ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

ಈಗಾಗಲೇ ಹುಬ್ಬಳ್ಳಿ ಕೈಗಾರಿಕಾ ವಸಹಾತುವಿನಲ್ಲಿ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿ.ಮೀ.ಗೆ 20 ಕೋಟಿ‌ ಹಾಗೂ ಎರಡನೇ ಹಂತದಲ್ಲಿ 2.07 ಕಿ.ಮೀ.ಗೆ‌ 21 ಕೋಟಿ ಬಿಡುಗಡೆ ಮಾಡಲಾಗಿದೆ.

news18-kannada
Updated:August 3, 2020, 2:38 PM IST
ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ಸಚಿವ ಜಗದೀಶ್ ಶೆಟ್ಟರ್.
  • Share this:
ಹುಬ್ಬಳ್ಳಿ (ಆಗಸ್ಟ್‌ 03); ಕೊರೋನಾ ಭೀತಿಯ ನಡುವೆಯೂ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹುಬ್ಬಳ್ಳಿಯಲ್ಲಿ ರಸ್ತೆ, ಮೂಲಭೂತ ಸೌಲಭ್ಯ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದಾರೆ. 

ಹುಬ್ಬಳ್ಳಿಯ ವಾರ್ಡ್‌ ನಂಬರ್‌ 42 ವ್ಯಾಪ್ತಿಯ ರಾಮನಗರದಲ್ಲಿ 30 ಲಕ್ಷ ವೆಚ್ಚದಲ್ಲಿ‌ ನಿರ್ಮಿಸುತ್ತಿರುವ ಯು. ಜಿ. ಡಿ ಹಾಗೂ ಸಿಮೆಂಟ್ ರಸ್ತೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರೊಂದಿಗೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ್ ಕಲ್ಬುರ್ಗಿ, ಮುಖಂಡರುಗಳಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದರ ನಂತರ ಗೋಕುಲ ಕೈಗಾರಿಕಾ ವಸಹಾತುವಿನಲ್ಲಿ 41 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡ್ರೇನ್, ಸಿ ಸಿ ರಸ್ತೆ, ಪೈಪ್ ಲೈನ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

ಇದನ್ನೂ ಓದಿ : BS Yediyurappa: ನಾನು ಆರೋಗ್ಯವಾಗಿದ್ದೇನೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ; ಆಸ್ಪತ್ರೆಯಿಂದ ಸಿಎಂ ಯಡಿಯೂರಪ್ಪ ವಿಡಿಯೋ ಸಂದೇಶ

ಈಗಾಗಲೇ ಕೈಗಾರಿಕಾ ವಸಹಾತುವಿನಲ್ಲಿ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿ.ಮೀ.ಗೆ 20 ಕೋಟಿ‌ ಹಾಗೂ ಎರಡನೇ ಹಂತದಲ್ಲಿ 2.07 ಕಿ.ಮೀ.ಗೆ‌ 21 ಕೋಟಿ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ ಕಾಮಗಾರಿಯಲ್ಲಿ 900 ಮೀ, ಎರಡನೇ ಹಂತದ ಕಾಮಗಾರಿಯಲ್ಲಿ 950 ಮೀ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಉಳಿದ ನಿರ್ಮಾಣ ಕಾರ್ಯವನ್ನು 2 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಹೆಸ್ಕಾಂನೊಂದಿಗೆ ಸಂಪರ್ಕಿಸಿ ನೆಲ ಮಟ್ಟದಲ್ಲಿ ವಿದ್ಯುತ್ ಸಂಪರ್ಕಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು. ನಂತರ ಹನುಮಂತನ ನಗರದಲ್ಲಿ ರಾಜಕಾಲುವೆಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
Published by: MAshok Kumar
First published: August 3, 2020, 2:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading