ಕಲಬುರ್ಗಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ ; ಮುಲ್ಲಾಮಾರಿ ನದಿ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ

ಕಲಬುರ್ಗಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರಕ್ಕೆ ನದಿಗಳ ಒಳಹರಿವು ಹೆಚ್ಚಳವಾಗಿದೆ. ಚಿಂಚೋಳಿ ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯ ಭರ್ತಿಯಾಗಿದ್ದು, ದಿಢೀರಾಗಿ ನದಿಗೆ ನೀರು ಬಿಡಲಾಗಿದೆ.

news18-kannada
Updated:July 16, 2020, 12:04 PM IST
ಕಲಬುರ್ಗಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ ; ಮುಲ್ಲಾಮಾರಿ ನದಿ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ
ಮುಲ್ಲಾಮಾರಿ ಜಲಾಶಯದಿಂದ ನೀರು ಬಿಟ್ಟಿರುವುದು
  • Share this:
ಕಲಬುರ್ಗಿ(ಜುಲೈ.16): ಕಲಬುರ್ಗಿ ಜಿಲ್ಲೆಯಲ್ಲಿ ವರುಣನ‌ ಆರ್ಭಟ ಮುಂದುವರಿದಿದೆ. ಚಿಂಚೋಳಿ ಹಾಗೂ ಕಮಲಾಪುರ ತಾಲೂಕಿನಾದ್ಯಂತ ಕುಂಭದ್ರೋಣ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಮ್ಮನಚೋಡ್-ಮನ್ನಾಖೇಳಿ ರಸ್ತೆಯ ಸೇತುವೆ ಮುಳುಗಡೆಯಾಗಿದೆ. ಹಲವು ಮನೆಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳುವಂತಾಗಿದೆ.

ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ. ತೊಗರಿ, ಉದ್ದು, ಹೆಸರು ಸೇರಿದಂತೆ ವಿವಿಧ ಬೆಳೆಗಳು ಮುಳುಗಡೆಯಾಗಿದೆ. ನದಿ, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಕಲಬುರ್ಗಿ ನಗರದಲ್ಲಿಯೂ ಧಾರಾಕಾರ ಮಳೆಗೆ ಜನತೆ ತತ್ತರಿಸಿದೆ. ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿವೆ. ಕಲಬುರ್ಗಿಯ ಶಕ್ತಿ ನಗರದ ಮತ್ತಿತರ ಕಡೆ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನತೆ ರಾತ್ರಿಯೆಲ್ಲಾ ಜಾಗರಣೆ ಮಾಡುವಂತಾಗಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿ, ದವಸ-ಧಾನ್ಯ ಮಳೆ ನೀರಿಗೆ ಆಹುತಿಯಾಗಿವೆ. ಇಂದೂ ಸಹ ಮಳೆ ಬರುವ ಸಾಧ್ಯತೆಗಳಿದ್ದು, ಬಿಸಿಲ ನಾಡಿನ ಜನ ಮಳೆ ಅಬ್ಬರಕ್ಕೆ ತತ್ತರಿಸುವಂತಾಗಿದೆ.

ಚಿಂಚೋಳಿಯ ಮುಲ್ಲಾಮಾರಿ ಜಲಾಶಯ ಭರ್ತಿ

ಕಲಬುರ್ಗಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರಕ್ಕೆ ನದಿಗಳ ಒಳಹರಿವು ಹೆಚ್ಚಳವಾಗಿದೆ. ಚಿಂಚೋಳಿ ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯ ಭರ್ತಿಯಾಗಿದ್ದು, ದಿಢೀರಾಗಿ ನದಿಗೆ ನೀರು ಬಿಡಲಾಗಿದೆ. ನದಿಯ ಅಕ್ಕಪಕ್ಕದಲ್ಲಿ ಬರುವ ಹಳ್ಳಿಗಳಿಗೆ ನುಗ್ಗಿದ ನೀರು ನುಗ್ಗಿದೆ. ಚಿಮ್ಮನಚೋಡ, ಕನಕಪುರ, ದೇಗಲಮಡಿ ಗ್ರಾಮಗಳು ಹಾಗೂ ಚಿಂಚೋಳಿ ಪಟ್ಟಣದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಚಿಮ್ಮನಚೋಡ, ಕನಕಪುರ, ಗೌಡನಹಳ್ಳಿ, ನೀಮಾಹೊಸಳ್ಳಿ, ಗಾರಂಪಳ್ಳಿ ಮತ್ತು ಸಾದಲಾಪುರಗಳ ಸೇತುವೆ ಮುಳುಗಡೆಯಾಗಿದ್ದು ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.ಮುಲ್ಲಾಮಾರಿ ನದಿ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದ್ದು, ಅಕ್ಕ-ಪಕ್ಕದ ಗ್ರಾಮಗಳಿಗೆ ನೀರು ನುಗ್ಗುವ ಜೊತೆಗೆ, ಅಪಾರ ಪ್ರಮಾಣದ ಬೆಳೆ ಹಾನಿಗೂ ಕಾರಣವಾಗಿದೆ. ಅಧಿಕಾರಿಗಳು ರಾತ್ರೋರಾತ್ರಿ ನೀರು ಬಿಟ್ಟಿದ್ದರಿಂದ ಈ ಸ್ಥಿತಿ ನಿರ್ಮಾಣವಾಗಿದ್ದು, ನಷ್ಟ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿಸೋಂಕಿತನ ಮನೆಗೆ ಕನ್ನ ಹಾಕಿದ ದುಷ್ಕರ್ಮಿಗಳು : ಹಿಂಡಲಗಾ ಜೈಲಿಗೂ ಕಾಲಿಟ್ಟ ಮಹಾಮಾರಿ ಕೊರೋನಾಮುಲ್ಲಾಮಾರಿ ಜಲಾಶಯದಿಂದ ನೀರು ಬಿಟ್ಟಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಐದು ಗೇಟ್ ಗಳ ಮೂಲಕ 5 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಪರಿಣಾಮ ನದಿ ಪಾತ್ರದ ಹಳ್ಳಿಗಳಿಗೆ ಹಾಗೂ ಚಿಂಚೋಳಿ ಪಟ್ಟಣದ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಕೆಲವು ದೇವಸ್ಥಾನಗಳೂ ಜಲಾವೃತಗೊಂಡಿವೆ. ಈ ವೇಳೆ ದೇವಸ್ಥಾನಗಳಲ್ಲಿ ಸಿಲುಕಿಕೊಂಡ ಕೆಲವರು ರಾತ್ರಿ ಅಲ್ಲಿಯೇ ಕಾಲ ಕಳೆಯುವಂತಾಗಿದೆ.ಚಿಂಚೋಳಿಯ ಚಂದಾಪುರದ ಹನುಮಾನ ದೇವಸ್ಥಾದಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಮ್ಮನಚೋಡ ಗ್ರಾಮದಲ್ಲಿ ಸಂಗಮೇಶ್ವರ ದೇವಸ್ಥಾನ ಜಲಾವೃತಗೊಂಡಿದ್ದು, ದೇವಸ್ಥಾನದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಹಗ್ಗ ಹಾಕಿ ಗ್ರಾಮಸ್ಥರೇ ರಕ್ಷಣೆ ಮಾಡಿದ್ದಾರೆ.
Published by: G Hareeshkumar
First published: July 16, 2020, 12:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading