ಕಲ್ಯಾಣ ಕರ್ನಾಟಕದಲ್ಲಿ ಮರಣ ಮೃದಂಗ - ಮತ್ತೆ ಮೊದಲ ಸ್ಥಾನಕ್ಕೇರಿದ ಕಲಬುರ್ಗಿ

ಕಲಬುರ್ಗಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ 48 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಪಟ್ಟಿಯಲ್ಲಿ ಮತ್ತೆ ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರುವಂತೆ ಮಾಡಿದೆ

news18-kannada
Updated:June 18, 2020, 9:16 PM IST
ಕಲ್ಯಾಣ ಕರ್ನಾಟಕದಲ್ಲಿ ಮರಣ ಮೃದಂಗ - ಮತ್ತೆ ಮೊದಲ ಸ್ಥಾನಕ್ಕೇರಿದ ಕಲಬುರ್ಗಿ
ಪ್ರಾತಿನಿಧಿಕ ಚಿತ್ರ.
  • Share this:
ಕಲಬುರ್ಗಿ(ಜೂ. 18): ಕಲ್ಯಾಣ ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನೇ ದಿನೇ ಅದರ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಈ ಭಾಗದಲ್ಲಿ ಸೋಂಕಿನಿಂದ ಮೂವರು ಸಾವನ್ನಪ್ಪಿರುವುದು ಇಂದು ದೃಢಪಟ್ಟಿದೆ. ಕಲಬುರ್ಗಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಕೊರೋನಾ ಸಾವು ಸಂಭವಿಸಿದೆ. ಕಲ್ಯಾಣ ಕರ್ನಾಟಕದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕೊರೋನಾ ಮರಣ ಮೃದಂಗ ಬಾರಿಸಿದೆ.

ಕಲಬುರ್ಗಿಯ 50 ವರ್ಷದ ಪುರುಷ, ಬೀದರ್ ನ 55 ವರ್ಷದ ಪುರುಷ ಹಾಗೂ ಕೊಪ್ಪಳದ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೋರ್ವ ಸೋಂಕಿತ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಸೇಡಂ ತಾಲೂಕಿನ ಗೋಪನಪಲ್ಲಿ ಗ್ರಾಮದ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಜೂನ್ 13 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 15 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಆತನಿಗೆ ಕೊರೋನಾ ಸೋಂಕಿರುವುದು ಇಂದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬೀದರ್ ನ ಕಂಟೈನ್ ಮೆಂಟ್ ಪ್ರದೇಶದ 55 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಆತನನ್ನು ಜೂನ್ 08 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 17 ರಂದು ಸೋಂಕಿತ ಮೃತಪಟ್ಟಿದ್ದಾನೆ. ಕೊಪ್ಪಳ ಜಿಲ್ಲೆಯಲ್ಲಿ 50 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾಳೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಜೂನ್ 13 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 17 ರಂದು ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದಾಳೆ. ಮುವ್ವರಿಗೂ ಸೋಂಕಿರುವುದು ಇಂದು ದೃಢಪಟ್ಟಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸೋಂಕಿತರು ದೃಢಪಟ್ಟಿದ್ದು, ಮತ್ತೆ ರಾಜ್ಯದ ಪಟ್ಟಿಯಲ್ಲಿ ಮೊದಲನೆಯ ಸ್ಥಾನಕ್ಕೇರಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ಇಂದು 48 ಜನರಿಗೆ ಸೋಂಕು ದೃಢಪಟ್ಟಿದೆ. ಯಾದಗಿರಿ 08, ಬೀದರ್ 06, ರಾಯಚೂರು 04 ಹಾಗೂ ಕೊಪ್ಪಳದಲ್ಲಿ ಓರ್ವನಿಗೆ ಸೋಂಕು ತಗುಲಿದೆ. ಕಲ್ಯಾಣ ಕರ್ನಾಟಕದಲ್ಲಿ ಇಂದು 67 ಜನರಿಗೆ ಸೋಂಕು ದೃಢಗೊಂಡಿದೆ. ಈ ಪೈಕಿ 22 ಮಕ್ಕಳಿದ್ದಾರೆ. ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟರದಿಂದ ವಾಪಸ್ಸಾದವರಾಗಿದ್ದಾರೆ. ಕಲ್ಯಾಣ ಕರ್ನಾಟಕದ ಸೋಂಕಿತರ ಸಂಖ್ಕೆ 2784 ಗೆ ಏರಿಕೆಯಾಗಿದೆ. ಇಂದು ಈ ಭಾಗದಲ್ಲಿ 44 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ಕಲಬುರ್ಗಿ :

ಕಲಬುರ್ಗಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ 48 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಪಟ್ಟಿಯಲ್ಲಿ ಮತ್ತೆ ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರುವಂತೆ ಮಾಡಿದೆ.

ಇದನ್ನೂ ಓದಿ : ಕೊರೋನಾದಿಂದ ಬಾಡಿಗೆದಾರರ ಸಂಕಷ್ಟ ; 10 ಲಕ್ಷ ರೂಪಾಯಿ ಬಾಡಿಗೆ ಮನ್ನಾ ಮಾಡಿ ಕಾಂಪ್ಲೆಕ್ಸ್ ಮಾಲೀಕನ ಮಾನವೀಯತೆಜಿಲ್ಲೆಯಲ್ಲಿ ಇಂದು ಮತ್ತೆ 48 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 19 ಮಕ್ಕಳು, 12 ಮಹಿಳೆಯರು, 17 ಪುರುಷರಿದ್ದಾರೆ. ಟ್ರಾವೆಲ್ ಹಿಸ್ಟರಿ ಇಲ್ಲದ ಕೇಸ್ ಗಳು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿವೆ.

ಇಂದಿನ ಸೋಂಕಿತರ ಪೈಕಿ 24 ಜನರಿಗೆ ಟ್ರಾವೆಲ್ ಹಿಸ್ಟರಿ ಸಿಕ್ಕಿಲ್ಲ. ಆರು ಜನರಿಗೆ ಸೋಂಕಿತರಿಂದ ಹರಡಿದ ಸೋಂಕು. ಉಳಿದ 18 ಸೋಂಕಿತರು ಮಹಾರಾಷ್ಟ್ರದಿಂದ ವಾಪಸ್ಸಾದ ವಲಸಿಗರಾಗಿದ್ದಾರೆ. ಜಿಲ್ಲೆಯ ಸೋಂಕಿತರ ಸಂಖ್ಯೆ 1074ಗೆ ಏರಿಕೆಯಾಗಿದ್ದು, ಇಂದು ಜಿಲ್ಲೆಯಲ್ಲಿ 32 ಜನ ಡಿಸ್ಚಾರ್ಜ್ ಆಗಿದ್ದಾರೆ.
First published: June 18, 2020, 9:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading