ಕೋಲಾರ: ಡಿ. 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್; ಆಟೋಗಳಿಗೆ ಮೀಟರ್ ಕಡ್ಡಾಯ - ಜಿಲ್ಲಾಧಿಕಾರಿ ಆದೇಶ
ಕೋಲಾರದಲ್ಲಿ ಡಿಸೆಂಬರ್ 1ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು. ಆಟೋರಿಕ್ಷಾಗಳಲ್ಲಿ ಮೀಟರ್ ಅಳವಡಿಕೆ ಆಗಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಆದೇಶಿಸಿದ್ದಾರೆ.
news18-kannada Updated:November 24, 2020, 8:05 AM IST

ಕೋಲಾರ ಜಿಲ್ಲಾಧಿಕಾರಿ ಕಚೇರಿ
- News18 Kannada
- Last Updated: November 24, 2020, 8:05 AM IST
ಕೋಲಾರ(ನ. 24): ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚನೆ ನೀಡಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಬಗ್ಗೆ ಮಾತನಾಡಿದ, ಡಿಸಿ ಸಿ ಸತ್ಯಭಾಮ, ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳನ್ನು ಸಮರ್ಪಕವಾಗಿ ಅಳವಡಿಸಬೇಕು ಎಂದು ಹೆದ್ದಾರಿ ರಸ್ತೆ ನಿರ್ವಹಣೆ ಮಾಡುತ್ತಿರುವ ಲ್ಯಾಂಕೋ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಅಲ್ಲದೇ, ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಡ್ರೈನೇಜ್ ನಿರ್ಮಿಸಬೇಕು. ಎ.ಪಿ.ಎಂ.ಸಿ., ಮೆಡಿಕಲ್ ಕಾಲೇಜಿನಲ್ಲ ಹೆಚ್ಚಿನ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಹೆದ್ದಾರಿಯಲ್ಲಿ ಸ್ವಚ್ಛತೆ ಕಾಪಾಡಬೇಕು. ಬೇರೆ ಬೇರೆ ಜಿಲ್ಲೆಗಳ ಹೆದ್ದಾರಿಗಳಲ್ಲಿ ಸ್ವಚ್ಚತೆ ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ. ಆದರೆ ಕೋಲಾರ ಜಿಲ್ಲೆಯ ಹೆದ್ದಾರಿಗಳಲ್ಲಿ ಸ್ವಚ್ಚತೆ ಯಾಕೆ ಕಾಪಾಡಿಲ್ಲ? ಒಂದು ವರ್ಷದ ಹಿಂದೆ ನಡೆದ ಸಭೆಯಲ್ಲಿ 14 ಬ್ಲಾಕ್ ಸ್ಟಾಟ್ಗಳನ್ನು ಗುರುತಿಸಿ ಸುರಕ್ಷತೆ ಕೈಗೊಳ್ಳುವಂತೆ ಲ್ಯಾಂಕೋ ಸಂಸ್ಥೆಗೆ ಸೂಚಿಸಲಾಗಿತ್ತು. ಆದರೆ ಸಂಪೂರ್ಣವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸತ್ಯಭಾಮಾ ತಮ್ಮ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಅನೈತಿಕ ಸಂಬಂಧ: ಪತ್ನಿ ಬಿಟ್ಟುಕೊಡು ಎಂದ ಪರಪುರುಷ; ಇಲ್ಲ ಎಂದಿದ್ದಕ್ಕೆ ಪತಿಯ ಕೊಲೆ
ಇದೇ ವೇಳೆ, ಕೋಲಾರ ಜಿಲ್ಲೆಯಲ್ಲಿ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಹೆಲ್ಮೆಟ್ ಧರಿಸಬೇಕೆಂಬ ನಿಯಮವನ್ನು ಡಿಸೆಂಬರ್ 1 ರಿಂದ ಕಡ್ಡಾಯ ಜಾರಿ ಮಾಡಲಾಗುತ್ತದೆ. ನಿಯಮಪಾಲನೆ ತಪ್ಪಿದಲ್ಲಿ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಜಿಲ್ಲಾಧಿಕಾರಿ ಭರವಸೆ
ಕೋವಿಡ್-19 ಹಿನ್ನೆಲೆಯಲ್ಲಿ ಹಲವಾರು ತಿಂಗಳಿಂದ ಮುಚ್ಚಲ್ಪಟ್ಟಿದ್ದ ಕಾಲೇಜುಗಳು ಈಗಾಗಲೇ ಆರಂಭಗೊಂಡಿವೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭರವಸೆ ನೀಡಿದ್ದಾರೆ. ನಗರದ ಮಹಿಳಾ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆರಂಭವಾಗಿರುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಾಲೇಜಿನ ಕೊಠಡಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.
ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ತಮಿಳುನಾಡಿನಲ್ಲಿ ರೆಡ್ ಆಲರ್ಟ್; ರಾಜ್ಯದ ಹಲವೆಡೆ ಭಾರೀ ಮಳೆಜಿಲ್ಲೆಯ ವಿವಿಧ ಭಾಗಗಳಿಂದ ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಿ. ಸತ್ಯಭಾಮ ಭರವಸೆ ನೀಡಿದರು.
ವರದಿ: ರಘುರಾಜ್
ಅಲ್ಲದೇ, ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಡ್ರೈನೇಜ್ ನಿರ್ಮಿಸಬೇಕು. ಎ.ಪಿ.ಎಂ.ಸಿ., ಮೆಡಿಕಲ್ ಕಾಲೇಜಿನಲ್ಲ ಹೆಚ್ಚಿನ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಹೆದ್ದಾರಿಯಲ್ಲಿ ಸ್ವಚ್ಛತೆ ಕಾಪಾಡಬೇಕು. ಬೇರೆ ಬೇರೆ ಜಿಲ್ಲೆಗಳ ಹೆದ್ದಾರಿಗಳಲ್ಲಿ ಸ್ವಚ್ಚತೆ ಉತ್ತಮವಾಗಿ ನಿರ್ವಹಣೆ ಮಾಡಲಾಗಿದೆ. ಆದರೆ ಕೋಲಾರ ಜಿಲ್ಲೆಯ ಹೆದ್ದಾರಿಗಳಲ್ಲಿ ಸ್ವಚ್ಚತೆ ಯಾಕೆ ಕಾಪಾಡಿಲ್ಲ? ಒಂದು ವರ್ಷದ ಹಿಂದೆ ನಡೆದ ಸಭೆಯಲ್ಲಿ 14 ಬ್ಲಾಕ್ ಸ್ಟಾಟ್ಗಳನ್ನು ಗುರುತಿಸಿ ಸುರಕ್ಷತೆ ಕೈಗೊಳ್ಳುವಂತೆ ಲ್ಯಾಂಕೋ ಸಂಸ್ಥೆಗೆ ಸೂಚಿಸಲಾಗಿತ್ತು. ಆದರೆ ಸಂಪೂರ್ಣವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸತ್ಯಭಾಮಾ ತಮ್ಮ ಅಸಮಾಧಾನ ಹೊರಹಾಕಿದರು.