ಹುಬ್ಬಳ್ಳಿ- ಧಾರವಾಡದಲ್ಲಿ ಕೊರೋನಾ ಸೋಂಕಿತರಿಗೆ ಹೋಂ ಐಸೋಲೇಷನ್; ಮನೆಯಲ್ಲಿಯೇ ಟೆಲಿಕನ್ಸಲ್ಟೇಷನ್ ಚಿಕಿತ್ಸೆ

ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು  ಮನೆಗಳಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು ರೂಪಿಸಿದೆ.

news18-kannada
Updated:July 10, 2020, 9:57 AM IST
ಹುಬ್ಬಳ್ಳಿ- ಧಾರವಾಡದಲ್ಲಿ ಕೊರೋನಾ ಸೋಂಕಿತರಿಗೆ ಹೋಂ ಐಸೋಲೇಷನ್; ಮನೆಯಲ್ಲಿಯೇ ಟೆಲಿಕನ್ಸಲ್ಟೇಷನ್ ಚಿಕಿತ್ಸೆ
ಸಾಂದರ್ಭಿಕ ಚಿತ್ರ
  • Share this:
ಧಾರವಾಡ(ಜು.10): ಹುಬ್ಬಳ್ಳಿ- ಧಾರವಾಡದಲ್ಲಿ ಕೊರೋನಾ ಸೋಂಕಿತರಿಗೆ ಹೋಂ ಐಸೋಲೇಷನ್​ನಲ್ಲಿರಲು ಅವಕಾಶ ಕಲ್ಪಿಸಲಾಗಿದೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಲು ಸೂಚಿಸಲಾಗಿದೆ. ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ಇಲ್ಲದವರಿಗೆ ಈ ಅನುಕೂಲತೆ ಕಲ್ಪಿಸಲಾಗಿದೆ‌.

ಕೋವಿಡ್ ಸೋಂಕಿತರು ಮನೆಯಲ್ಲಿದ್ದೇ ಟೆಲಿಕನ್ಸಲ್ಟೇಷನ್ ಚಿಕಿತ್ಸೆ ಪಡೆಯಬಹುದಾಗಿದೆ. ಹೋಂ ಐಸೋಲೇಷನ್‌ಗೆ ಜಿಲ್ಲಾಡಳಿತದಿಂದ ಪರವಾನಗಿ ದೊರೆತ ಮೊದಲ ದಿನವೇ ಅವಳಿ ನಗರದಲ್ಲಿ 12 ಜನರಿಗೆ ಈ ಅವಕಾಶ ಸಿಕ್ಕಿದೆ. ಹುಬ್ಬಳ್ಳಿಯಲ್ಲಿ 11 ಹಾಗೂ ಧಾರವಾಡದಲ್ಲಿ ಒಬ್ಬರಿಗೆ ಹೋಂ ಐಸೋಲೇಷನ್‌‌ನಲ್ಲಿ ಇರಲಿದ್ದಾರೆ. ಸ್ವಯಂ ಪ್ರೇರಣೆಯಿಂದ ಟೆಲಿಕನ್ಸಲ್ಟೇಷನ್ ಚಿಕಿತ್ಸೆಗೆ ಈ 12 ಸೋಂಕಿತರು ಮುಂದಾಗಿದ್ದಾರೆ.

ಕೊರೋನಾ ನಿಯಂತ್ರಿಸುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ; ಆಕ್ರೋಶ ಹೊರಹಾಕಿದ ದಿನೇಶ್​ ಗುಂಡೂರಾವ್ ಹೆಂಡತಿ

12 ಜನರಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಅವಕಾಶ

ಕೋವಿಡ್ ಸೋಂಕು ಇದ್ದರೂ ಕೂಡ ರೋಗ ಲಕ್ಷಣ ಇಲ್ಲದವರು ಮತ್ತು ಸೌಮ್ಯ ಲಕ್ಷಣವುಳ್ಳ ಜನರಿಗೆ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿದ್ದು ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ಪಡೆಯುವ  ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ 12 ಜನ ಸ್ವಯಂ ಪ್ರೇರಣೆಯಿಂದ ಈ ಮಾದರಿಯ ಚಿಕಿತ್ಸೆ ಆಯ್ದುಕೊಂಡಿದ್ದಾರೆ.

ದೇಶದಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ , ಕೋವಿಡ್ ಸೋಂಕು ಇದ್ದರೂ ರೋಗ ಲಕ್ಷಣ ರಹಿತರು  ಮನೆಗಳಲ್ಲಿಯೇ ಇದ್ದು ಚಿಕಿತ್ಸೆ ಪಡೆಯಲು ಸರ್ಕಾರ ನಿಯಮಗಳನ್ನು ರೂಪಿಸಿದೆ.

ಜಿಲ್ಲೆಯಲ್ಲಿ ಈ ಅವಕಾಶ ಜಾರಿಗೊಳಿಸಿದ ಮೊದಲ ದಿನದಂದೇ ಹುಬ್ಬಳ್ಳಿಯಲ್ಲಿ 11 ಹಾಗೂ ಧಾರವಾಡದಲ್ಲಿ ಒಬ್ಬ ವ್ಯಕ್ತಿ ಸೇರಿ ಒಟ್ಟು 12 ಜನರನ್ನು ಹೋಂ ಐಸೋಲೇಷನ್ ಚಿಕಿತ್ಸೆಗೆ ಒಳಪಡಿಸಲಾಗಿದೆ. ಕೋವಿಡ್ ದೃಢಪಟ್ಟ ನಂತರ ವೈದ್ಯರ ತಂಡವು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಂಡು ಶಿಫಾರಸ್ಸು  ಮಾಡುತ್ತದೆ. ಅದನ್ನು ಆಧರಿಸಿ ಕ್ರಮ ಜರುಗಿಸಲಾಗುತ್ತದೆ.

ಸಾರ್ವಜನಿಕರು ಕೋವಿಡ್ ಬಗ್ಗೆ ಆತಂಕಕ್ಕೆ ಒಳಗಾಗಬಾರದು.  ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ, ಪದೇ ಪದೇ ಕೈತೊಳೆಯುವುದು ಮತ್ತಿತರ ಸ್ವಚ್ಛತಾ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಸೋಂಕಿನಿಂದ ದೂರ ಇರಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
Published by: Latha CG
First published: July 10, 2020, 9:57 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading