Karnataka Band: ಸೆಪ್ಟೆಂಬರ್ 25ರ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯ ವಿವಿಧ ಸಂಘಟನೆಗಳ ಬೆಂಬಲ

ಸೆಪ್ಟೆಂಬರ್ 25 ರಂದು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು. ಸಾರಿಗೆ ಸಂಚಾರವನ್ನು ಸ್ಥಗಿತ ಗೊಳಿಸಲಾಗುವುದು. ಬಂದ್ ಯಶಸ್ಸಿಗೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹೋರಾಟ ನಡೆಸಲಾಗುವುದು

news18-kannada
Updated:September 23, 2020, 8:25 AM IST
Karnataka Band: ಸೆಪ್ಟೆಂಬರ್ 25ರ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯ ವಿವಿಧ ಸಂಘಟನೆಗಳ ಬೆಂಬಲ
ಸಾಂದರ್ಭಿಕ ಚಿತ್ರ
  • Share this:
ಹುಬ್ಬಳ್ಳಿ(ಸೆಪ್ಟೆಂಬರ್ 23): ಇದೇ ಸೆಪ್ಟೆಂಬರ್ 25 ರಂದು ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಕಳಸಾ- ಬಂಡೂರಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಆಟೋ ರಿಕ್ಷಾ ಚಾಲಕರ ಸಂಘ, ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘ, ಬೀಡಿ ಕಾರ್ಮಿಕರ ಸಂಘ, ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣ, ಎಐಟಿಯುಸಿ ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ನಲ್ಲಿ ಭಾಗವಹಿಸಲಿವೆ. ಸೆಪ್ಟೆಂಬರ್ 25ರಂದು ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳನ್ನು ಸಂಪೂರ್ಣ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಕುರಿತು ಮಾತನಾಡಿರುವ ರೈತ ಮುಖಂಡರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ. ರೈತರು ಮತ್ತು ಕಾರ್ಮಿಕರಿಗೆ ಮಾರಕವಾಗುವ ಕಾನೂನುಗಳನ್ನು ಜಾರಿಗೆ ತರಲಾಗುತ್ತಿದೆ. ಬಂಡವಾಳ ಶಾಹಿಗಳ ಬೆಂಬಲಕ್ಕೆ ನಿಂತು ಬಡ ವರ್ಗವನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸೆಪ್ಟೆಂಬರ್ 25 ರಂದು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು. ಸಾರಿಗೆ ಸಂಚಾರವನ್ನು ಸ್ಥಗಿತ ಗೊಳಿಸಲಾಗುವುದು. ಬಂದ್ ಯಶಸ್ಸಿಗೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹೋರಾಟ ನಡೆಸಲಾಗುವುದು ಎಂದು ಕಳಸಾ- ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಹಾಗೂ ರೈತ ಮುಖಂಡ ಬಾಬಾಜಾನ್ ಮುಧೋಳ್ ತಿಳಿಸಿದ್ದಾರೆ.

ನಾಗರಿಕ ಹೋರಾಟ ಸಮಿತಿ ಪ್ರತಿಭಟನೆ :

ಕುಡಿಯುವ ನೀರಿನ ಖಾಸಗೀಕರಣ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ನೀರು ಸರಬರಾಜು ನಿರ್ವಹಣೆಯನ್ನು ಜಲ ಮಂಡಳಿಯೇ ಮಾಡಲಿ. ಅವಳಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಸಮರ್ಪಕವಾಗಿ ಜಾರಿಯಾಗಲಿ. ಕುಡಿಯುವ ನೀರು ಪೂರೈಕೆ ವ್ಯವಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಕಂಪನಿಗಳಿಗೆ ನೀಡಬಾರದು. ನೀರಿನ ಖಾಸಗೀಕರಣ ಮಾಡಿದ್ರೆ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ : ಮುಂದುವರೆದ ಅನ್ನದಾತರ ಆಕ್ರೋಶ; ರೈತರ ಹೋರಾಟಕ್ಕೆ ಪ್ರತಿಪಕ್ಷಗಳ ಬೆಂಬಲ, ಆಡಳಿತ ಪಕ್ಷ ಸುಸ್ತು

ಖಾಸಗಿ ಕಂಪನಿಗಳ ಲಾಬಿಗೆ ಸರ್ಕಾರ ಮಣಿಯಬಾರದು ಎಂದು ಘೋಷಣೆಗಳನ್ನು ಕೂಗಿದರು. ಕುಡಿಯುವ ನೀರು ಪೂರೈಕೆಯನ್ನು ಖಾಸಗಿ ಕಂಪನಿಗಳಿಗೆ ನೀಡುವ ನಿರ್ಧಾರವನ್ನು ಹಿಂಪಡೆಯುವಂತೆ ಮಹಾನಗರ ಪಾಲಿಕೆ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ‌‌ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ನಾಗರಿಕ ಹೋರಾಟ ಸಮಿತಿ ಮುಖಂಡ ಅಮೃತ್ ಇಜಾರೆ ಮಹಾನಗರ ಪಾಲಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೀರಿ‌ನ ಖಾಸಗೀಕರಣ ಜನ ವಿರೋಧಿಯಾಗಿದೆ. ಸಾರ್ವಜನಿಕರ ಮೇಲೆ ಹೆಚ್ಚಿನ ಹೊರೆ ಹೇರಲು ಸರ್ಕಾರ ಹೊರಟಿದೆ ಎಂದು ಟೀಕಿಸಿದ್ದಾರೆ.
Published by: G Hareeshkumar
First published: September 23, 2020, 7:07 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading