ಬೆಳಗಾವಿ (ಏ. 14): ಬೆಳಗಾವಿ ಲೋಕಸಭಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಕೊನೆ ದಿನವಾಗಿದೆ. ಇಂದು ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಪರ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಮತ ಪ್ರಚಾರ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸಹ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗೆ ಅಬ್ಬರದ ಪ್ರಚಾರ ನಡೆಸಿದರು. ಈ ವೇಳೆಯಲ್ಲಿ ಸತೀಶ ಜಾರಕಿಹೊಳಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮಾತಿನ ಮೂಲಕ ತಿರುಗೇಟು ಕೊಟ್ಟರು. ನಮ್ಮದು ಕೇವಲ ಮಾತು ಅಷ್ಟೇ ಅಲ್ಲ, ಕೆಲಸ ಎಂದು ಟಾಂಗ್ ಕೊಟ್ಟರು.
ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರಚಾರ ನಡೆಸಿದರು. ಸಾಂಬ್ರಾ, ಮಾರಿಹಾಳ, ಕೆ.ಎಚ್. ಕಂಗ್ರಾಳಿ, ಮುತಗಾ ಹಾಗೂ ತಾರಿಹಾಳ ಗ್ರಾಮದಲ್ಲಿ ಮತ ಬೇಟೆ ನಡೆಸಿದರು. ಈ ವೇಳೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ದರು. ಎಲ್ಲಾ ಕಡೆಯಲ್ಲಿಯೂ ಬೆಲೆ ಏರಿಕೆ ಪ್ರಸ್ತಾಪ ಮಾಡಿದ ಸತೀಶ ಜಾರಕಿಹೊಳಿ ನಮಗೆ ಒಂದು ಅವಕಾಶ ಕೊಡುವಂತೆ ಜನರಲ್ಲಿ ಮನವಿ ಮಾಡಿದರು.
ಇದನ್ನು ಓದಿ: ದಿಢೀರ್ ಕುಸಿತಕಂಡ ಪ್ರವಾಸೋದ್ಯಮ, ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕೊರೋನಾ 2ನೇ ಅಲೆ ಭಾರಿ ಹೊಡೆತ!
ಬೆಳಗಾವಿ ಸಾಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮಾತನಾಡಿ, ನಮ್ಮ ಪರವಾಗಿ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಸೋಲಿನ ಭೀತಿಯಿಂದ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪರವಾಗಿ ನಾಳೆ ಯಾವುದೇ ನಾಯಕರು ಪ್ರಚಾರಕ್ಕೆ ಬರಲ್ಲ. ಅರಬಾವಿ ಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಪರ ಸಹಜವಾಗಿ ಕೆಲಸ ಮಾಡ್ತಾರೆ. ಅರಬಾವಿಯಲ್ಲಿ ನಮ್ಮ ಹಾಗೂ ಪಕ್ಷದ ಮತ ಬ್ಯಾಂಕ್ ಇದೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನ ಬೇಸತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಲಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ