HOME » NEWS » District » KALBURGI POLICE HAS ARRESTED 26 PEOPLE IN GAMBLING AND MARIJUANA SELLERS HK

ಕಲಬುರ್ಗಿ ಪೊಲೀಸರ ಕಾರ್ಯಾಚರಣೆ ; ಗಾಂಜಾ ಮಾರಾಟ, ಜೂಜಾಟ ನಿರತ 26 ಜನರ ಬಂಧನ

ಜೂಜುಕೋರರಿಂದ 3.51 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಫರತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

news18-kannada
Updated:September 27, 2020, 5:44 PM IST
ಕಲಬುರ್ಗಿ ಪೊಲೀಸರ ಕಾರ್ಯಾಚರಣೆ ; ಗಾಂಜಾ ಮಾರಾಟ, ಜೂಜಾಟ ನಿರತ 26 ಜನರ ಬಂಧನ
ಬಂಧಿತ ಜೂಜುಕೋರರು
  • Share this:
ಕಲಬುರ್ಗಿ(ಸೆಪ್ಟೆಂಬರ್​. 27): ಕಲಬುರ್ಗಿ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಗ್ಯಾಬ್ಲಿಂಗ್ ಇತ್ಯಾದಿ ಅಕ್ರಮ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ. ಇದರ ಬೆನ್ನು ಬಿದ್ದಿರುವ ಪೊಲೀಸರು ಹಲವನ್ನು ಬಂಧಿಸಿದ್ದಾರೆ. ಕಲಬುರ್ಗಿ ತಾಲೂಕಿನ ಫರತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ದಾಳಿಗಳನ್ನು ನಡಸಿ ಇಬ್ಬರು ಅಕ್ರಮ ಗಾಂಜಾ ಮಾರಾಟಗಾರರು ಮತ್ತು 24 ಜನ ಜೂಜುಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರ್ಗಿ ಪೊಲೀಸರು ಅಕ್ರಮ ಗಾಂಜಾ ಬೆಳೆಗಾರರ ಮೇಲೆ ದಾಳಿಗಳನ್ನು ಮುಂದುವರೆಸಿದ್ದಾರೆ. ತೊಗರಿ ಮತ್ತು ಹತ್ತಿ ಹೊಲದಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಕಲಬುರ್ಗಿ ತಾಲೂಕಿನ ಹೇರೂರ(ಬಿ) ಗ್ರಾಮದಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳು, ಅದರನ್ನು ಬೇರೆ ಬೇರೆ ಕಡೆ ಪೂರೈಕೆ ಮಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಫರತಾಬಾದ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

ಬಂಧಿತರನ್ನು  ಹೆರೂರು(ಬಿ) ಗ್ರಾಮದ ಶಿವಪ್ಪ ಬಕಾರಿ ಮತ್ತು ದೇವೇಂದ್ರಪ್ಪ ಬಕಾರಿ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಬೆಳೆದ 1,01,400 ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. 101 ಗಾಂಜಾ ದೊಡ್ಡ ಗಿಡಗಳು ಹಾಗೂ 450 ಗಾಂಜಾ ಸಸಿಗಳನ್ನು ಜಪ್ತಿ ಮಾಡಲಾಗಿದೆ.

ಫರತಾಬಾದ್ ಠಾಣೆ ಪೊಲೀಸ್ ನಿರೀಕ್ಷಕ ತಮ್ಮರಾಯ ಪಾಟೀಲ್ ಮತ್ತು ಸಿಬ್ಬಂದಿಗಳಿಂದ ದಾಳಿ ಮಾಡಲಾಗಿದೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

24 ಜೂಜುಕೋರರ ಬಂಧನ :

ಕಲಬುರ್ಗಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಜೂಜಾಟದಲ್ಲಿ ತೊಡಗಿದ್ದ 24 ಜನರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಲಬುರ್ಗಿ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಜೂಜೂಕೋರರನ್ನು ಬಂಧಿಸಲಾಗಿದೆ.

ಮೊಹಮ್ಮದ್ ರೇಹ್ಮಾನ್, ಚಿನ್ನು ಪಾಟೀಲ್, ಅರುಣ್ ದೊರೆ, ಭಗವಾನ್ ಸಿಂಗ್, ಮಹ್ಮದ್ ಇರ್ಷಾದ್, ಮಹ್ಮದ್ ರಫೀಕ್, ದಶರಥ, ವಿಜಯಕುಮಾರ್ ಭಗವಾನ್, ಮೋಹನರಾವ್ ಕಾಳೆ, ಫರ್ವೇಜ್ ಅಲಿ,  ಶರಣು ಹಾಲಕುಂಟೆ, ಯಲ್ಲಪ್ಪ ಜಂಗಮ, ಚಿತ್ರಶೇಖರ್ ತೋಂಚಿ ಸೇರಿ 24 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ : ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು - ಸರ್ಕಾರದ ಮೇಲೆ ವಿಶ್ವಾಸ ಮತ್ತಷ್ಟು ಹೆಚ್ಚಳ ; ಸಚಿವ ಸುರೇಶ್ ಕುಮಾರ್ಜೂಜುಕೋರರಿಂದ 3.51 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಫರತಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಭೀಕರ ರಸ್ತೆ ಅಪಘಾತ :

ಕಲಬುರ್ಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಏಳು ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಕಲಬುರ್ಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರೆಲ್ಲರೂ ಆಳಂದ ಪಟ್ಟಣಕ್ಕೆ ಸೇರಿದವರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ದೊಡ್ಡ ಗಾತ್ರದ ಲಾರಿ ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಗರ್ಭದಲ್ಲಿದ್ದ ಕೂಸನ್ನು ರಕ್ಷಿಸಲು ಹೋಗಿ ಏಳು ಜನ ಮಸಣ ಸೇರಿದ ಘಟನೆ ಕಲಬುರ್ಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ. ಓರ್ವ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು, ಮೂರು ಜನ ಪುರಷರ ಸಾವನ್ನಪ್ಪಿದ್ದಾರೆ. ಗರ್ಭಿಣಿ ಮಹಿಳೆಯನ್ನ  ಡೆಲಿವರಿ ಸಲುವಾಗಿ ಕಲಬುರ್ಗಿಗೆ ಕರೆದುಕೊಂಡು ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ನಿವಾಸಿಗಳು. ಕಾರು ಢಿಕ್ಕಿಯಾದ ರಭಸಕ್ಕೆ ಲಾರಿಯೂ ರಸ್ತೆ ಪಕ್ಕದಲ್ಲಿ ಪಲ್ಟಿ ಹೊಡೆದಿದೆ.
Published by: G Hareeshkumar
First published: September 27, 2020, 5:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories