• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ...! ಗದಗಿನಲ್ಲಿ ಅಬ್ಬರಿಸಿದ ವರುಣ, ಜನರ ಪರದಾಟ

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ...! ಗದಗಿನಲ್ಲಿ ಅಬ್ಬರಿಸಿದ ವರುಣ, ಜನರ ಪರದಾಟ

ಸಿಡಿಲಿಗೆ ಸಿಲುಕಿ ಮೃತಪಟ್ಟ ಕುರಿಗಳು.

ಸಿಡಿಲಿಗೆ ಸಿಲುಕಿ ಮೃತಪಟ್ಟ ಕುರಿಗಳು.

ಜೋರಾಗಿ ಮಳೆ ಬರ್ತಿದ್ದರಿಂದ ಕುರಿದಡ್ಡಿಯಿಂದ ಪಕ್ಕದಲ್ಲಿ ಇದ್ದ ಬಣ್ಣಿಗಿಡದ ಕೆಳಗೆ ಅವಿತು ಕುಳಿತಿದ್ದವು. ಈ ವೇಳೆ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರದ ಕೆಳಗಿದ್ದ ಕುರಿ ಮತ್ತು ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಅದೃಷ್ಟವಶಾತ್ ಕುರಿಗಾಯಿ ಹಣಮಂತ ರಾತ್ರಿ ಮನೆಗೆ ಬಂದಿದ್ದ. ಬೆಳಿಗ್ಗೆ ಹೋಗಿ ನೋಡಿದಾಗ ಸಿಡಿಲಿಗೆ ಕುರಿಗಳು ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮುಂದೆ ಓದಿ ...
  • Share this:

ಗದಗ: ಗದಗ ಜಿಲ್ಲೆಯಾದ್ಯಂತ ಸಾಯಂಕಾಲ ಸುರಿದ ಅಕಾಲಿಕ ಮಳೆಗೆ ಜನ ಜೀವನ ತತ್ತರಿಸಿ ಹೋಗಿದೆ. ಗದಗ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ವರುಣ ಅಬ್ಬರಿಸಿದ್ದಾನೆ. ಪರಿಣಾಮ ಜನ ಜಾನುವಾರ ಅಸ್ತವ್ಯಸ್ತವಾಗಿದೆ. ಮಳೆರಾಯನ ಅಬ್ಬರಕ್ಕೆ ಹಲವು ಕಡೆ ನೀರು ಮನೆಗೆ ನುಗ್ಗಿ ಜನರು ಪರದಾಡುವಂತಾಗಿದೆ. ಗದಗ ತಾಲೂಕಿನ ಕೊಟುಮಚಗಿ ಗ್ರಾಮದಲ್ಲಿ ಸಂಜೆ ವೇಳೆಗೆ ಸುರಿದ ಭಾರಿ ಮಳೆ ಗ್ರಾಮದ ತಗ್ಗು ಪ್ರದೇಶಗಳಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದೆ. ಮೊಣಕಾಲುವರೆಗೂ ಮನೆಯೊಳಗೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರನ್ನ ಹೊರ ಹಾಕಲು ಮನೆ ಮಂದಿಯಲ್ಲ ಹರಸಾಹಸ ಪಡಬೇಕಾಯಿತು. ಇನ್ನೂ ಕೆಲವು ಕಡೆ ಮಳೆ ಗಾಳಿಗೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ.


ಸಿಡಿಲು ಬಡಿದು ಹೊತ್ತಿಉರಿದ ತೆಂಗಿನ ಮರ


ಇನ್ನು ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ, ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಾ ನಗರದ ಮನೆ ಮುಂದಿನ ತೆಂಗಿನ ಮರ ಸಿಡಿಲಿನ ಬೆಂಕಿಗೆ ಆಹುತಿಯಾಗಿದೆ. ಇನ್ನು ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ತೆಂಗಿನ ಮರದ ಸಿಡಿಲು, ಬೆಂಕಿ ಕಂಡು ಸ್ಥಳೀಯರು ಕೆಲಕಾಲ ಭಯಭೀತಗೊಂಡಿದ್ದರು. ಗದಗ, ಗಜೇಂದ್ರಗಡ, ರೋಣ ಶಿರಹಟ್ಟಿ ತಾಲೂಕಿನ ಹಲವೆಡೆ ಬಿರುಗಾಳಿ ಮಳೆಯಾಗಿದೆ. ಅನೇಕ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಬಿಸಿಲಿನಿಂದ ಬೆಂದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆಯುವಂತೆ ಮಾಡಿದ್ದಾನೆ.


ಇದನ್ನು ಓದಿ: ಜಕ್ಕೂರು ವೈಮಾನಿಕ ತರಬೇತಿ ಶಾಲೆ, ಏರೋಡ್ರಮ್ ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ


ಗದಗ ಜಿಲ್ಲೆಯಲ್ಲಿ ಸಿಡಿಲು ಬಡಿದು 16 ಕುರಿಗಳು ಸಾವು


ಗದಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ತಡ ರಾತ್ರಿ ಸಿಡಿಲು ಬಡಿದು ಓರ್ವ ರೈತನ 16 ಕುರಿಗಳು ಸಾವನ್ನಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಲಿಂಗಧಾಳ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ.‌ ಕುರಿಗಾಯಿ ಹನುಮಂತ ಬ್ಯಾಡಗಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದು ಸುಮಾರು 1 ಲಕ್ಷ ರೂ. ವರೆಗೆ ನಷ್ಟವಾಗಿದೆ ಅಂತ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.


ಲಿಂಗಧಾಳ ಗ್ರಾಮದ ನಿವಾಸಿಯಾಗಿರುವ ಹನುಮಂತ ಅವರು ಪ್ರತಿ ದಿನ ಊರ ಹೊರಗಡೆ ಇರುವ ಕುರಿದಡ್ಡಿಯಲ್ಲಿ ಕುರಿಗಳನ್ನು ನಿಲ್ಲಿಸುತ್ತಿದ್ದರು. ಜೋರಾಗಿ ಮಳೆ ಬರ್ತಿದ್ದರಿಂದ ಕುರಿದಡ್ಡಿಯಿಂದ ಪಕ್ಕದಲ್ಲಿ ಇದ್ದ ಬಣ್ಣಿಗಿಡದ ಕೆಳಗೆ ಅವಿತು ಕುಳಿತಿದ್ದವು. ಈ ವೇಳೆ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರದ ಕೆಳಗಿದ್ದ ಕುರಿ ಮತ್ತು ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಅದೃಷ್ಟವಶಾತ್ ಕುರಿಗಾಯಿ ಹಣಮಂತ ರಾತ್ರಿ ಮನೆಗೆ ಬಂದಿದ್ದ. ಬೆಳಿಗ್ಗೆ ಹೋಗಿ ನೋಡಿದಾಗ ಸಿಡಿಲಿಗೆ ಕುರಿಗಳು ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಸರ್ಕಾರ ಪರಿಹಾರ ನೀಡುವಂತೆ ಕುರಿಗಾಯಿ ಹನುಮಂತ ನ ಮನವಿ ಮಾಡಿಕೊಂಡಿದ್ದಾರೆ


ವರದಿ: ಸಂತೋಷ ಕೊಣ್ಣೂರ

First published: