HOME » NEWS » District » ILLEGAL LIQUOR SALE IN LODGE AT YADAGIRI DISTRICT RH

ಲಾಡ್ಜ್​ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ; 2 ಲಕ್ಷ ರೂ. ಮೌಲ್ಯದ ಎಣ್ಣೆ ಜಪ್ತಿ

ಅದೇ ರೀತಿ ಶಹಾಪುರ ಪಟ್ಟಣದಲ್ಲಿ ಡಾಬಾವೊಂದರಲ್ಲಿ ಅಕ್ರಮವಾಗಿ 30 ಸಾವಿರ ಮೌಲ್ಯದ ಮದ್ಯದ ಬಾಟಲ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲಾಗುತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ ಅವರ ನೇತೃತ್ವದ ತಂಡ ದಾಳಿ ಮಾಡಿ 30 ಸಾವಿರ ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿದೆ.

news18-kannada
Updated:July 17, 2020, 5:09 PM IST
ಲಾಡ್ಜ್​ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ; 2 ಲಕ್ಷ ರೂ. ಮೌಲ್ಯದ ಎಣ್ಣೆ ಜಪ್ತಿ
ವಶಕ್ಕೆ ಪಡೆದ ಅಕ್ರಮವಾಗಿ ಸಂಗ್ರಹಿಸಿ ಇಡಲಾದ ಮದ್ಯದ ಬಾಟಲಿಗಳು.
  • Share this:
ಯಾದಗಿರಿ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ತಡೆಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿ್ದು, ಜುಲೈ 22ರವರೆಗೆ ಲಾಕ್​ಡೌನ್ ಮಾಡಲಾಗಿದೆ. ಲಾಕ್​ಡೌನ್ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ. ಆದರೆ, ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜೋರಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ವೈಷ್ಣವಿ ಲಾಡ್ಜ್ ನಲ್ಲಿ ಭಾರಿ ಮೌಲ್ಯದ ಮದ್ಯದ ಬಾಟಲ್ ಗಳನ್ನು ಸಂಗ್ರಹಿಸಿ ಅಕ್ರಮವಾಗಿ ಮಾರಾಟ ಮಾಡಲಾಗುತಿತ್ತು. ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಮೇಲೆ ಸುರಪುರ ಉಪವಿಭಾಗದ ವೆಂಕಟೇಶ ಹೊಗಿಬಂಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿ ವೇಳೆ ಲಾಡ್ಜ್ ಸಂಪೂರ್ಣ ಜಾಲಾಡಿದ್ದಾರೆ. ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ. ಅಂದಾಜು 2 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಲಾಡ್ಜ್  ಮಾಲೀಕ  ಉದಯ ಎಂಬುವರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅದೇ ರೀತಿ ಶಹಾಪುರ ಪಟ್ಟಣದಲ್ಲಿ ಡಾಬಾವೊಂದರಲ್ಲಿ ಅಕ್ರಮವಾಗಿ 30 ಸಾವಿರ ಮೌಲ್ಯದ ಮದ್ಯದ ಬಾಟಲ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲಾಗುತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ ಅವರ ನೇತೃತ್ವದ ತಂಡ ದಾಳಿ ಮಾಡಿ 30 ಸಾವಿರ ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿದೆ. ದಾಳಿ ವೇಳೆ ಪೊಲೀಸ್ ಕಾನ್ಸ್​ಟೇಬಲ್​ಗಳಾದ ಉಮಾಕಾಂತ, ಮಂಜುನಾಥ, ಡಿವೈಎಸ್ಪಿ ವಾಹನ ಚಾಲಕ ಚಂದಪ್ಪ ಹಾಗೂ ಇಬ್ಬರು ಗ್ರಾಮ ಸಹಾಯಕರು ಇದ್ದರು.

ಇದನ್ನು ಓದಿ: ಬೆಂಗಳೂರಲ್ಲಿ ಮತ್ತೆ ಲಾಕ್​ಡೌನ್​ ಇಲ್ಲ, ಪದೇಪದೇ ಪ್ರಸ್ತಾಪ ಮಾಡ್ಬೇಡಿ: ಅಧಿಕಾರಿಗಳಿಗೆ ಸಿಎಂ ಬಿಎಸ್​ವೈ ಸೂಚನೆ

ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಅವರು ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳಿಗೆ ಕಡಿವಾಣ ಹಾಕಲು ಲಾಕ್ ಡೌನ್  ಜಾರಿ ಮಾಡಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು ಪೊಲೀಸರು ದಾಳಿ ಮಾಡಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಕೆಲಸ ಮಾಡುತ್ತಿದ್ದಾರೆ.
Published by: HR Ramesh
First published: July 17, 2020, 5:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories