ಕೋಲಾರ; ಭಾರತದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇಲ್ಲದೇ ಇದ್ದಾಗ ಮಾತ್ರ ದೇಶಕ್ಕೆ ಸಾಲು ಸಾಲು ಕಷ್ಟದ ದಿನಗಳು ಎದುರಾಗುತ್ತಿವೆ. ಈ ಎಲ್ಲಾ ಕಷ್ಟಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಕಿಡಿಕಾರಿದ್ದಾರೆ.
ಕೊರೋನಾ ಲಾಕ್ಡೌನ್ ಸಡಿಲಿಕೆ ನಂತರ ಮೊದಲ ಬಾರಿಗೆ ಕೋಲಾರ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಕೆ.ಹೆಚ್ ಮುನಿಯಪ್ಪ, "ದೇಶದಲ್ಲಿ ಕೊರೋನಾ ಸಂಕಷ್ಟ ನಿಯಂತ್ರಣಕ್ಕೆ ಸಿಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಈ ನಡುವೆ ಕೇಂದ್ರ ಸರ್ಕಾರ ನಿರಂತರವಾಗಿ ತೈಲ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ.
ದೇಶದಲ್ಲಿ ಜಿಡಿಪಿ ಕುಸಿಯುತ್ತಿದ್ದು, ನಿರುದ್ಯೋಗ ಸಮಸ್ಯೆ, ಬಡತನ ದೇಶವನ್ನು ಕಾಡುತ್ತಿದೆ. ಭಾರತದ 20 ಜನ ಸೈನಿಕರು ಚೀನಾದವರಿಂದ ಹತರಾಗಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದ ವೇಳೆ ಇಂತಹ ಕಷ್ಟಕರ ದಿನಗಳು ಬಂದಿರಲಿಲ್ಲ. ಎಲ್ಲಾವನ್ನೂ ನಮ್ಮ ಪಕ್ಷ ಸರಿಯಾಗಿ ನಿಭಾಯಿಸಿತ್ತು. ಇನ್ನೂ ಸೈನಿಕರ ವಿಚಾರದಲ್ಲಿ ವಿರೋಧ ಪಕ್ಷಗಳು ಮಾಹಿತಿ ಕೇಳುತ್ತಿದ್ದರೂ ಮೋದಿಯವರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಅವರೇ ನೇರ ಹೊಣೆ" ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಬಾಯಿ ಬಿಟ್ಟರೆ ಬಣ್ಣಗೇಡು, ಕೈಲಾಗದ ನಾಯಕ ಗೋಲಾಟದಂತಿದೆ ಪ್ರಧಾನಿ ಮೋದಿ ಭಾಷಣ; ಸಿದ್ದರಾಮಯ್ಯ ಕಿಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ