• Home
 • »
 • News
 • »
 • district
 • »
 • Yatnal| ಒಂದೇ ಕುಟುಂಬದ ಎಷ್ಟು ಜನರಿಗೆ ಅವಕಾಶ? ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್

Yatnal| ಒಂದೇ ಕುಟುಂಬದ ಎಷ್ಟು ಜನರಿಗೆ ಅವಕಾಶ? ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ್

ಬಸನಗೌಡ ಪಾಟೀಲ್ ಯತ್ನಾಳ್

ಬಸನಗೌಡ ಪಾಟೀಲ್ ಯತ್ನಾಳ್

ಒಂದು ಕುಟುಂಬದಲ್ಲಿ ಎಷ್ಟು ಜನರಿಗೆ ಅವಕಾಶ ನೀಡಬೇಕು? ಒಂದೇ ಕುಟುಂಬದ ಮೂರು ನಾಲ್ಕು ಜನರಿಗೆ ಅವಕಾಶ ನೀಡಿದರೆ ಕಾರ್ಯಕರ್ತರು ಏನು ಮಾಡಬೇಕು? ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

 • Share this:

  ವಿಜಯಪುರ (ಆಗಸ್ಟ್​ 31); ಒಂದೇ ಕುಟುಂಬದ ಎಷ್ಟು ಜನರಿಗೆ ಇನ್ನೂ ಅವಕಾಶ ನೀಡಬೇಕು ಎಂದು ಕೇಳುವ ಮೂಲಕ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal) ಮತ್ತೊಮ್ಮೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yddyurappa) ವಿರುದ್ಧ ಕಿಡಿಕಾರಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲಿದ್ದಾಗಲೇ ಅವರ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದ ಮತ್ತು ಭ್ರಷ್ಟಾಚಾರದ ಆರೋಪ ಹೊರಿಸಿದ್ದ ನಾಯಕ ಯತ್ನಾಳ್. ಅಲ್ಲದೆ, ಯಡಿಯೂರಪ್ಪ ಶೀಘ್ರವಾಗಿ ಸಿಎಂ ಸ್ಥಾನದಿಂದ ಕೆಳಗಿಳಿಯಲಿ ದ್ದಾರೆ ಎಂದು ಆಗಿಂದಾಗ್ಗೆ ಪ್ರೆಸ್​ಮೀಟ್ ಮಾಡುವ ಮೂಲಕ ಸಂಚಲ ಮೂಡಿಸು ತ್ತಿದ್ದರು. ಅದರಂತೆ ಕೊನೆಗೂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದದ್ದಾಯ್ತು. ಬಸವರಾಜ ಬೊಮ್ಮಾಯಿ (Basavaraja Bommai) ರಾಜ್ಯ ನೂತನ ಸಿಎಂ ಆಗಿ ಅಧಿಕಾರ ವಹಿಸಿದ್ದೂ ಆಗಿದೆ. ಆದರೆ, ಈ ನಡುವೆ ಬಸನಗೌಡ ಪಾಟೀಲ್ ಯತ್ನಾಲ್ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.


  ಅಸಲಿಗೆ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಅವರ ಮಗ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಹೈಕಮಾಂಡ್ ಎದುರು ಇಡಲಾಗಿತ್ತು. ಆದರೆ, ಹೈಕಮಾಂಡ್ ಈ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಆದರೆ, ಇದೀಗ ಮತ್ತೆ ವಿಜಯೇಂದ್ರ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಈ ಬಗ್ಗೆ ಕಿಡಿಕಾರಿರುವ ಬಸನಗೌಡ ಪಾಟೀಲ್ ಯತ್ನಾಲ್,


  "ಒಂದು ಕುಟುಂಬದಲ್ಲಿ ಎಷ್ಟು ಜನರಿಗೆ ಅವಕಾಶ ನೀಡಬೇಕು? ಒಂದೇ ಕುಟುಂಬದ ಮೂರು ನಾಲ್ಕು ಜನರಿಗೆ ಅವಕಾಶ ನೀಡಿದರೆ ಕಾರ್ಯಕರ್ತರು ಏನು ಮಾಡಬೇಕು? ಈಗಾಗಲೇ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಶಿವಮೊಗ್ಗದ ಸಂಸದರಾಗಿದ್ದಾರೆ. ಯಡಿಯೂರಪ್ಪ ಅವರು ಇಷ್ಟು ದಿನ ಸಿಎಂ ಆಗಿದ್ದರು, ಮತ್ತೊಬ್ಬ ಮಗ ವಿಜಯೇಂದ್ರ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ ಇಷ್ಟು ಸಾಲುವುದಿಲ್ಲವೇ? ಎಂದು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.


  ಇನ್ನು ಏನು ಆಗಬೇಕೆಂದು ಪರೋಕ್ಷವಾಗಿ ಬಿ.ಎಸ್.​ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಯತ್ನಾಲ್, "ವಿಜಯೇಂದ್ರ ನಿಗೆ ಸಚಿವ ಸ್ಥಾನ ನೀಡದಿದ್ದರೆ ಯತ್ನಾಳ್ ಗೂ ಸಚಿವ ನೀಡಬಾರದೆಂದು ಯಡಿಯೂರಪ್ಪ ಈ ಹಿಂದೆಯೇ ಹೈಕಮಾಂಡ್ ನಾಯಕರ ಎದುರು ಬೇಡಿಕೆ ಇಟ್ಟಿದ್ದರು. ಇದರಿಂದ ವಿಜಯೇಂದ್ರನಿಗೆ ಸಚಿವ ಸ್ಥಾನ ತಪ್ಪಿಸಿದ್ದು ಯತ್ನಾಳ ಎಂಬುದು ಸಾಬೀತಾದಂತಾಗಿದೆ.


  ಇದನ್ನೂ ಓದಿ: Mysterious Fever in Firozabad| ನಿಗೂಢ ರೋಗಕ್ಕೆ ಉತ್ತರಪ್ರದೇಶದ ಫಿರೋಜಾಬಾದ್​ನಲ್ಲಿ 33 ಮಕ್ಕಳು ಸೇರಿ 40 ಜನ ಸಾವು!


  ಯಾರನ್ನು ಬೇಕಾದ್ರೆ ಸಚಿವರನ್ನಾಗಿ ಮಾಡಿ ಆದರೆ ಯತ್ನಾಳರನ್ನು ಮಾತ್ರ ಸಚಿವರನ್ನಾಗಿ ಮಾಡಬೇಡಿ ಎಂದು ಯಡಿಯೂರಪ್ಪ ಹೈಕಮಾಂಡ್ ನಾಯಕರ ಎದುರು ಆಗ್ರಹಿಸಿದ್ದರು ಅವರನ್ನು ಸಚಿವರನ್ನಾಗಿ ಮಾಡದಿದ್ದರೆ ವಿಜಯೇಂದ್ರರನ್ನು ಮಾಡಲ್ಲ ಎಂದು ವರಿಷ್ಠರು ಹೇಳಿದ್ದರು. ಹೀಗಾಗಿ ವಿಜಯೆಂದ್ರ ಅವರಿಗೂ ಸಚಿವ ಸ್ಥಾನ ತಪ್ಪಿತು" ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಇಂದು ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ. ಒಟ್ಟಾರೆ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿದಿದ್ದರೂ ಸಹ ಯತ್ನಾಳ್ ಮತ್ತು ಬಿಎಸ್​ವೈ ಕುಟುಂಬದ ನಡುವಿನ ವಾಗ್ಯುದ್ಧ ಮಾತ್ರ ಮುಗಿಯುವ ಯಾವುದೇ ಲಕ್ಷಣಗಳೂ ಗೋಚರಿಸುತ್ತಿಲ್ಲ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published: