• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಸಹ ನಮ್ಮ ಕ್ಷೇತ್ರಗಳ ಅಭಿವೃದ್ಧಿ ಆಗುತ್ತಿದೆ : ಶಾಸಕ ಎ.ಮಂಜುನಾಥ್

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಸಹ ನಮ್ಮ ಕ್ಷೇತ್ರಗಳ ಅಭಿವೃದ್ಧಿ ಆಗುತ್ತಿದೆ : ಶಾಸಕ ಎ.ಮಂಜುನಾಥ್

ಜೆಡಿಎಸ್ ಶಾಸಕ ಎ.ಮಂಜುನಾಥ್

ಜೆಡಿಎಸ್ ಶಾಸಕ ಎ.ಮಂಜುನಾಥ್

ಪ್ರಸ್ತುತ  ಬಿಜೆಪಿ ಸರ್ಕಾರ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ  ಕೊರತೆಯಾಗದಂತೆ ಕುಮಾರಸ್ವಾಮಿ ಅವರು ಸರ್ಕಾರದ ಮೇಲೆ ಒತ್ತಡ ತಂದು ಅನುದಾನ‌ ಬಿಡುಗಡೆ ಮಾಡಿಸಿದ್ದಾರೆ

  • Share this:

ರಾಮನಗರ(ಅಕ್ಟೋಬರ್​. 25): ಬಿಡದಿ ಪುರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ವಿರೋಧ ಪಕ್ಷದ ಸದಸ್ಯರು ಸಹ ಜೆಡಿಎಸ್ ಜೊತೆ ಕೈಜೋಡಿಸಬೇಕು ಎಂದು ಮಾಗಡಿ  ಶಾಸಕ ಎ.ಮಂಜುನಾಥ್ ಮನವಿ ಮಾಡಿದರು. ರಾಮನಗರದ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಕರ್ಮಭೂಮಿಯಲ್ಲಿ ಕೆಲವರು ಇಲ್ಲದ ಗೊಂದಲ ಸೃಷ್ಟಿಸುತ್ತಿದ್ದು, ಗೊಂದಲಗಳ ನಿವಾರಣೆ ಹಾಗೂ ಒಗ್ಗಟ್ಟು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಒಂದೆಡೆ ಸೇರಿ ಚರ್ಚಿಸಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದಲ್ಲಿ ನಮ್ಮೆಲ್ಲ ಕೆಲಸಗಳು ನಡೆಯುತ್ತಿವೆ ಎಂದು ಪರೋಕ್ಷವಾಗಿ ಒಪ್ಪಿಕೊಂಡರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೆ, ಸಿಎಂ ಜೊತೆಗೆ ಎಲ್ಲಾ ಸಚಿವರು ನಮಗೆ ಸಹಕಾರ ಕೊಡುತ್ತಿದ್ದಾರೆ. ಕುಮಾರಸ್ವಾಮಿ ಅವರ  ಮಾರ್ಗದರ್ಶನದಂತೆ ನಮ್ಮ ಕ್ಷೇತ್ರಗಳ ಅಭಿವೃದ್ಧಿ ನಡೆಯುತ್ತಿದೆ. ನಮಗೆ ಅಭಿವೃದ್ಧಿ ಅಷ್ಟೇ ಮುಖ್ಯ, ಹಾಗಾಗಿ ನಮಗೆ ಸಹಕಾರ ಸಿಗುತ್ತಿದೆ ಎಂದರು.


ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬಿಡದಿ ಪುರಸಭೆಯ ಉಳಿಕೆ ಅವಧಿ ಹಾಗೂ ಮಾಗಡಿ ಪುರಸಭೆಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯನ್ನು ನ.10 ರೊಳಗೆ ನಡೆಸಬೇಕು ಎಂದು ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ವಭಾವಿಯಾಗಿ ನಾವೆಲ್ಲರೂ ತಯಾರಾಗಿದ್ದು, 23 ಸದಸ್ಯ ಬಲದ ಬಿಡದಿ ಪುರಸಭೆಯಲ್ಲಿ ಈಗಾಗಲೇ ಜೆಡಿಎಸ್ ನೊಂದಿಗೆ 15 ಸದಸ್ಯರು ಗುರುತಿಸಿಕೊಂಡಿದ್ದಾರೆ. ನಮ್ಮ ಒಗ್ಗಟ್ಟು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.


ಇದನ್ನೂ ಓದಿ : ಶಿವಮೊಗ್ಗದಲ್ಲಿ ಕಾಡಾನೆಗಳ ದಾಳಿಗೆ ಬಲಿಷ್ಠ ಸಾಕಾನೆ ರಂಗ ಬಲಿ; ಸಾವಿಗೆ ಕಾರಣವಾಯ್ತಾ ಸರಪಳಿ?


ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಡದಿ ಪುರಸಭೆ ವ್ಯಾಪ್ತಿಯ ಯುಜಿಡಿ ಕಾಮಗಾರಿಗಾಗಿ 90 ಕೋಟಿ ರೂಪಾಯಿ, ಕುಡಿಯುವ ನೀರಿಗೆ 74 ಕೋಟಿ ರೂಪಾಯಿ ಎಸ್ ಎಫ್​ಸಿ ಯಲ್ಲಿ‌ ವಿಶೇಷ ಅನುದಾನ  ನೀಡಿದ್ದಾರೆ.


ಪ್ರಸ್ತುತ ಬಿಜೆಪಿ ಸರ್ಕಾರ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ  ಕೊರತೆಯಾಗದಂತೆ ಕುಮಾರಸ್ವಾಮಿ ಅವರು ಸರ್ಕಾರದ ಮೇಲೆ ಒತ್ತಡ ತಂದು ಅನುದಾನ‌ ಬಿಡುಗಡೆ ಮಾಡಿಸಿದ್ದಾರೆ. ಈ ನಿಟ್ಟಿನಲ್ಲಿ ಕುಮಾರಸ್ವಾಮಿಯವರ ಗೌರವ ಹಾಗೂ ಪಕ್ಷದ ಘನತೆ ಉಳಿಸಲು ಪುರಸಭೆ ಚುನಾವಣೆಯಲ್ಲಿ‌ ಸದಸ್ಯರು‌ ಒಗ್ಗಟಿನಿಂದ ಇದ್ದೇವೆ ಎಂದು ತಿಳಿಸಿದರು.

Published by:G Hareeshkumar
First published: