ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು: ಕೇರಳಕ್ಕೆ ಹೋಗಿ ಬರುವವರ ಮೇಲೆ ನಿಗಾವಹಿಸಲು ಕೊಡಗು ಡಿಸಿ ಸೂಚನೆ 

ಸ್ಥಳದಲ್ಲಿಯೇ ಇದ್ದ ಚೆಕ್‍ಪೋಸ್ಟ್ ಸಿಬ್ಬಂದಿಗಳಿಗೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕೇರಳ ರಾಜ್ಯದಲ್ಲಿ ಕೋವಿಡ್ 19 ಮೂರನೇ ಅಲೆ ಆರಂಭವಾಗುತ್ತಿರುವ ಹಿನ್ನೆಲೆ ಸಾಕಷ್ಟು ಮುನ್ನೆಚ್ಚರ ವಹಿಸಬೇಕಿದೆ. ಆ ದಿಸೆಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಸ್ಥಳದಲ್ಲಿಯೇ ಇದ್ದ ಮಡಿಕೇರಿ ತಹಶೀಲ್ದಾರ್ ಮಹೇಶ್ ಅವರಿಗೂ ಸೂಚಿಸಿದ್ದಾರೆ.

ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್​ ಅಧಿಕಾರಿಗಳಿಗೆ ಸೂಚನೆ ನೀಡಿದರು

ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್​ ಅಧಿಕಾರಿಗಳಿಗೆ ಸೂಚನೆ ನೀಡಿದರು

  • Share this:
ಕೊಡಗು : ರಾಜ್ಯದಲ್ಲಿಯೇ ಕೋವಿಡ್ 19 ಪ್ರಕರಣಗಳು ಕಡಿಮೆ ಆಗುತ್ತಿದ್ದರು, ಗಡಿ ಜಿಲ್ಲೆ ಕೊಡಗಿನಲ್ಲಿ ಮಾತ್ರ ಕಡಿಮೆ ಆಗುತ್ತಿಲ್ಲ. ಇಂದಿಗೂ ನಿತ್ಯ 80 ರಿಂದ 100 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಇದು ಜಿಲ್ಲೆಯ ಮಟ್ಟಿಗೆ ತೀವ್ರ ಆತಂಕದ ವಿಷಯವಾಗಿದೆ.

ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಮಿತಿಮೀರಿ ದಾಖಲಾಗುತ್ತಿವೆ. ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಕೊಡಗಿನ ಮಡಿಕೇರಿ ತಾಲ್ಲೂಕಿನ ಕರಿಕೆ, ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಮತ್ತು ವಿರಾಜಪೇಟೆ ತಾಲ್ಲೂಕಿನ ಮಾಕುಟ್ಟ ಚೆಕ್ ಪೋಸ್ಟ್ ಮೂಲಕ ನಿತ್ಯ ಸಾವಿರಾರು ಜನರು ಕೇರಳಕ್ಕೆ ಹೋಗಿ ಬರುತ್ತಾರೆ. ಅದರಲ್ಲೂ ಭಾಗಮಂಡಲ ಮತ್ತು ಕರಿಕೆ ಭಾಗದ ನೂರಾರು ಜನರು ತಮ್ಮ ದಿನ ನಿತ್ಯದ ವ್ಯಾಪಾರ ವಹಿವಾಟುಗಳಿಗೂ ಕೇರಳವನ್ನೇ ಅವಲಂಬಿಸಿದ್ದಾರೆ.

ಅಷ್ಟೇ ಅಲ್ಲ, ನೂರಾರು ಜನರು ಕೂಲಿ ಕೆಲಸಗಳಿಗೂ ಕೇರಳಕ್ಕೆ ಹೋಗಿ ಬರುತ್ತಾರೆ. ಹೀಗಾಗಿ ಕೇರಳದಲ್ಲಿ ಕೋವಿಡ್ ಸೋಂಕು ಜಾಸ್ತಿ ಆಗುತ್ತಿರುವಂತೆ ಕೊಡಗು ಜಿಲ್ಲೆಯಲ್ಲೂ ಸೋಂಕು ಜಾಸ್ತಿ ಆಗುತ್ತದೆಯಾ ಎನ್ನೋ ಆತಂಕ ಶುರುವಾಗಿದೆ.

ಹೌದು ಕೊವಿಡ್ 19 ಸೋಂಕಿನ ಮೊದಲ ಅಲೆ ಮತ್ತು ಎರಡನೆ ಅಲೆ ಮೊಟ್ಟ ಮೊದಲು ಆರಂಭವಾಗಿದ್ದೇ ಇದೇ ಕೇರಳದಲ್ಲಿ. ಆರಂಭದಲ್ಲಿ ಕೋವಿಡ್ ನಿಯಂತ್ರಿಸುವುದರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಕೇರಳ ಈಗ ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ಸೋತಿದೆಯಾ ಎನ್ನೋ ಅನುಮಾನ ಎದುರಾಗಿದೆ. ಮಂಗಳವಾರ ಕೇರಳ ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 22, 000 ಸಾವಿರ ಪ್ರಕರಣಗಳು ದಾಖಲಾಗಿ 12% ರಷ್ಟು ಪಾಸಿಟಿವಿಟಿ ದರಕ್ಕೆ ಏರಿಕೆಯಾಗಿತ್ತು.

ಒಂದೇ ದಿನ 150 ಜನರು ಮೃತಪಟ್ಟಿದ್ದರು. ಇನ್ನು ಬುಧವಾರ ಕೂಡ 22,036 ಪಾಸಿಟಿವ್ ಪ್ರಕರಣಗಳು ದಾಖಲಾಗಿ, 11.2 ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ. ಅದೇ ದಿನ 131 ಜನರು ಮೃತಪಟ್ಟಿದ್ದರು.

ಇದೆಲ್ಲವೂ ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಗೆ ತೀವ್ರ ಆತಂಕ ಕಾಡುತ್ತಿದೆ. ಕೇರಳದಲ್ಲಿ ಮೂರನೆ ಅಲೆ ಆರಂಭವಾಗಿರುವಂತೆ ಕೊಡಗಿನಲ್ಲೂ ಮೂರನೇ ಅಲೆ ಆರಂಭವಾಗಿ ಬಿಡುತ್ತಾ ಎನ್ನೋ ಆತಂಕ ಎದುರಾಗಿದೆ.  ಹೀಗಾಗಿಯೇ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಗುರುವಾರ ಮಡಿಕೇರಿ ತಾಲ್ಲೂಕಿನ ಕರಿಕೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳದಲ್ಲಿಯೇ ಇದ್ದ ಚೆಕ್‍ಪೋಸ್ಟ್ ಸಿಬ್ಬಂದಿಗಳಿಗೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕೇರಳ ರಾಜ್ಯದಲ್ಲಿ ಕೋವಿಡ್ 19 ಮೂರನೇ ಅಲೆ ಆರಂಭವಾಗುತ್ತಿರುವ ಹಿನ್ನೆಲೆ ಸಾಕಷ್ಟು ಮುನ್ನೆಚ್ಚರ ವಹಿಸಬೇಕಿದೆ. ಆ ದಿಸೆಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಸ್ಥಳದಲ್ಲಿಯೇ ಇದ್ದ ಮಡಿಕೇರಿ ತಹಶೀಲ್ದಾರ್ ಮಹೇಶ್ ಅವರಿಗೂ ಸೂಚಿಸಿದ್ದಾರೆ.

ಇದನ್ನೂ ಓದಿ: China: ಮಲಬದ್ಧತೆ ಸಮಸ್ಯೆಗೆ ಹಳ್ಳಿಮದ್ದು ಮಾಡಿದ ವ್ಯಕ್ತಿ ಪ್ರಾಣವನ್ನೇ ಬಿಡಬೇಕಾಯಿತು..!

ಅಲ್ಲದೆ ಭಾಗಮಂಡಲ ಹೋಬಳಿ ನಾಡಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಿಬ್ಬಂಧಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:HR Ramesh
First published: