KRS Dam ನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ; ನದಿ ಪಾತ್ರದ ಜನರ ಎದೆಯಲ್ಲಿ ಡವ ಡವ!

ಸದ್ಯ 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂ‌ಗೆ 17,135 ಕ್ಯೂಸೆಕ್  ಒಳಹರಿವಿದೆ. ಇನ್ನು ಜಲಾಶಯ ಭರ್ತಿ ಆಗಿರೋದ್ರಿಂದ ಜಲಾಶಯದಿಂದ 18,469 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

ಕಾವೇರಿ ನದಿ

ಕಾವೇರಿ ನದಿ

  • Share this:
    ಮಂಡ್ಯ; ಬಂಗಾಳ ಕೊಲ್ಲೆಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದು ಒಂದು ವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ (Heavy Rain In Accross State). ಹೆಚ್ಚು ಪ್ರಮಾಣದ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳು (Dam) ಸೇರಿ ಎಲ್ಲ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದಿವೆ. ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ (Mandya District) ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ (KRS Dam) ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇರುವ ಕಾರಣ ಕಾವೇರಿ ನದಿ ಪಾತ್ರದ ಜನರು ಮುನ್ನೆಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆದೇಶಿಸಲಾಗಿದೆ.

    ಈಗಾಗಲೇ ಕೆಆರ್‌ಎಸ್ ಭರ್ತಿಯಾಗಿರುವ ಹಿನ್ನೆಲೆ ನವೆಂಬರ್ 2 ರಂದು ಕೆಆರ್‌ಎಸ್‌ಗೆ ಸಿಎಂ  ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದಾರೆ. ಇದಾದ‌ ಬಳಿಕವೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್ ಭರ್ತಿಯಾಗಿಯೇ ಉಳಿದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಪಾರ ಪ್ರಮಾಣದ ಮಳೆ ಬಿದ್ದರೆ ಡ್ಯಾಂ‌ನಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕ ಕ್ರಮಗಳನ್ನು ಅನುಸರಿಸಬೇಕೆಂದು ಆದೇಶಿಸಲಾಗಿದೆ.

    ನಿಮಿಷಾಂಭ ದೇವಸ್ಥಾನದ ಬಳಿ ಭಕ್ತರು ನದಿಗೆ ಇಳಿಯದಂತೆ ಆದೇಶ

    ಈಗಾಗಲೇ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಬಳಿ ಸ್ನಾನ ಮಾಡಲು ಭಕ್ತರು ಕಾವೇರಿ ನದಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನದ ನದಿ ಬಳಿ ಬ್ಯಾರಿಕೆಡ್ ಗಳನ್ನು ಹಾಕಲಾಗಿದ್ದು, ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ಬೋಟಿಂಗ್ ನಿಷೇಧಿಸುವ ಸಾಧ್ಯತೆ ಇದೆ.

    ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆರಾಯ

    ಇನ್ನು ಕಳೆದ ಒಂದು ವಾರದಿಂದ ಬಿಟ್ಟು ಬಿಡದೇ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಹಲವು ಅವಘಡಗಳು ಸಂಭವಿಸಿದ್ದು, ಕಳೆದ ರಾತ್ರಿ ಬಿದ್ದ ಮಳೆಗೆ ಕೆಆರ್‌ಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲವೃತಗೊಂಡಿದೆ. ಹಳ್ಳದ ಪ್ರದೇಶದಲ್ಲಿ ಬಸ್ ನಿಲ್ದಾಣ ಇರುವ ಕಾರಣ ಏಕಾಏಕಿ ನೀರು ಹರಿದು ಬಂದ ಕಾರಣ ಬಸ್ ನಿಲ್ದಾಣ ಕೆರೆಯಂತೆ ಆಗಿದೆ. ಇದರಿಂದ ಬಸ್ ನಿಲ್ದಾಣದಲ್ಲಿರುವ ಬೇಕರಿ, ಹೋಟೆಲ್, ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿದೆ. ಈ ಅವಘಡದಿಂದ ಪ್ರಯಾಣಿಕರು ಪರದಾಡವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ತಿಂಗಳು ಸಹ ಈ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲವೃತಗೊಂಡಿತ್ತು. ಹೀಗಾಗಿ ಈ ಬಗ್ಗೆ ಶ್ರೀಘ್ರವೇ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅವಘಡಗಳು ಸಂಭವಿಸುವ ಸಾಧ್ಯತೆ ಇದೆ.

    ಇದನ್ನು ಓದಿ: COVID Vaccine; ಕೋವಿಡ್ ಲಸಿಕೆ ಹಾಕುತ್ತಾರೆಂದು ಜಮೀನಿಂದ ಓಡಿ ಹೋದ ರೈತ ಕಾರ್ಮಿಕ ಮಹಿಳೆ, ಮತ್ತೋರ್ವ ಮಹಿಳೆಯಿಂದ ಹಲ್ಲೆಗೆ ಯತ್ನ!

    ಸದ್ಯ 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂ‌ಗೆ 17,135 ಕ್ಯೂಸೆಕ್  ಒಳಹರಿವಿದೆ. ಇನ್ನು ಜಲಾಶಯ ಭರ್ತಿ ಆಗಿರೋದ್ರಿಂದ ಜಲಾಶಯದಿಂದ 18,469 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

    ಮಳೆಯಿಂದಾಗಿ ಬೆಳೆ ಹಾನಿ

    ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಬಹುತೇಕ ಬೆಳೆ ಹಾನಿಗೀಡಾಗಿವೆ. ತರಕಾರಿ, ಭತ್ತ, ರಾಗಿ ಬೆಳೆಗಳು ಮಳೆಯಿಂದ ಬಹುತೇಕ ನಾಶವಾಗಿವೆ. ಹಾನಿಯಾಗಿರುವ ಬೆಳೆಗೆ ಪರಿಹಾರ ನೀಡಬೇಕು ಎಂದು ಸಂತ್ರಸ್ತ ರೈತರು ಆಗ್ರಹ ಮಾಡಿದ್ದಾರೆ.

    ವರದಿ - ಸುನೀಲ್ ಗೌಡ, ಮಂಡ್ಯ
    Published by:HR Ramesh
    First published: