ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಿ: ಸಚಿವ ಕೆ.ಗೋಪಾಲಯ್ಯ ಸೂಚನೆ

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೆ ಪ್ರತ್ಯೇಕವಾದ ಆಸ್ಪತ್ರೆಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಹಾಗೂ ಖಾಸಗಿ ಆಸ್ಪತ್ರೆಗಳ ಅವಶ್ಯಕತೆ ಉಂಟಾದರೆ ಸಹಕರಿಸುವಂತೆ ಅವುಗಳ ಮುಖ್ಯಸ್ಥರ ಸಭೆ ನಡೆಸಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರಾದ ಕೆ. ಗೋಪಾಲಯ್ಯ ಅವರು ತಿಳಿಸಿದರು.

ಸಚಿವ ಕೆ. ಗೋಪಾಲಯ್ಯ.

ಸಚಿವ ಕೆ. ಗೋಪಾಲಯ್ಯ.

  • Share this:
ಹಾಸನ; ಕೋವಿಡ್-19 ಸೋಂಕನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕಡ್ಡಾಯವಾಗಿ ಕೊಳಗೇರಿಯಲ್ಲಿನ ಜನರು, ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಹಾಗೂ ಸವಿತಾ ಸಮಾಜದವರು, ಮತ್ತು ಇತರೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರನ್ನು ಪತ್ತೆ ಮಾಡಿ ತಪಾಸಣೆಗೆ ಒಳಪಡಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಅವರು ಸೂಚನೆ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಸರ್ಕಾರ ಕೋವಿಡ್-19 ಪರೀಕ್ಷೆಯ ಪ್ರಮಾಣ ಹೆಚ್ಚಿಸುವಂತೆ ಆದೇಶ ಹೊರಡಿಸಿದ್ದು, ಕಳೆದ ಐದು ದಿನದಲ್ಲಿ 1,795 ಜನರನ್ನು ಪರೀಕ್ಷೆ ಮಾಡಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಿ ಎಲ್ಲಾ ಸೋಂಕಿತರಿಗೂ ಉತ್ತಮ ಮೂಲಭೂತ ಸೌಕರ್ಯವನ್ನು ಕಡ್ಡಾಯವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೋವಿಡ್ ಆಸ್ಪತ್ರೆಯಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಆಹಾರ, ಕುಡಿಯುವ ನೀರು ನೀಡಿ ಸ್ನಾನಕ್ಕೆ ಪ್ರತ್ಯೇಕ ಬಕೆಟ್ ಒದಗಿಸಿ ಹಾಗೂ ಮೂರು ಬಾರಿ ಕೊಠಡಿ ಸ್ಚಚ್ಛತೆ ಮಾಡಬೇಕು ಮತ್ತು ಸೋಂಕಿತರಿಗೆ ಆತ್ಮ ಸ್ಥೈರ್ಯ ತುಂಬಬೇಕು ಎಂದರು.

ಲಾಕ್ ಡೌನ್ ಸಮಯದಲ್ಲಿ ಪಡಿತರ ಚೀಟಿ ಹೊಂದಿದವರಿಗೆ, ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಹಾಗೂ ಹೊರ ರಾಜ್ಯದ ಕಾರ್ಮಿಕರಿಗೆ ಪಡಿತರ ನೀಡಲಾಗಿದೆ. ಮುಂದೆಯೂ ಸಂಕಷ್ಟಕ್ಕೆ ಈಡಾದ ಜನರಿಗೆ ಅವರ ಆಧಾರ್ ಕಾರ್ಡ್ ಆಧಾರದಲ್ಲಿಯೇ ಪಡಿತರ ನೀಡಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೆ ಪ್ರತ್ಯೇಕವಾದ ಆಸ್ಪತ್ರೆಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಹಾಗೂ ಖಾಸಗಿ ಆಸ್ಪತ್ರೆಗಳ ಅವಶ್ಯಕತೆ ಉಂಟಾದರೆ ಸಹಕರಿಸುವಂತೆ ಅವುಗಳ ಮುಖ್ಯಸ್ಥರ ಸಭೆ ನಡೆಸಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರಾದ ಕೆ. ಗೋಪಾಲಯ್ಯ ಅವರು ತಿಳಿಸಿದರು.

ಇದನ್ನು ಓದಿ: ಸರ್ಕಾರ-ಖಾಸಗಿ ಆಸ್ಪತ್ರೆಗಳ ಮಾಲೀಕರ ಮಾತುಕತೆ ಫಲಪ್ರದ; ಕೆಲ ಬೇಡಿಕೆಯೊಂದಿಗೆ ಚಿಕಿತ್ಸೆ ನೀಡಲು ಒಪ್ಪಿಗೆ

ಶಾಲಾ ಮಕ್ಕಳಿಗೆ ನೀಡುತ್ತಿರುವ ಬೇಳೆಯು ಕಳಪೆ ಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಚನ್ನರಾಯಪಟ್ಟಣ ಹಾಗೂ ಹಾಸನ ಆಹಾರ ನಿಗಮದಲ್ಲಿ ಪರಿಶೀಲಿಸಲಾಗಿದೆ ಹಾಗೆಯೇ ಜಿಲ್ಲಾಧಿಕಾರಿಗಳಿಗೂ ಮತ್ತೊಮ್ಮೆ ಪರಿಶೀಲಿಸಲು ಸೂಚಿಸಲಾಗಿದೆ ಎಂದರು.
First published: