HOME » NEWS » District » HEAVY RAIN IN MANGALORE CAUSES PEOPLE TO STAY HOME AMIDST LOCKDOWN SNVS

ದಕ್ಷಿಣ ಕನ್ನಡದಲ್ಲಿ ಲಾಕ್​ಡೌನ್ ಜೊತೆಗೆ ಮಳೆಯ ಆರ್ಭಟ; ಬಹುತೇಕ ಕಡೆ ಜನಸಂಚಾರ ವಿರಳ

ಲಾಕ್ ಡೌನ್ ಜೊತೆಗೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯೂ ಸುರಿಯುತ್ತಿದೆ. ನಿನ್ನೆಯಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಯೂ ಜನ ಖರೀದಿಗೆ ಇಳಿಯಲು ನಿರಾಸಕ್ತಿ ತೋರಿಸುತ್ತಿದ್ದಾರೆ.

news18-kannada
Updated:July 16, 2020, 1:26 PM IST
ದಕ್ಷಿಣ ಕನ್ನಡದಲ್ಲಿ ಲಾಕ್​ಡೌನ್ ಜೊತೆಗೆ ಮಳೆಯ ಆರ್ಭಟ; ಬಹುತೇಕ ಕಡೆ ಜನಸಂಚಾರ ವಿರಳ
ಮಂಗಳೂರಿನಲ್ಲಿ ಮಳೆಯ ಒಂದು ದೃಶ್ಯ
  • Share this:
ಮಂಗಳೂರು(ಜುಲೈ 16): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದಿನಿಂದ ಮತ್ತೆ ಲಾಕ್ ಡೌನ್ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪಾಸಿಟೀವ್ ಸಂಖ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರವನ್ನು ಕೈಗೊಂಡಿದೆ.

ಇಂದಿನಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ನಿಷೇಧಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಿಗ್ಗೆ 8 ರಿಂದ 11 ರ ವರೆಗೆ ಸಮಯಾವಕಾಶವನ್ನು ನೀಡಲಾಗಿದ್ದು, ಆ ಬಳಿಕ ಸಂಪೂರ್ಣ ಬಂದ್​ಗೆ ಆದೇಶ ಹೊರಡಿಸಲಾಗಿದೆ.

ಲಾಕ್ ಡೌನ್​ನ ಮೊದಲ ದಿನವಾದ ಇಂದು ಪುತ್ತೂರು ಪೇಟೆಯಲ್ಲಿ ಜನರ ಸಂಖ್ಯೆ ಅತ್ಯಂತ ವಿರಳವಾಗಿರುವುದು ಕಂಡು ಬಂದಿದೆ. ಅಗತ್ಯ ವಸ್ತುಗಳ ಖರೀದಿಗೆ ಸಮಯಾವಕಾಶವನ್ನು ನೀಡಿದ್ದರೂ, ಜನ ಮಾತ್ರ ಮನೆಯಿಂದ ಹೊರಗಿಳಿದಿಲ್ಲ. ಪೇಟೆಯಾದ್ಯಂತ ಜನಸಂಖ್ಯೆ ಅತೀ ವಿರಳವಾಗಿದ್ದು, ಬೆರಳೆಣಿಕೆಯ ದಿನಸಿ ಅಂಗಡಿಗಳು ತೆರೆದಿವೆ. ಪೆಟ್ರೋಲ್ ಬಂಕ್, ಮೆಡಿಕಲ್, ಹಾಲು ಹಾಗೂ ಪೇಪರ್ ಸ್ಟಾಲ್​ಗಳು ಎಂದಿನಂತೆ ಕಾರ್ಯಾಚರಿಸಲು ಅವಕಾಶವನ್ನು ನೀಡಲಾಗಿದೆ. ಬೆಳಗ್ಗೆ 11 ರ ವರೆಗೆ ಅಂಗಡಿ ತೆರೆಯಲು ಅವಕಾಶವಿದ್ದರೂ, ಕೆಲವರು ಮಾತ್ರ ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿರುವುದು ಬಹುತೇಕ ಕಡೆಗಳಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ; ಇದು ಕರ್ನಾಟಕದ ಕರಾಳ ದಿನ ಎಂದು ಸಿದ್ದರಾಮಯ್ಯ ಟೀಕೆ

ಲಾಕ್ ಡೌನ್ ಜೊತೆಗೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯೂ ಸುರಿಯುತ್ತಿದೆ. ನಿನ್ನೆಯಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಯೂ ಜನ ಖರೀದಿಗೆ ಇಳಿಯಲು ನಿರಾಸಕ್ತಿ ತೋರಿಸುತ್ತಿದ್ದಾರೆ. ಜಿಲ್ಲೆಯ ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಸುಳ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪಶ್ಟಿಮಘಟ್ಟ ಪ್ರದೇಶಗಳಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿಯಲ್ಲಿ ನೀರಿನ ಮಟ್ಟವೂ ಹೆಚ್ಚಾಗುತ್ತಿದೆ. ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಕಾರ್ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಲಾಕ್ ಡೌನ್ ಜೊತೆಗೆ ಮಳೆಯೂ ಜನರನ್ನು ರಸ್ತೆಗೆ ಇಳಿಯದಂತೆ ತಡೆದಿದೆ.ಇನ್ನು ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ವಾಹನಗಳ ವಿರುದ್ಧ ಕ್ರಮಕ್ಕೂ ಪೋಲೀಸರು ಮುಂದಾಗಿದ್ದಾರೆ. ಈ ಸಂಬಂಧ ಆಯಕಟ್ಟಿನ ಸ್ಥಳಗಳಲ್ಲಿ ಪೋಲೀಸರು ಬ್ಯಾರಿಕೇಡ್​ಗಳನ್ನು ಅಳವಡಿಸಿ ಅನಗತ್ಯ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದಾರೆ.
Published by: Vijayasarthy SN
First published: July 16, 2020, 1:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories