ಮಂಗಳೂರಿನಲ್ಲಿ ಗುಡ್ಡ ಕುಸಿತ; ನೆಲಸಮವಾದ ಮನೆಗಳು, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಧಾರುಣ ಸಾವು

ಈ ಗುಡ್ಡದಲ್ಲಿ 14 ಮನೆಗಳಿದ್ದು, ಭೂ ಕುಸಿತದಿಂದಾಗಿ 4 ಮನೆಗಳು ಸಂಪೂರ್ಣವಾಗಿ ಜಖಂ ಆಗಿವೆ. ಅಲ್ಲದೆ, ಈ ಮನೆಯಲ್ಲಿದ್ದ ಇಬ್ಬರು ಮಕ್ಕಳು ಭಾರೀ ಪ್ರಮಾಣದ ಮಣ್ಣಿನ ಅಡಿಯಲ್ಲಿ ಸಿಲುಕಿದ್ದದ್ದು. ಹೀಗಾಗಿ ಜಿ‌ಲ್ಲಾಡಳಿತ ಮತ್ತು ಎನ್‌ಡಿಆರ್‌ಎಫ್ ತಂಡ ಮಧ್ಯಾಹ್ನದಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಆದರೆ, ದುರಾದೃಷ್ಟವಶಾತ್‌ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರೂ ಮಕ್ಕಳೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

news18-kannada
Updated:July 5, 2020, 5:28 PM IST
ಮಂಗಳೂರಿನಲ್ಲಿ ಗುಡ್ಡ ಕುಸಿತ; ನೆಲಸಮವಾದ ಮನೆಗಳು, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಧಾರುಣ ಸಾವು
ಮಂಗಳೂರಿನಲ್ಲಿ ಇಬ್ಬರು ಮಕ್ಕಳನ್ನು ಬಲಿಪಡೆದ ಭೂ ಕುಸಿತ.
  • Share this:
ಮಂಗಳೂರು (ಜುಲೈ 05); ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ಹೊರ ವಲದಲ್ಲಿರುವ ಗುರುಪುರದಲ್ಲಿ ಮನೆಗಳ ಮೇಲೆ ಗುಡ್ಡ ಜರಿದು ಬಿದ್ದಿರುವ ಪರಿಣಾಮ 4 ಮನೆಗಳು ಸಂಪೂರ್ಣ ನೆಲಸಮ ಆಗಿವೆ. ಅಲ್ಲದೆ, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 20 ವರ್ಷಗಳ ಹಿಂದೆ ಜಿಲ್ಲಾಡಳಿತ 14 ನಿರಾಶ್ರಿತ ಕುಟುಂಬಗಳಿಗೆ ಗುರುಪುರದ ಬಂಗ್ಲೆಗುಡ್ಡದಲ್ಲಿ ಮನೆ ಮಾಡಿಕೊಳ್ಳಲು ಅವಕಾಶ ನೀಡಿತ್ತು. ಹೀಗಾಗಿ ಈ ಭಾಗದಲ್ಲಿ ನಿರಾಶ್ರಿತರು ಮನೆ ಮಾಡಿಕೊಂಡಿದ್ದರು. ಇಲ್ಲಿ ನೆಲೆಸಿರುವ ಎಲ್ಲರೂ ಕೂಲಿ ಕೆಲಸ ಮಾಡುವವರು ಎಂದು ಹೇಳಲಾಗುತ್ತಿದೆ. ಆದರೆ, ಕಳೆದ ಹಲವು ದಿನಗಳಿಂದ ಇಲ್ಲಿ ಭಾರೀ ಪ್ರಮಾಣದ ಮಳೆಯಾದ ಪರಿಣಾಮ ಮಣ್ಣು ಕುಸಿದಿದ್ದು ಇಡೀ ಗುಡ್ಡ ಮನೆಗಳ ಮೇಲೆ ಬಿದ್ದಿದೆ.

ಈ ಗುಡ್ಡದಲ್ಲಿ 14 ಮನೆಗಳಿದ್ದು, ಭೂ ಕುಸಿತದಿಂದಾಗಿ 4 ಮನೆಗಳು ಸಂಪೂರ್ಣವಾಗಿ ಜಖಂ ಆಗಿವೆ. ಅಲ್ಲದೆ, ಈ ಮನೆಯಲ್ಲಿದ್ದ ಇಬ್ಬರು ಮಕ್ಕಳು ಭಾರೀ ಪ್ರಮಾಣದ ಮಣ್ಣಿನ ಅಡಿಯಲ್ಲಿ ಸಿಲುಕಿದ್ದದ್ದು. ಹೀಗಾಗಿ ಜಿ‌ಲ್ಲಾಡಳಿತ ಮತ್ತು ಎನ್‌ಡಿಆರ್‌ಎಫ್ ತಂಡ ಮಧ್ಯಾಹ್ನದಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಆದರೆ, 4 ನಾಲ್ಕು ಗಂಟೆಯ ಕಾರ್ಯಾಚರಣೆ ಅಂತ್ಯವಾಗಿದ್ದು, ದುರಾದೃಷ್ಟವಶಾತ್‌ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಇಬ್ಬರೂ ಮಕ್ಕಳೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೆಸರಿನಿಂದ ಕೂಡಿದ್ದ ಮಣ್ಣಿನಲ್ಲಿ ಸಿಲುಕಿದ್ದರಿಂದ ಉಸಿರಾಡಲು ಸಾಧ್ಯವಾಗದೆ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಎನ್ನಲಾಗಿದೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದು, ಮೃತ ಮಕ್ಕಳ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ರಾಯಚೂರು: ಓರ್ವ ಸೋಂಕಿತಳಿಂದ 30 ಜನರಿಗೆ ಸೋಂಕು, ಜಿಲ್ಲಾಡಳಿತಕ್ಕೆ ಹೊಸ ತಲೆನೋವು

ಇನ್ನೂ ಈ ಭಾಗದ ಸಂಸದ ನಳಿನ್ ಕುಮಾರ್‌ ಕಟೀಲ್ ಸಹ ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, "ಈ ಗುಡ್ಡದ ಮೇಲಿನ ಎಲ್ಲರನ್ನೂ ಗಂಜಿ ಕೇಂದ್ರಕ್ಕೆ ರವಾನಿಸಲಾಗಿದೆ. ಅಲ್ಲದೆ, ಇಲ್ಲಿನ ಎಲ್ಲಾ ನಿರಾಶ್ರಿತ ಕುಟುಂಬಗಳಿಗೂ ಬೇರೆ ಮನೆ ಮಾಡಿಕೊಳ್ಳಲು ನಿವೇಶನ ನೀಡಲಾಗುವುದು" ಎಂದು ಭರವಸೆ ನೀಡಿದ್ದಾರೆ. 
Published by: MAshok Kumar
First published: July 5, 2020, 5:14 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading