ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ-ಮಲೆನಾಡು ಭಾಗದಲ್ಲಿ ಮನೆಮಾಡಿದ ಆತಂಕ

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಜೀವ ನದಿಗಳಾದ ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳ ಹರಿವಿನಲ್ಲೂ ಹೆಚ್ಚಳವಾಗಿದೆ. ಜಿಲ್ಲೆಯ ಘಟ್ಟಪ್ರದೇಶಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕೆರೆ-ಕಟ್ಟೆಗಳಿಗೂ ನೀರಾಗಿದೆ.

news18-kannada
Updated:July 27, 2020, 3:54 PM IST
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ-ಮಲೆನಾಡು ಭಾಗದಲ್ಲಿ ಮನೆಮಾಡಿದ ಆತಂಕ
ಚಿಕ್ಕಮಗಳೂರಿನ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು.
  • Share this:
 ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಶುಕ್ರವಾರ ಬೆಳಗ್ಗೆಯಿಂದಲೂ ಜಿಲ್ಲಾದ್ಯಂತ ಮೋಡಕವಿದ ವಾತಾವರಣವಿತ್ತು. ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಲ್ಲಲ್ಲೆ ಸಾಧಾರಣ ಮಳೆ ಕೂಡ ಸುರಿಯುತ್ತಿತ್ತು. ಆದರೆ, ಸಂಜೆ ವೇಳೆಗೆ ಆರಂಭವಾದ ಮಳೆ ಒಂದೇ ಸಮನೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.  

ಕಳೆದ ಹದಿನೈದು ದಿನಗಳಿಂದ ಸಾಧಾರಣ ಮಳೆ ಸುರಿಯುತ್ತಿತ್ತು. ಬಿಟ್ಟು ಬಿಟ್ಟು ಬರುತ್ತಿದ್ದ ಮಳೆ ರೈತರಲ್ಲಿ ಸಂತಸ ಕೂಡ ತಂದಿತ್ತು. ಮಳೆ ಸಾಧಾರಣವಾಗಿ ಸುರಿದರೆ ಭೂಮಿ ನೀರನ್ನ ಹೀರಿಕೊಳ್ಳೋದ್ರಿಂದ ಅಂತರ್ಜಲ ಮಟ್ಟವೂ ಹೆಚ್ಚುತ್ತೆಂದು ಖುಷಿಯಾಗಿದ್ದರು. ಆದರೆ, ಸಂಜೆಯಿಂದ ಒಂದೇ ಸಮನೆ ಮಳೆ ಸುರಿಯುತ್ತಿರುವುದರಿಂದ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ.

ಜಿಲ್ಲೆಯ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಮೂಡಿಗೆರೆ ಭಾಗದಲ್ಲಿ ಮಳೆರಾಯ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಚಿಕ್ಕಮಗಳೂರು ನಗರದಲ್ಲೂ ಬೆಳಗ್ಗೆಯಿಂದ ಮೋಡಕವಿದ ವಾತಾವರಣವಿದ್ದು ಆಗಾಗ್ಗೆ ಸಾಧಾರಣ ಮಳೆ ಬರುತ್ತಿದೆ. ಸಂಜೆ ವೇಳೆ ತುಸು ಹೆಚ್ಚಾಗೆ ಮಳೆ ಸುರಿದಿದೆ.

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಜೀವ ನದಿಗಳಾದ ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳ ಹರಿವಿನಲ್ಲೂ ಹೆಚ್ಚಳವಾಗಿದೆ. ಜಿಲ್ಲೆಯ ಘಟ್ಟಪ್ರದೇಶಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕೆರೆ-ಕಟ್ಟೆಗಳಿಗೂ ನೀರಾಗಿದೆ. ಜಿಲ್ಲೆಯ ಮಲೆನಾಡಿನಲ್ಲಿ ಈ ವರ್ಷವೂ ಭಾರೀ ಮಳೆಯಾದರೆ, ನಮ್ಮ ಬದುಕೇನೆಂದು ಮಲೆನಾಡಿಗರು ಕಂಗಾಲಾಗಿದ್ದಾರೆ.

ಇದನ್ನೂ ಓದಿ : ಖಾಸಗಿ ಆಸ್ಪತ್ರೆಗಳಲ್ಲೂ ಕೊರೋನಾ ಚಿಕಿತ್ಸೆ: 73 ಆಸ್ಪತ್ರೆಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಏಕೆಂದರೆ, ಕಳೆದ ವರ್ಷ ಆದ ಅನಾಹುತಗಳಿಂದ ಜನ ಹೊರಗೇ ಬಂದಿಲ್ಲ. ಹಲವರು ಸೌಲಭ್ಯ ವಂಚಿತರಾಗಿದ್ದಾರೆ. ಹಲವರಿಗೆ ಮನೆ-ಮಠ ಇಲ್ಲ. ಈಗಿರುವಾಗ ಆಗಾಗ್ಗೆ ಮತ್ತೆ ಸುರಿಯುತ್ತಿರೋ ಮಳೆ ಕಂಡು ಜನ ಕಂಗಾಲಾಗಿದ್ದಾರೆ.
Published by: MAshok Kumar
First published: July 4, 2020, 7:39 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading