ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಗರಿ- ವಾಣಿಜ್ಯ ನಗರದಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್‌ಫಾರ್ಮ್

ಪ್ರತಿ ನಿತ್ಯ 55 ರೈಲುಗಳು ಹುಬ್ಬಳ್ಳಿ  ಮಾರ್ಗವಾಗಿ ಸಂಚರಿಸುತ್ತಿವೆ. ಸರಾಸರಿ 36,800ಕ್ಕೂ ಹೆಚ್ಚು ಜನ ಪ್ರಯಾಣಿಕರರು ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ

ಹುಬ್ಬಳ್ಳಿ ರೈಲ್ವೆ ನಿಲ್ದಾಣ

ಹುಬ್ಬಳ್ಳಿ ರೈಲ್ವೆ ನಿಲ್ದಾಣ

  • Share this:
ಹುಬ್ಬಳ್ಳಿ(ಜೂ.06): ವಾಣಿಜ್ಯ ನಗರ ಹುಬ್ಬಳ್ಳಿಯ ಹಿರಿಮೆಗೆ ಈಗ ಮತ್ತೊಂದು ಗರಿ ಸೇರಲಿದೆ. ನೈಋತ್ಯ ರೈಲ್ವೇ ವಲಯದ ಕೇಂದ್ರ ಕಚೇರಿ ಹೊಂದಿರುವ ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ವಿಶ್ವದ ಅತೀ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್​ ನಿರ್ಮಾಣವಾಗಲಿದೆ. ಈಗಿರುವ 550 ಮೀಟರ್ ಉದ್ದದ್ದ ಒಂದನೇ ಪ್ಲಾಟ್‌ಫಾರ್ಮ್‌ನ್ನು 1,400 ಮೀಟರ್‌ಗೆ ಹೆಚ್ಚಿಸುವ ಕಾರ್ಯ ಭರದಿಂದ ಸಾಗಿದೆ. ಪ್ಲಾಟ್‌ಫಾರ್ಮ್ ಒಟ್ಟು ಹತ್ತು ಮೀಟರ್ ಅಗಲವಾಗಲಿದೆ.

ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್‌ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಸದ್ಯ ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದದ ರೈಲ್ವೆ ಪ್ಲಾಟ್ ‌ಫಾರ್ಮ್ ಇದೆ. ಅದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್ ಈಗ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ.

ಪ್ರತಿ ನಿತ್ಯ 55 ರೈಲುಗಳು ಹುಬ್ಬಳ್ಳಿ  ಮಾರ್ಗವಾಗಿ ಸಂಚರಿಸುತ್ತಿವೆ. ಸರಾಸರಿ 36,800ಕ್ಕೂ ಹೆಚ್ಚು ಜನ ಪ್ರಯಾಣಿಕರರು ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ಹೀಗಾಗಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾಟ್‌ಫಾರ್ಮ್ ಅವಶ್ಯಕತೆ‌ ಇದೆ. ಈಗಿರುವ ಐದು ಪ್ಲಾಟ್ ಫಾರ್ಮ್‌‌ಗಳನ್ನು ಎಂಟಕ್ಕೆ ಹೆಚ್ಚಿಸುವ ಯೋಜನೆ ಸಿದ್ಧವಾಗಿದೆ. ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೇ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯಾ ತಿಳಿಸಿದ್ದಾರೆ.

ವಾಣಿಜ್ಯ ನಗರ ಹುಬ್ಬಳ್ಳಿಯ ಮುಕುಟಕ್ಕೆ ಈಗ ಮತ್ತೊಂದು ಹಿರಿಮೆಯ ಗರಿ ಸೇರಲಿದೆ. ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಛೋಟಾ ಮುಂಬೈ ಮತ್ತೊಂದು ದಾಖಲೆ ಬರೆಯಲು ಸದ್ದಿಲ್ಲದೇ ಸಿದ್ಧತೆ ನಡೆಸುತ್ತಿದೆ. ಇದರಿಂದ ಇಡೀ ದೇಶದ ಜನ ಹುಬ್ಬಳ್ಳಿಯತ್ತ ತಿರುಗಿ ನೋಡುವಂತೆ ಆಗಿದೆ. ರಾಜ್ಯದ ಅತ್ಯಂತ ಜನನಿಬಿಡ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯ ಚರ್ಚಯ ಕೇಂದ್ರ ಬಿಂದುವಾಗಿದೆ.

ಅಂತಾರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣ, ಸ್ಮಾರ್ಟ್ ಸಿಟಿ ಹಣೆ ಪಟ್ಟಿಯನ್ನು ಕಟ್ಟಿಕೊಂಡಿರುವ ಹುಬ್ಬಳ್ಳಿಯ ರೈಲ್ವೆ ನಿಲ್ದಾಣವನ್ನೂ ಸ್ಮಾರ್ಟ್ ಮಾಡಲಾಗುತ್ತಿದೆ. ಜನದಟ್ಟಣೆ ಮತ್ತು ಪ್ರಯಾಣಿಕರ ಸಂಖ್ಯೆಯನ್ನು ಅದರಿಸಿ ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ಮೆಲ್ದರ್ಜೆಗೆ ಏರಿಸಲಾಗುತ್ತಿದೆ. 2021ರ ಅಂತ್ಯದೊಳಗಾಗಿ 1400 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ನಿರ್ಮಿಸುವ ಮೂಲಕ ಹೊಸ ದಾಖಲೆ ಬರೆಯಲು ಸೌತ್ ವೆಸ್ಟರ್ನ್ ರೈಲ್ವೆ ತಯಾರಿ ನಡೆಸಿದೆ.

ಇದನ್ನೂ ಓದಿ : ವಿಜಯಪುರದಲ್ಲಿ 3 ಜನ ಕೊರೋನಾ ವಾರಿಯರ್ಸ್ ಸೇರಿ ಒಂದೇ ದಿನ 53 ಜನರಿಗೆ ತಗುಲಿದ ಸೋಂಕು ; ಆತಂಕದಲ್ಲಿ ಜಿಲ್ಲೆಯ ಜನರು

ಪ್ರಸ್ತುತ 1,366 ಮೀಟರ್ ವಿಸ್ತೀರ್ಣ ಹೊಂದಿದ್ದ ಈಶಾನ್ಯ ರೈಲ್ವೆ ವಲಯದ ಕೇಂದ್ರ ಸ್ಥಾನ ಉತ್ತರ ಪ್ರದೇಶದ ಗೋರಕ್‌ಪುರ ಜಂಕ್ಷನ್ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಎನ್ನುವ ಖ್ಯಾತಿ ಹೊಂದಿತ್ತು. ಇದಕ್ಕೂ ಮೊದಲು ವೆಸ್ಟ್ ಬೆಂಗಾಲ್ ಖಾರಗ್ ಪುರ್ ಹಾಗೂ ಕೇರಳದ ಕೊಲ್ಹಾಮ್ ರೈಲು ನಿಲ್ದಾಣಗಳು ಜಂಕ್ಷನ್ ವಿಸ್ತೀರ್ಣದಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಂಡಿದ್ದವು. ಆದರೆ, ಸದ್ಯದ ಬೆಳವಣಿಗೆಯನ್ನ ನೋಡಿದ್ರೆ ಹುಬ್ಬಳ್ಳಿ, ಈ ಎಲ್ಲ ನಗರಗಳನ್ನು ಮೀರಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನೊ ಹೆಗ್ಗಳಿಕೆಗೆ ಪಾತ್ರವಾಗುವುದರಲ್ಲಿ ಸಂಶಯವೇ ಇಲ್ಲ. ಕೆಲವೇ ವರ್ಷಗಳ ಹಿಂದೆ ಸುಸಜ್ಜಿತ ರೈಲ್ವೆ ನಿಲ್ದಾಣವನ್ನ ನಿರ್ಮಿಸಿ ಜನರ ಪ್ರಶಂಸೆಗೆ ಪಾತ್ರವಾಗಿದ್ದ ಸೌತ್ ವೆಸ್ಟರ್ನ್ ರೈಲ್ವೆ ಈಗ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರವಾಗಿದೆ.
First published: