟ್ರೀಕೃತ ಬ್ಯಾಂಕ್​ಗಳನ್ನು ಮುಚ್ಚಿ: ಪ್ರಧಾನಿಗೆ ಹೆಚ್.ಡಿ. ರೇವಣ್ಣ ಆಗ್ರಹ

ರಾಷ್ಟ್ರೀಕೃತ ಬ್ಯಾಂಕ್​ಗಳಿಂದ ರೈತರಿಗೆ ಯಾವ ಪ್ರಯೋಜನ ಆಗುತ್ತಿಲ್ಲ. ಉಳ್ಳವರಿಗೆ ಮಾತ್ರ ಉಪಯೋಗವಾಗಿದೆ. ಈ ಬ್ಯಾಂಕ್​ಗಳು ಯಾತಕ್ಕೆ ಬೇಕು. ಅದನ್ನು ಮುಚ್ಚಿ ಎಂದು ಪ್ರಧಾನಿ ಮೋದಿಗೆ ಹೆಚ್.ಡಿ. ರೇವಣ್ಣ ಆಗ್ರಹಿಸಿದ್ದಾರೆ.

ಹೆಚ್.ಡಿ. ರೇವಣ್ಣ

ಹೆಚ್.ಡಿ. ರೇವಣ್ಣ

  • Share this:
ಹಾಸನ: ರಾಷ್ಟ್ರೀಕೃತ ಬ್ಯಾಂಕ್​ಗಳು ರೈತರಿಗೆ ಸಾಲ ಕೊಡುತ್ತಿಲ್ಲ. ಅವುಗಳನ್ನ ಮುಚ್ಚುವುದು ಒಳ್ಳೆಯದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು‌. ಇಲ್ಲಿ ಮಾತನಾಡಿದ ಅವರು ರೈತರಿಗೆ ಗೋಳು ಕೊಡುವ ಬ್ಯಾಂಕ್ ಎಂದರೆ ರಾಷ್ಟ್ರೀಕೃತ ಬ್ಯಾಂಕ್​ಗಳು. ಈ ರಾಷ್ಟ್ರೀಕೃತ ಬ್ಯಾಂಕ್​ಗಳು ರೈತರಿಗೆ ಸಾಲ ಕೊಡುತ್ತಿಲ್ಲ. ರೈತರು ಒಂದು ಲಕ್ಷ ಸಾಲ ತೆಗೆದುಕೊಂಡರೆ ಒಂದು ವರ್ಷಕ್ಕೆ 5 ಲಕ್ಷ ಹಣ ಕಟ್ಟಿ ಅಂತಾ ರಾಷ್ಟ್ರೀಕೃತ ಬ್ಯಾಂಕ್​ನವರು ಹೇಳ್ತಿದ್ದಾರೆ. ಈ ಬ್ಯಾಂಕ್​ಗಳು ಉಳ್ಳವರಿಗೆ ಮಾತ್ರ ಉಪಯೋಗವಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರು ಈ ಬ್ಯಾಂಕ್​ಗಳನ್ನ ಮುಚ್ಚಲಿ. ಈ ರಾಷ್ಟ್ರೀಕೃತ ಬ್ಯಾಂಕ್​ಗಳಿಂದ ರೈತರ ಮನೆ ಹಾಳಾಗುತ್ತಿದೆ. ಹೇಳ್ರೀ ಮೋದಿಯವರೇ ಈ ಬ್ಯಾಂಕ್​ಗಳು ಯಾಕೆ ಇವೆ? ಈ ಬ್ಯಾಂಕ್​ಗಳಿಂದ ಸಾಲ ಉಳ್ಳವರಿಗೆ ಸಾಲ ಕೊಡ್ತೀವಿ ಅಂತಾ ಒಂದು ಆದೇಶ ಹೊರಡಿಸಿ ಎಂದು ಕೇಂದ್ರ ಸರ್ಕಾರದ ವಿರುದ್ದ ಹೆಚ್.ಡಿ. ರೇವಣ್ಣ ವಾಗ್ದಾಳಿ ನಡೆಸಿದರು.

ಕೊರೋನಾ ವೇಳೆ ಲಾಕ್​ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು, ಹೂವು, ತರಕಾರಿ ಬೆಳೆಗಳು ಸೇರಿ ಅಂದಾಜು 104 ಕೋಟಿ ರೂ ನಷ್ಟವಾಗಿದೆ. ಜೊತೆಗೆ ಮಳೆ ಹಾನಿಗೂ ಇದುವರೆಗೂ ಯಾವ ಪರಿಹಾರವನ್ನು ಸರಕಾರವು ನೀಡಿರುವುದಿಲ್ಲ. ತೋಟಗಾರಿಕೆ ಬೆಳೆಗಳಲ್ಲಿ ಸಮೀಕ್ಷೆ ಪ್ರಕಾರ ಆಗಸ್ಟ್ ತಿಂಗಳ ಒಳಗೆ 19.23 ಕೋಟಿ ರೂ ನಷ್ಟವಾಗಿದೆ. ಕಾಫಿ ಬೆಳೆಯಲ್ಲಿ 18.11 ಕೋಟಿ ರೂ ನಷ್ಟ ಸಂಭವಿಸಿದೆ. ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು, ಮಳೆ ಹಾನಿ ಸೇರಿದಂತೆ ಇತರೆ ಪ್ರಕೃತಿ ವಿಕೋಪದ ಕಾರಣ ಕಾಫಿ ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಪರಿಹಾರ ಒದಗಿಸಲಿ. ಜಿಲ್ಲೆಯ ಹೂವಿನ ಬೆಳೆಗಾರರಿಗೆ ಇದುವರೆಗೆ 7 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಅಲ್ಲದೆ ಬ್ಯಾಂಕ್ ಖಾತೆಯೂ ಸರಿಯಿಗಿರುವುದಿಲ್ಲ ಎಂಬ ಕಾರಣಕ್ಕೆ ಹಲವರಿಗೆ ಪರಿಹಾರ ತಲುಪಿಲ್ಲ ಎಂದರು.

ಇದನ್ನೂ ಓದಿ: ತೊಗರಿಯ ಕಣಜದಲ್ಲಿ ಹೊಸ ಭರವಸೆ ಮೂಡಿಸಿದ ಆತ್ಮನಿರ್ಭರ; ನೆಲಕಚ್ಚಿದ ದಾಲ್ ಮಿಲ್​ಗಳ ಪುನಶ್ಚೇತನ ನಿರೀಕ್ಷೆ

ಈ ಬಾರಿ ಜಿಲ್ಲೆಯಲ್ಲಿ ಸುಮಾರು 78 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯುವ ನಿರೀಕ್ಷೆ ಇತ್ತು. ಆದರೆ 95 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದಾರೆ. 6 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳದ ಇಳುವರಿ ಬರುವ ನಿರೀಕ್ಷೆ ಇದ್ದು, ಇವರಿಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು. ಒಟ್ಟು 6 ಲಕ್ಷ ಟನ್ ಜೋಳವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊಂಡುಕೊಳ್ಳಬೇಕು ಎಂದು ರೇವಣ್ಣ ಆಗ್ರಹಿಸಿದರು.

ಇದನ್ನೂ ಓದಿ: ಡ್ರಗ್ಸ್ ದಂಧೆಯಲ್ಲಿ ಮಂತ್ರಿಗಳಿದ್ದರೂ ಬಿಡದೆ ಒದ್ದು ಒಳಗಾಕಬೇಕು; ಅಪ್ಪಚ್ಚು ರಂಜನ್

​ಕೆಎಂಎಫ್​ನಿಂದ ಜೋಳ ಖರೀದಿಯಾಗಲಿ: ರೇವಣ್ಣ

ಕೊರೋನಾದಿಂದಾಗಿ 120 ಕೋಟಿ ಮೌಲ್ಯದ ಹಾಲಿನ ಪದಾರ್ಥಗಳು ಸ್ಟಾಕ್ ಇವೆ. 4200 ಟನ್ ಹಾಲಿನ ಪೌಡರ್ ಮಾರಾಟವಾಗದೇ ಡೈರಿಯಲ್ಲೇ ಉಳಿದಿವೆ ಎಂದು ಹೇಳಿದ ಅವರು, ಕೊರೋನಾ ಸಮಯದಲ್ಲಿ ವಿವಿಧ ಬೆಳೆಗಳಲ್ಲಿ ನಷ್ಟ ಅನುಭವಿಸಿದ್ದು ಹಾಗೂ ಕೆಎಂಎಫ್ ಮೂಲಕವೇ ಜೋಳ ಖರೀದಿ ಮಾಡಲು ಮುಂದಾಗಬೇಕು. ಜೋಳ ಖರೀದಿಯಲ್ಲಿ ರೈತರನ್ನು ದಲ್ಲಾಳಿಗಳು ಶೋಷಣೆ ಮಾಡುತ್ತಿದ್ದಾರೆ. ಜೋಳಕ್ಕೆ 1700 ರೂ ಇದ್ದರೆ ದಲ್ಲಾಳಿಗಳು 1200ಕ್ಕೆ ಖರೀದಿ ಮಾಡಿ 1700ಕ್ಕೆ ಮಾರಾಟ ಮಾಡುತ್ತಿದ್ದಾರೆ. ಕೆ.ಎಂ.ಎಫ್. ಗೆ ನೇರವಾಗಿ ರೈತರು ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಗಮನ ಕೊಡಬೇಕು. ಈ ನಿಟ್ಟಿನಲ್ಲಿ ರೈತರ ನೆರವಿಗೆ ಸರಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.

ವರದಿ: ಡಿಎಂಜಿ ಹಳ್ಳಿ ಅಶೋಕ್
Published by:Vijayasarthy SN
First published: