• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • Kallathigiri Falls : ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ ಚಿಕ್ಕಮಗಳೂರಿನ ಕಲ್ಲತ್ತಿಗಿರಿ ಜಲಪಾತ

Kallathigiri Falls : ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ ಚಿಕ್ಕಮಗಳೂರಿನ ಕಲ್ಲತ್ತಿಗಿರಿ ಜಲಪಾತ

ಕಲ್ಲತ್ತಿಗಿರಿ ಜಲಪಾತ

ಕಲ್ಲತ್ತಿಗಿರಿ ಜಲಪಾತ

Kallathigiri Falls : ಕಲ್ಲತ್ತಿಗಿರಿ ಜಲಪಾತಕ್ಕೆ ಹೋಗುವ ಮಾರ್ಗದುದ್ದಕ್ಕೂ ರಮಣೀಯ ನೋಟ ಕಣ್ಣಿಗೆ ರಸದೌತಣವನ್ನ ನೀಡುತ್ತೆ. ಹಚ್ಚ ಹಸಿರಿನ ಪ್ರಕೃತಿಯ ಸೊಬಗು ನೋಡುಗರನ್ನು ಮೂಕ ವಿಸ್ಮಿತರನ್ನಾಗಿಸುತ್ತದೆ.

  • Share this:

    ಚಿಕ್ಕಮಗಳೂರು(ಸಪ್ಟೆಂಬರ್​. 05): ಜಿಲ್ಲೆಯ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತ ಈಗ ಪ್ರಕೃತಿಯ ಮಾನಸ ಪುತ್ರಿಯಂತಾಗಿದೆ. ಗುಡ್ಡದ ತುದಿಯಿಂದ ಹರಿಯುವ ಈ ಹಾಲ್ನೊರೆಯ ಜಲಪಾತವೇ ಕಲ್ಲತ್ತಿಗಿರಿ ಜಲಪಾತ. ಈ ಜಲಪಾತ ಇತಿಹಾಸದಲ್ಲಿ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ-ಗುಡ್ಡಗಳ ಔಷಧಿ ಶಕ್ತಿಯುಳ್ಳ ಮರ-ಗಿಡಗಳ ನಡುವೆ ಹರಿಯುವ ಈ ನೀರಲ್ಲಿ ಸ್ನಾನ ಮಾಡಿದ್ರೆ ಕೆಲ ಕಾಯಿಲೆಗಳು ದೂರಾಗಿ ಪುಣ್ಯ ಬರುತ್ತೆದೆ ಎನ್ನುವ ಜನರ ನಂಬಿಕೆ. ಆನೆ ಆಕಾರದಲ್ಲಿರುವ ಈ ಜಲಪಾತಕ್ಕೆ ಧಾರ್ಮಿಕ ಇತಿಹಾಸವೂ ಇದೆ. ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಶಾಲಾ ಮಕ್ಕಳೇ ಹೆಚ್ಚು. ಈ ತಾಣ ಇಡೀ ರಾಜ್ಯಕ್ಕೆ ಗೊತ್ತು. ಈಗಂತೂ ಮಕ್ಕಳಷ್ಟೇ ಅಲ್ಲದೇ ಕುಟುಂಬ ಸಮೇತರಾಗಿ ಬಂದು ಎಲ್ಲರೂ ಎಂಜಾಯ್ ಮಾಡುತ್ತಿದ್ದಾರೆ.ಶತಮಾನಗಳಿಂದ ಹೀಗೆ ನಿರಂತರವಾಗಿ ಹರಿಯುತ್ತಿರುವ ಈ ಜಲಪಾತದ ಬಳಿ ದತ್ತಾತ್ರೇಯ, ಈಶ್ವರ-ಪಾರ್ವತಿ, ಗಣಪತಿ, ಬೇಲೂರು ಚನ್ನಕೇಶವನ ಜೊತೆ ಶಿಲಾ ಬಾಲಿಕೆಯರ ಉದ್ಭವ ಮೂರ್ತಿಗಳಿವೆ.


    ಪುರಾಣದ ಪ್ರಕಾರ ನರಮನುಷ್ಯರು ಇಲ್ಲಿಗೆ ಬಂದು ಈ ಪವಿತ್ರ ಗಂಗೆಯಲ್ಲಿ ಸ್ನಾನ ಮಾಡಿ, ಇಲ್ಲಿನ ವೀರಭದ್ರೇಶ್ವರನಿಗೆ ಪೂಜೆ ಸಲ್ಲಿಸಿದ್ರೆ ಅವರ ಪಾಪ-ಕರ್ಮಗಳೆಲ್ಲಾ ಪರಿಹಾರವಾಗುತ್ತೆ ಎನ್ನುವುದು ಸ್ಥಳೀಯರ ನಂಬಿಕೆ.


    ಪವಿತ್ರ ಗಂಗೆಯಾಗಿರುವ ಈ ಕ್ಷೇತ್ರದಲ್ಲಿ ಕಲ್ಲಿನ ಗುಹೆಯೊಳಗೆ ವೀರಭದ್ರಸ್ವಾಮಿ ಮೂರ್ತಿ ಕೂಡ ಉದ್ಭವವಾಗಿದೆ. ಇಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸಿದ್ರೆ ಜನರ ಮೈಮೇಲೆ ಬರುವ ದುಷ್ಟಶಕ್ತಿಗಳನ್ನ ವೀರಭದ್ರಸ್ವಾಮಿ ನಾಶ ಮಾಡುತ್ತಾನೆ ಎನ್ನುವುದು ಸ್ಥಳೀಯರ ನಂಬಿಕೆ. ಆದ್ದರಿಂದ, ಪ್ರತಿದಿನ ಹತ್ತಾರು ಜನ ಈ ಕ್ಷೇತ್ರಕ್ಕೆ ದೇವರುಗಳನ್ನ ಕರೆತಂದು ಪೂಜಾ-ಕೈಂಕರ್ಯ ಕೈಗೊಳ್ಳುತ್ತಾರೆ. ಪೂಜೆಯ ಬಳಿಕ ಇಲ್ಲಿನ ಬೆಟ್ಟ-ಗುಡ್ಡಗಳ ಪ್ರಕೃತಿ ಸೌಂದರ್ಯ ಕಂಡು ಪುಳಕಿತರಾಗುತ್ತಾರೆ.


    ಇದನ್ನೂ ಓದಿ : ಪ್ರೀತಿಯ ಸಾಕುನಾಯಿಗೆ ಸೀಮಂತ ಕಾರ್ಯ ಮಾಡಿದ ವಿಜಯಪುರದ ಕುಟುಂಬ


    ಕಲ್ಲತ್ತಿಗಿರಿ ಜಲಪಾತಕ್ಕೆ ಹೋಗುವ ಮಾರ್ಗದುದ್ದಕ್ಕೂ ರಮಣೀಯ ನೋಟ ಕಣ್ಣಿಗೆ ರಸದೌತಣವನ್ನ ನೀಡುತ್ತೆ. ಹಚ್ಚ ಹಸಿರಿನ ಪ್ರಕೃತಿಯ ಸೊಬಗು ನೋಡುಗರನ್ನು ಮೂಕ ವಿಸ್ಮಿತರನ್ನಾಗಿಸುತ್ತದೆ.


    ಒಟ್ಟಾರೆ ಕಲ್ಲತ್ತಿಗಿರಿ ಕ್ಷೇತ್ರದ ಜಲಪಾತ ಹತ್ತಾರು ಆಶ್ಚರ್ಯಗಳಿಗೆ ಸಾಕ್ಷಿಯಾಗಿದೆ. ಮೂಲವೇ ಗೊತ್ತಿಲ್ಲದ ಗಂಗೆಯ ಉಗಮ ಸ್ಥಾನ ಒಂದೆಡೆಯಾದ್ರೆ, ದುಷ್ಟಶಕ್ತಿಗಳನ್ನ ದೂರ ಮಾಡುವ ದೈವಶಕ್ತಿಗೆ ಈ ಕ್ಷೇತ್ರ ಹೆಸರುವಾಸಿ. ಪ್ರವಾಸಕ್ಕೂ ಸೈ, ಧಾರ್ಮಿಕ ನಂಬಿಕೆಗೂ ಸೈ ಎನ್ನುವ ಈ ಕ್ಷೇತ್ರ ಕಾಫಿನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿ ಅಂದರೂ ತಪ್ಪಿಲ್ಲ.

    Published by:G Hareeshkumar
    First published: