ಭಾರಿ ಮಳೆಗೆ ಕಲಬುರ್ಗಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು; ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

ಜಿಲ್ಲೆಯ ಹಲವೆಡೆ ಸುರಿದ ಭಾರಿ ಮಳೆಯಿಂದಾಗಿ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಲ್ಲಾಮಾರಿ ಹಾಗೂ ಕಾಗಿಣಾ ನದಿಗಳು ತುಂಬಿ ಹರಿಯುತ್ತಿರುವುದರಿಂದಾಗಿ ನದಿ ಬಳಿ ತೆರಳದಂತೆ ನದಿ ಪಾತ್ರದ ಜನತೆಗೆ ಸೂಚನೆ ನೀಡಲಾಗಿದೆ. ಸುತ್ತ ಮತ್ತಲಿನ ಹಳ್ಳಿಗಳಲ್ಲಿ ಡಂಗೂರ ಸಾರಿ ಜನತೆಗೆ ಎಚ್ಚರಿಕೆ ನೀಡಲಾಗಿದೆ.

news18-kannada
Updated:July 3, 2020, 8:00 PM IST
ಭಾರಿ ಮಳೆಗೆ ಕಲಬುರ್ಗಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು; ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ
ನದಿಯಲ್ಲಿ ಸಿಲುಕಿದ್ದ ಜನರ ರಕ್ಷಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ.
  • Share this:
ಕಲಬುರ್ಗಿ; ಕಲಬುರ್ಗಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯ ಚಿಂಚೋಳಿ ಮತ್ತಿತರ ಕಡೆ ಸುರಿದ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಮುಲ್ಲಾಮಾರಿ ಹಾಗೂ ಕಾಗಿಣಾ ನದಿಗಳು ತುಂಬಿ ಹರಿಯುತ್ತಿವೆ. ಕಾಗಿಣಾ ನದಿಯ ನಡುವೆ ಸಿಲುಕಿಕೊಂಡಿದ್ದ ಎಂಟು ಜನರನ್ನು ಸೇಡಂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಕಲಬುರ್ಗಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಜಿಲ್ಲೆಯ ಚಿಂಚೋಳಿ ಮತ್ತಿತರ ಕಡೆ ಸುರಿದ ಮಳೆಗೆ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಂಚೋಳಿ ಪಟ್ಟಣದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಚಿಂಚೋಳಿ, ಚಂದಾಪುರ ಮತ್ತಿತರ ಕಡೆ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ದವಸ, ಧಾನ್ಯ, ಮಳೆ ನೀರಿನಿಂದ ಹಾಳಾಗಿವೆ. ಚಿಂಚೋಳಿ ತಾಲೂಕು ಹಾಗೂ ತೆಲಂಗಾಣದಲ್ಲಿ ಸುರಿದ ಮಳೆಯಿಂದಾಗಿ ಚಿಂಚೋಳಿ ತಾಲೂಕಿನ ಎತ್ತಿಪೋತ ಜಲಪಾತಕ್ಕೆ ಜೀವ ಬಂದಿದೆ. ವೆಂಕಟಾಪುರದ ಬಳಿ ಇರೋ ಎತ್ತಿಪೋತ ಜಲಪಾತದ ಬಳಿ ನೀರು ಮೈದುಂಬಿ ಹರಿಯುತ್ತಿವೆ.

ಮತ್ತೊಂದೆಡೆ ಬೀದರ್ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಮುಲ್ಲಾಮಾರಿ, ಕಾಗಿಣಾ ನದಿಗಳು ತುಂಬಿ ಹರಿಯುತ್ತಿವೆ. ಕಾಗಿಣಾ ನದಿಯ ನಡುಗಡ್ಡೆಲ್ಲಿ ಸಿಲುಕ್ಕಿದ್ದ ಎಂಟು ಜನರ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಬಿದ್ದಳ್ಳಿ ಗ್ರಾಮದ ಬಳಿ ಕಾಗಿಣಾ ನದಿಯ ನಡುಗಡ್ಡೆಯಲ್ಲಿ ಸಿಲುಕ್ಕಿದ್ದ 8 ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಇದೇ ವೇಳೆ ಭಾರಿ ಮಳೆಯಿಂದಾಗಿ ಜಮೀನು ಜಲಾವೃತಗೊಂಡು, ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತ ಸಮುದಾಯದ ಕಂಗಾಲಾಗಿದ್ದು, ಸೂಕ್ತ ಪರಿಹಾರ ಕೊಡುವಂತೆ ಚಿಂಚೋಳಿ ರೈತರು ಆಗ್ರಹಿಸಿದ್ದಾರೆ.

ಇದನ್ನು ಓದಿ: ನಾಳೆಯಿಂದ ಕೊರೋನಾ ಹೊಸ ಮಾರ್ಗಸೂಚಿ ಜಾರಿ, ಕ್ವಾರಂಟೈನ್ ಅವಧಿ 17 ದಿನಕ್ಕೆ ಏರಿಕೆ; ಸಚಿವ ಕೆ.ಸುಧಾಕರ್

ಜಿಲ್ಲೆಯ ಹಲವೆಡೆ ಸುರಿದ ಭಾರಿ ಮಳೆಯಿಂದಾಗಿ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಲ್ಲಾಮಾರಿ ಹಾಗೂ ಕಾಗಿಣಾ ನದಿಗಳು ತುಂಬಿ ಹರಿಯುತ್ತಿರುವುದರಿಂದಾಗಿ ನದಿ ಬಳಿ ತೆರಳದಂತೆ ನದಿ ಪಾತ್ರದ ಜನತೆಗೆ ಸೂಚನೆ ನೀಡಲಾಗಿದೆ. ಸುತ್ತ ಮತ್ತಲಿನ ಹಳ್ಳಿಗಳಲ್ಲಿ ಡಂಗೂರ ಸಾರಿ ಜನತೆಗೆ ಎಚ್ಚರಿಕೆ ನೀಡಲಾಗಿದೆ.
Published by: HR Ramesh
First published: July 3, 2020, 7:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading