ಕೊಡಗಿನಲ್ಲಿ ಸಂತ್ರಸ್ತರಿಗೆ ಮನೆ ಹಸ್ತಾಂತರ; ಹೆಚ್‌ಡಿಕೆ ಆಹ್ವಾನಕ್ಕೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ, ಬಂಧನ

ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ 383 ಮನೆಗಳ ಹಸ್ತಾಂತರಿಸುತ್ತಿರುವ ಸಂದರ್ಭ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿರುವ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

news18-kannada
Updated:June 4, 2020, 2:18 PM IST
ಕೊಡಗಿನಲ್ಲಿ ಸಂತ್ರಸ್ತರಿಗೆ ಮನೆ ಹಸ್ತಾಂತರ; ಹೆಚ್‌ಡಿಕೆ ಆಹ್ವಾನಕ್ಕೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ, ಬಂಧನ
ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ.
  • Share this:
ಕೊಡಗು (ಜೂನ್‌ 04) 2018 ರ ಕೊಡಗು ನೆರೆ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್ ಮತ್ತು ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ 383 ಮನೆಗಳ ಹಸ್ತಾಂತರಿಸುತ್ತಿರುವ ಸಂದರ್ಭ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿರುವ ಜೆಡಿಎಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 2018 ರಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಅವರು ಅಡಿಗಲ್ಲು ಹಾಕಿದ್ದರು. ಸೌಜನ್ಯಕ್ಕಾದರೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಾಗಿತ್ತು ಎಂದು ಒತ್ತಾಯಿಸಿದರು.

ಪ್ರತೀ ಮನೆಗೆ 9.85 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ವ್ಯಯಿಸಲಾಗಿದ್ದರೂ ಮನೆಗಳ ನಿರ್ಮಾಣ ಕಾರ್ಯದಲ್ಲೂ ಕಳಪೆ ಕಾಮಗಾರಿ ಮಾಡಲಾಗಿದೆ ಎಂದು ಆರೋಪಿಸಿದರು. ಉಸ್ತುವಾರಿ ಸಚಿವ ವಿ ಸೋಮಣ್ಣ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪ್ರತಿಭಟಿಸುತ್ತಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆಗೆ ದೇವೇಗೌಡರ ಸ್ಪರ್ಧೆ; ನಾಳೆ ಜೆಡಿಎಸ್ ಅಂತಿಮ ನಿರ್ಧಾರ
First published: June 4, 2020, 2:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading