ಕಳ್ಳನನ್ನು ಹಿಡಿದು ಕೊರೋನಾ ಸೋಂಕು ಅಂಟಿಸಿಕೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗುಣಮುಖ

ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾರ್ಡ್​ವೇರ್ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ್‌ ಜಿಲ್ಲಾ ಕಳ್ಳನನ್ನು ಬಂಧಿಸಿದ್ದರು. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಮೊದಲೇ ಕಳ್ಳತನ ಆರೋಪಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದ ಪೊಲೀಸ್‌ಗೂ ಕೋವಿಡ್ ಸೋಂಕು ತಗುಲಿತ್ತು.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಕಳ್ಳನನ್ನು ಹಿಡಿದು ಕೊರೋನಾ ಸೋಂಕು ಅಂಟಿಸಿಕೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಕಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾದ ಪೊಲೀಸ್ ಕಾನ್ಸ್‌ಟೇಬಲ್‌ರನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಆಸ್ಪತ್ರೆಯಿಂದ ಹೊರಗೆ ಬರುತ್ತಿದ್ದಂತೆ ಹೂಮಳೆ ಸುರಿಸಿದ್ದಾರೆ. ಶಾಲು ಹೊದಿಸಿ ಪೇಟ ತೊಡಿಸಿದ್ದಾರೆ. ಹೂಮಾಲೆ ಹಾಕಿ ಸತ್ಕರಿಸಿದ್ದಾರೆ. ಕೊರೋನಾ ಮಹಾಮಾರಿಯನ್ನು ಎದುರಿಸಿ ಗೆದ್ದು ಬಂದಿರುವ ಪೊಲೀಸ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾರ್ಡ್​ವೇರ್ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ್‌ ಜಿಲ್ಲಾ ಕಳ್ಳನನ್ನು ಬಂಧಿಸಿದ್ದರು. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಮೊದಲೇ ಕಳ್ಳತನ ಆರೋಪಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದ ಪೊಲೀಸ್‌ಗೂ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿತ್ತು.

ಇದನ್ನು ಓದಿ: ರಾಜ್ಯದ ಡಿಸಿಗಳ ಜತೆ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್​​​: ಇಲ್ಲಿವೆ ಸಭೆಯ ಮುಖ್ಯಾಂಶಗಳು

ಇದೀಗ ಕಾನ್ಸ್‌ಟೇಬಲ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್‌ನಿಂದ ಹೊರ ಬಂದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಇಲಾಖೆಯ ಅಧಿಕಾರಿಗಳು ಹಾರ್ದಿಕ ಸ್ವಾಗತ ಕೋರುವ ಮೂಲಕ ನೈತಿಕ ಬಲ ತುಂಬಿದ್ದಾರೆ.
Published by:HR Ramesh
First published: