HOME » NEWS » District » JDS STRONG POISON IN RAMANAGARA CHANNAPATTANA MUNICIPAL ELECTION RHHSN ATVR

ರಾಮನಗರ- ಚನ್ನಪಟ್ಟಣ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಹವಾ, ಕಾಂಗ್ರೆಸ್ ಸೇಫ್ ಜೋನ್, ಬಿಜೆಪಿ ಫುಲ್ ಫೈಟ್!

ಜೆಡಿಎಸ್ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಈ ಬಾರಿ ಎರಡೂ ಕಡೆಗಳಲ್ಲಿ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ರಾಮನಗರ - ಚನ್ನಪಟ್ಟಣ ನಗರದ ಜನರು ಒಲವು ತೋರುತ್ತಾರೆಂಬ ಅಭಿಪ್ರಾಯಗಳು ಕೇಳಿಬರುತ್ತಿದೆ. ಈ ಮಧ್ಯೆ ಬಿಜೆಪಿಗೂ ಸಹ ಜನರು ಆಶೀರ್ವಾದ ಮಾಡ್ತಾರೆ, ಆದರೆ ಎರಡೂ ಕಡೆ ಕೆಲ ವಾರ್ಡ್ ಗಳಲ್ಲಿ ಅಭ್ಯರ್ಥಿಗಳೇ ಸಿಗದಿರುವುದು ಬಿಜೆಪಿಗೆ ತಲೆನೋವಾಗಿದೆ.

news18-kannada
Updated:April 13, 2021, 7:46 PM IST
ರಾಮನಗರ- ಚನ್ನಪಟ್ಟಣ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಹವಾ, ಕಾಂಗ್ರೆಸ್ ಸೇಫ್ ಜೋನ್, ಬಿಜೆಪಿ ಫುಲ್ ಫೈಟ್!
ಹೆಚ್.ಡಿ. ಕುಮಾರಸ್ವಾಮಿ.
  • Share this:
ರಾಮನಗರ : ರಾಮನಗರ - ಚನ್ನಪಟ್ಟಣ ನಗರಸಭೆ ಚುನಾವಣೆ ಘೋಷಣೆಯಾಗಿದ್ದು ಇದೇ ತಿಂಗಳ 27 ನೇ ತಾರೀಖು ಮತದಾನ ನಡೆಯಲಿದೆ. ಈಗಾಗಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆದಿದ್ದು, ಜೆಡಿಎಸ್ ಪಕ್ಷ ಎಲ್ಲರಿಗಿಂತಲೂ ಮುಂಚೂಣಿಯಲ್ಲಿದೆ. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜೆಡಿಎಸ್ ಗೆ ಪ್ರಬಲ ಪೈಪೋಟಿ ಕೊಡಲಿದ್ದು, ಬಿಜೆಪಿ ಈಗಲೂ ಕೆಲ ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದೇ ಪರದಾಡುತ್ತಿದೆ.

ರಾಮನಗರ - ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಭಾವ

ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದರೆ, ಪಕ್ಕದ ರಾಮನಗರ ಕ್ಷೇತ್ರದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿದ್ದಾರೆ. ಆದರೆ ಎರಡೂ ಕ್ಷೇತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರಭಾವ ಹೆಚ್ಚಾಗಿದೆ. ಜೊತೆಗೆ ಎರಡೂ ನಗರಸಭೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲಿದ್ದಾರೆ ಎಂದು ಈಗಾಗಲೇ ರಾಜಕೀಯ ಲೆಕ್ಕಾಚಾರವಿದೆ. ಕಾಂಗ್ರೆಸ್ - ಬಿಜೆಪಿ ಪಕ್ಷದಲ್ಲಿ ಕೆಲ ವಾರ್ಡ್ ಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಹುಡುಕಾಟ ನಡೆಸಲಾಗುತ್ತಿದೆ. ಆದರೆ ಜೆಡಿಎಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಈಗಾಗಲೇ ಎರಡೂ ನಗರಸಭೆಯ ಎಲ್ಲಾ ವಾರ್ಡ್ ಗಳಿಗೂ ಜೆಡಿಎಸ್ ಅಭ್ಯರ್ಥಿಗಳು ಬಹುತೇಕ ಆಯ್ಕೆಯಾಗಿದ್ದಾರೆ.

ಇದನ್ನು ಓದಿ: ಸಿನಿಮಾ ತಾರೆಯರು, ಕ್ರಿಕೆಟಿಗರಿಂದಲೇ ಕೊರೋನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗ್ತಿಲ್ವಂತೆ.. ನಿಜನಾ?

ಚನ್ನಪಟ್ಟಣದಲ್ಲಿ ಜೆಡಿಎಸ್ ಹವಾ, ಕಾಂಗ್ರೆಸ್ - ಬಿಜೆಪಿ ನಡುವೆ ಫೈಟ್

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕರಾದ ಬಳಿಕ ನಗರ ಪ್ರದೇಶದ ಅಭಿವೃದ್ಧಿ ಕೆಲಸಗಳು ನಡೆದಿವೆ. ಕಳೆದ ಸುಮಾರು ವರ್ಷಗಳಿಂದ ಬಾಕಿ ಉಳಿದಿದ್ದ ನಗರದ ಹಲವು ಕಾಮಗಾರಿ ಹೆಚ್ಡಿಕೆ ಅವಧಿಯಲ್ಲಿ ಬಹುತೇಕ ಪೂರ್ಣಗೊಂಡಿವೆ. ಹಾಗಾಗಿ ಈ ಬಾರಿ ಚನ್ನಪಟ್ಟಣ ನಗರಸಭೆಯ 31 ವಾರ್ಡ್ ಗಳ ಪೈಕಿ ಬಹುತೇಕ ವಾರ್ಡ್ ಗಳಲ್ಲಿ ಜೆಡಿಎಸ್ ಪಕ್ಷ ಗೆಲುವುಸಾಧಿಸಲಿದೆ ಎನ್ನಲಾಗುತ್ತಿದೆ. ಇನ್ನು ಇದರ ಮಧ್ಯೆ ಕಾಂಗ್ರೆಸ್ ಪಕ್ಷವೂ ಸಹ ಜೆಡಿಎಸ್ ಗೆ ಟಫ್ ಫೈಟ್ ಕೊಡಲಿದೆ. ಸಂಸದ ಡಿ.ಕೆ.ಸುರೇಶ್ ಚನ್ನಪಟ್ಟಣ ಪಾಲಿಟಿಕ್ಸ್ ಗೆ ಎಂಟ್ರಿಯಾಗಿದ್ದು ಈ ಬಾರಿ ಏನಾದರೂ ಮ್ಯಾಜಿಕ್ ನಡೆಯಬಹುದು ಎನ್ನುತ್ತಿದ್ದಾರೆ ರಾಜಕೀಯ ಪಂಡಿತರು.
ಇನ್ನು ಕಾಂಗ್ರೆಸ್ - ಜೆಡಿಎಸ್ ಬಿಜೆಪಿಯೂ ಸಹ ತಮ್ಮ ಪಕ್ಷದ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಆದರೆ ಬಿಜೆಪಿ ಪಕ್ಷಕ್ಕೆ ರಾಮನಗರ-ಚನ್ನಪಟ್ಟಣದಲ್ಲಿ ಹಲವು ವಾರ್ಡ್ ಗಳಲ್ಲಿ ಅಭ್ಯರ್ಥಿಯಾಗಲು ಯಾರು ಮುಂದೆ ಬರುತ್ತಿಲ್ಲ ಎನ್ನಲಾಗುತ್ತಿದೆ. ಜೊತೆಗೆ ಕಾಂಗ್ರೆಸ್ - ಜೆಡಿಎಸ್ ಗೆ ಜನ ಬೆಂಬಲ ಬಿಜೆಪಿಗೆ ಅಷ್ಟೇನು ಇಲ್ಲ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಈ ಬಾರಿ ಎರಡೂ ಕಡೆಗಳಲ್ಲಿ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ರಾಮನಗರ - ಚನ್ನಪಟ್ಟಣ ನಗರದ ಜನರು ಒಲವು ತೋರುತ್ತಾರೆಂಬ ಅಭಿಪ್ರಾಯಗಳು ಕೇಳಿಬರುತ್ತಿದೆ. ಈ ಮಧ್ಯೆ ಬಿಜೆಪಿಗೂ ಸಹ ಜನರು ಆಶೀರ್ವಾದ ಮಾಡ್ತಾರೆ, ಆದರೆ ಎರಡೂ ಕಡೆ ಕೆಲ ವಾರ್ಡ್ ಗಳಲ್ಲಿ ಅಭ್ಯರ್ಥಿಗಳೇ ಸಿಗದಿರುವುದು ಬಿಜೆಪಿಗೆ ತಲೆನೋವಾಗಿದೆ. ಬಿಜೆಪಿಯಲ್ಲಿ ಸಚಿವ ಸಿ.ಪಿ‌.ಯೋಗೇಶ್ವರ್ ಹಾಗೂ ಡಿಸಿಎಂ ಅಶ್ವಥ್ ನಾರಾಯಣ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದಾರೆ.

  • ವರದಿ : ಎ.ಟಿ‌.ವೆಂಕಟೇಶ್

Published by: HR Ramesh
First published: April 13, 2021, 6:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories