ಹುಬ್ಬಳ್ಳಿ: ಯುವತಿಯೊಬ್ಬಳ ನಗ್ನ ವಿಡಿಯೋ ಇಟ್ಟುಕೊಂಡು ಲಕ್ಷಾಂತರ ರೂ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಯುವತಿಗೆ ಬೆದರಿಕೆ ಹಾಕಿ ಬಲವಂತವಾಗಿ ಅಶ್ಲೀಲ ವಿಡಿಯೋ ದೃಶ್ಯ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುವುದಾಗಿ ಹೆದರಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಆಟೋ ಚಾಲಕನೊಬ್ಬನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೇಡಿಕೆಯಂತೆ 25 ಲಕ್ಷ ರೂ ಹಣ ನೀಡದಿದ್ದರೆ ನಗ್ನ ವಿಡಿಯೋ ರಿಲೀಸ್ ಮಾಡೋದಾಗಿ ಹುಬ್ಬಳ್ಳಿಯ ಆಟೋ ಚಾಲಕ ಬೆದರಿಕೆ ಹಾಕಿದ್ದ. ಈ ಸಂಬಂಧ ಯುವತಿ ತಾಯಿಯಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕ ಅನಿಲ್ ರಾಜ್ ವಿರುದ್ದ ದೂರು ದಾಖಲಿಸಲಾಗಿದೆ. ಆರೋಪಿ ಅನಿಲ್ ರಾಜ್ ಯುವತಿಯ ತಾಯಿಗೆ ಪರಿಚಿತ. ಯುವತಿಯ ತಾಯಿ ಸರ್ಕಾರಿ ಉದ್ಯೋಗಿಯಾಗಿದ್ದರ ಹಿನ್ನೆಲೆಯಲ್ಲಿ ಅನಿಲ್ ರಾಜ್, ಯುವತಿ ತಾಯಿಯನ್ನ ತನ್ನ ಆಟೋದಲ್ಲಿ ಕಛೇರಿಗೆ ಕರೆದುಕೊಂಡು ಹೋಗಿಬರುತ್ತಿದ್ದ.
ತಾಯಿ ಮನೆಯಲ್ಲಿ ಇಲ್ಲದ ಸಂದರ್ಭ ನೋಡಿಕೊಂಡ ಅನಿಲ್ ರಾಜ್, ನಿಮ್ಮ ತಾಯಿ ಅಕ್ಕಿ ಕಳುಹಿಸಿದ್ದಾರೆ ಅಂತ ಮನೆಗೆ ಬಂದಿದ್ದ. ಚಾಕು ತೋರಿಸಿ ಬೆದರಿಸಿ ಯುವತಿಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿದ್ದ ಎನ್ನಲಾಗಿದೆ. ಯುವತಿ ಬಳಿ ಇದ್ದ 40 ಗ್ರಾಮ್ ಚಿನ್ನವನ್ನೂ ಲಪಟಾಯಿಸಿದ್ದ. ಬಳಿಕ 25 ಲಕ್ಷ ಹಣಕ್ಕೂ ಬೇಡಿಕೆ ಇಟ್ಟಿದ್ದ. ಹಣ ನೀಡದೇ ಹೊದ್ರೆ ವಿಡಿಯೋ ರಿಲೀಸ್ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದ.
ಇದರಿಂದ ರೋಸಿಹೋದ ಯುವತಿಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆಟೊ ಚಾಲಕ ಅನಿಲ್ ರಾಜ ಡೋಂಗ್ರೆಯನ್ನು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆಷ್ಟೇ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಪ್ರತ್ಯಕ್ಷಗೊಂಡು ಮಾತನಾಡಿಸಿದಂತೆ ನಟಿಸಿ ಫೋಟೋ ಎಡಿಟ್ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಆಟೋ ಚಾಲಕನೋರ್ವ ಬ್ಲಾಕ್ ಮೇಲ್ ಮಾಡಲು ಹೋಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ವರದಿ: ಶಿವರಾಮ ಅಸುಂಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ