ಬೆಂಗಳೂರು (ಅಕ್ಟೋಬರ್ 28); ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಪೊಲೀಸ್ ವ್ಯವಸ್ಥೆ ಇದೆಯೇ? ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಇಂದು ಕಟುವಾಗಿ ಪ್ರಶ್ನೆ ಮಾಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಉಪ ಚುನಾವಣೆ ಕಾವು ಹೆಚ್ಚುತ್ತಿದೆ. ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಚುನಾವಣೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಇದೇ ಕಾರಣಕ್ಕೆ ಮೂರೂ ಪಕ್ಷಗಳು ಈ ಕ್ಷೇತ್ರಗಳಲ್ಲಿ ಬರದಿಂದ ಪ್ರಚಾರ ನಡೆಸುತ್ತಿವೆ. ಆದರೆ, ಕಾಂಗ್ರೆಸ್ ಪ್ರಚಾರ ನಡೆಸುವ ಜಾಗ ಮತ್ತು ಪಕ್ಷದ ಕಾರ್ಯಕ್ರಮ ನಡೆಯುವ ಜಾಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರ ಈ ನಡೆ ಸಾಮಾನ್ಯವಾಗಿ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಆರ್.ಆರ್. ನಗರ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಆದರೆ, ಮೊನ್ನೆ ಲಕ್ಷ್ಮೀ ದೇವಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿತ್ತು. ನಿನ್ನೆ ಸಿದ್ದರಾಮಯ್ಯ ಚುನಾವಣೆ ಪ್ರಚಾರಕ್ಕೆ ಹೋದಾಗ ವೆಂಕಟೇಶ್ ಎಂಬ ಕಾರ್ಪೋರೇಟರ್ ಪ್ರಚಾರಕ್ಕೆ ಅಡ್ಡಿ ಪಡಿಸಿದ್ದಾರೆ, ಕಾರ್ ಗೆ ಅಡ್ಡ ಹಾಕಿದ್ದಾರೆ. ಇದಲ್ಲದೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಂದು ಮೋದಿ ಮೋದಿ ಅಂತ ಕೂಗಿದ್ದಾರೆ. ಇದು ಸಾಮಾನ್ಯವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.
ಹೀಗಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, "ಪ್ರಜಾಪ್ರಭುತ್ವದಲ್ಲಿ ಎಲ್ಲಾ ಪಕ್ಷಗಳಿಗೂ ಚುನಾವಣೆಯಲ್ಲಿ ನಿಲ್ಲೋ ಅವಕಾಶ ಇರುತ್ತೆ. ಹಾಗೆ ಚುನಾವಣೆ ನಿಂತ್ಮೇಲೆ ಎಲ್ರಿಗೂ ಮನೆ ಮನೆ ಪ್ರಚಾರ ಮಾಡೋ ಅವಕಾಶವೂ ಇದೆ. ಆದ್ರೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇದಿಯೋ ಇಲ್ಲವೋ? ಅರ್ಥ ಆಗ್ತಿಲ್ಲ. ಮೊನ್ನೆ ಲಕ್ಷ್ಮೀ ದೇವಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ.
ನಿನ್ನೆ ಸಿದ್ದರಾಮಯ್ಯ ಚುನಾವಣೆ ಪ್ರಚಾರಕ್ಕೆ ಹೋದಾಗ ವೆಂಕಟೇಶ್ ಎಂಬ ಕಾರ್ಪೋರೇಟರ್ ಪ್ರಚಾರಕ್ಕೆ ಅಡ್ಡಿ ಪಡಿಸಿದ್ದಾರೆ, ಕಾರ್ ಗೆ ಅಡ್ಡ ಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಎಲ್ಲೇ ಕಾರ್ಯಕ್ರಮ ನಡೆಸಿದರೂ ಸಹ ಬಿಜೆಪಿ ಕಾರ್ಯಕರ್ತರು ಅಲ್ಲಿಗೆ ಬಂದು ಅನಗತ್ಯವಾಗಿ ಮೋದಿ ಮೋದಿ ಅಂತ ಕೂಗುತ್ತಾರೆ. ಅವರು ಯಾಕೆ ನಮ್ಮ ಕಾರ್ಯಕ್ರಮಕ್ಕೆ ಬಂದು ಮೋದಿ ಮೋದಿ ಅಂತ ಕೂಗಬೇಕು. ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆ ಇದಿಯಾ?.
ಒಬ್ರು ಮಾಜಿ ಮುಖ್ಯಮಂತ್ರಿ ಗಳು ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಬರ್ತಾರೆ, ಅವ್ರಿಗೆ ಪ್ರೊಟೆಕ್ಷನ್ ಕೊಡಕಾಗಲಿಲ್ಲ ಅಂದ್ರೆ ಏನರ್ಥ? ಪ್ಯಾರಾ ಮಿಲಿಟರಿ ಕರಿಸಿರೋದ್ ಏನಕ್ಕೆ? ಇದನ್ನ ನೋಡ್ಕಂಡು ಕೂರೋದಕ್ಕಾ?" ಎಂದು ಬಿಜೆಪಿ ಮತ್ತು ಪೊಲೀಸ್ ವ್ಯವಸ್ಥೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ