HOME » NEWS » District » HUBLI FARMERS PROTEST AGAINST CENTRAL GOVERNMENT ANTI FARMER LAWS PTH MAK

ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ; ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ

ನಿನ್ನೆಯ ಸಭೆ ವಿಫಲವಾಗಿರುವುದರಿಂದ ನಾಳೆ (ಡಿಸೆಂಬರ್ 3) ರೈತರ ಜೊತೆಗೆ ಕೇಂದ್ರ ಸರ್ಕಾರ ಮತ್ತೊಂದು ಸಭೆ ನಡೆಸಲಿದೆ. ಹಿಂದೆ ನವೆಂಬರ್ 13ರ ಸಭೆ ವಿಫಲವಾದಾಗಲೇ ಡಿಸೆಂಬರ್ 3ರಂದು ಮತ್ತೊಂದು ಸುತ್ತಿನ ಸಭೆ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು.‌ ಆಗಲೇ ರೈತರು ನವೆಂಬರ್ 26ರಿಂದ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದ್ದರು.

news18-kannada
Updated:December 2, 2020, 3:35 PM IST
ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯ; ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ
ರೈತರ ಪ್ರತಿಭಟನೆ.
  • Share this:
ಹುಬ್ಬಳ್ಳಿ (ನವೆಂಬರ್​ 02); ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳ ವಿರುದ್ಧ ಇಡೀ ದೇಶದ ರೈತ ಸಮೂಹ ಸಿಡಿದೆದ್ದಿದೆ. ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಪ್ರತಿಭಟನೆ ಇದೀಗ 7ನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೆ, ಈ ರೈತ ಪ್ರತಿಭಟನೆಯನ್ನು ಬೆಂಬಲಿಸಿ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿ ಹುಬ್ಬಳ್ಳಿಯಲ್ಲೂ ರೈತರು ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಕಳಸಾ- ಬಂಡೂರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ನಗರದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ನಡೆಸಿದ್ದು, ಕಪ್ಪು ಬಟ್ಟೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ‌ಗಳನ್ನು ಕೂಗಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಹೋರಾಟಗಾರರ ಜೊತೆ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅಲ್ಲದೆ, ಹೋರಾಟ ನಿರತ ಅನ್ನದಾತರ ಜೊತೆ ಪ್ರಧಾನಿಗಳು ಮಾತುಕತೆ ನಡೆಸಬೇಕು. ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ, ಈ ಕುರಿತು ಹುಬ್ಬಳ್ಳಿ ತಹಶೀಲ್ದಾರ್ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಇದರಿಂದ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳ‌ ನಡುವೆ ನಿನ್ನೆ ಸಭೆ ನಡೆದಿತ್ತು. ಆ ಸಭೆ ವಿಫಲವಾಗಿದ್ದು ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಚಿವರುಗಳು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ವಿವಾದಾತ್ಮಕ ಮಸೂದೆಗಳನ್ನು ಹಿಂಪಡೆಯಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಪರಸ್ಪರ ಸಹಕಾರ ಮೂಡದೆ ಸಭೆಯನ್ನು ವಿಸರ್ಜಿಸಬೇಕಾಯಿತು.

ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ‌ಈಡೇರಿಸದಿದ್ದರೆ ದೆಹಲಿಯ ಎಲ್ಲಾ ಗಡಿಗಳ ರಸ್ತೆಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಸಿದ್ದರು. ಇದರಿಂದ ಬೆಚ್ಚಿದ ಕೇಂದ್ರ ಸರ್ಕಾರ ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಆಹ್ವಾನಿಸಿತ್ತು. ಆದರೆ ಈಗಾಗಲೇ ಎರಡು ಸುತ್ತಿನ‌ ಮಾತುಕತೆಗಳು ನಡೆದು ಎರಡು ಸಭೆಗಳೂ ವಿಫಲವಾಗಿರುವುದರಿಂದ ಅಂದರೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ದವಿಲ್ಲ ಎಂದು ರೈತರು ಸಭೆಗೆ ಒಪ್ಪಿರಲಿಲ್ಲ. ಕಡೆಗೆ ಒಪ್ಪಿ ನಿನ್ನೆಯ ಮಾತುಕತೆಯಲ್ಲಿ ರೈತ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಆದರೆ ಮೂರನೇ ಸಭೆಯೂ ವಿಫಲವಾಗಿದೆ.

ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳಗಳಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ : ಎಂಎಸ್​ಪಿ ಎಂದರೇನು? ಕೇಂದ್ರ ಕೃಷಿ ಕಾಯ್ದೆಯ ವಿರುದ್ಧ ರೈತರ ಭಯಕ್ಕೆ ಮತ್ತು ಹೋರಾಟಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿದೇಶದ ಬೇರೆ ಬೇರೆ ಭಾಗಗಳಿಂದ ರೈತರು ಸಾಂಕೇತಿಕವಾಗಿ ಭಾಗವಹಿಸಿದ್ದರೆ, ದೆಹಲಿಗೆ ಸಮೀಪ ಇರುವ ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ‌ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಈ‌ ಹಿನ್ನೆಲೆಯಲ್ಲಿ ದೆಹಲಿ‌ ಪೊಲೀಸರು ಹರಿಯಾಣ, ರಾಜಸ್ಥಾನ, ಪಂಜಾಬ್ ಮತ್ತು ಉತ್ತರ ಪ್ರದೇಶಗಳಿಂದ‌ ಬರುವ ರಸ್ತೆಗಳಲ್ಲಿ ರೈತರನ್ನು ತಡೆದಿದ್ದಾರೆ.

ನಿನ್ನೆಯ ಸಭೆ ವಿಫಲವಾಗಿರುವುದರಿಂದ ನಾಳೆ (ಡಿಸೆಂಬರ್ 3) ರೈತರ ಜೊತೆಗೆ ಕೇಂದ್ರ ಸರ್ಕಾರ ಮತ್ತೊಂದು ಸಭೆ ನಡೆಸಲಿದೆ. ಹಿಂದೆ ನವೆಂಬರ್ 13ರ ಸಭೆ ವಿಫಲವಾದಾಗಲೇ ಡಿಸೆಂಬರ್ 3ರಂದು ಮತ್ತೊಂದು ಸುತ್ತಿನ ಸಭೆ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು.‌ ಆಗಲೇ ರೈತರು ನವೆಂಬರ್ 26ರಿಂದ ದೆಹಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದ್ದರು. ರೈತರ ಪ್ರತಿಭಟನೆ ಇಷ್ಟು ತೀವ್ರವಾಗಿರುತ್ತದೆ ಎಂದು ಅಂದಾಜು ಮಾಡದ ಕೇಂದ್ರ ಸರ್ಕಾರ ಉಪೇಕ್ಷೆ ಮಾಡಿತ್ತು.‌ ಈಗ ಪ್ರತಿಭಟನೆ ತೀವ್ರಗೊಳ್ಳುತ್ತಿರುವುದರಿಂದ ಕಳವಳಕ್ಕೀಡಾಗಿ ನಿನ್ನೆಯೇ ಸಭೆ ನಡೆಸಿತು. ನಿನ್ನೆಯೂ ಸಭೆ ವಿಫಲವಾಗಿರುವುದರಿಂದ ನಾಳಿನ ಸಭೆ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕು.
Published by: MAshok Kumar
First published: December 2, 2020, 3:31 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories