Karnataka Rain - ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ ; ಹವಾಮಾನ ಇಲಾಖೆಯಿಂದ ಸಮುದ್ರ ಪ್ರಕ್ಷುಬ್ಧಗೊಳ್ಳುವ ಎಚ್ಚರಿಕೆ

Monsoon 2020 : ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ

news18-kannada
Updated:August 3, 2020, 11:32 AM IST
Karnataka Rain - ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ ; ಹವಾಮಾನ ಇಲಾಖೆಯಿಂದ ಸಮುದ್ರ ಪ್ರಕ್ಷುಬ್ಧಗೊಳ್ಳುವ ಎಚ್ಚರಿಕೆ
ಸಾಂದರ್ಭಿಕ ಚಿತ್ರ
  • Share this:
ಮಂಗಳೂರು(ಆಗಸ್ಟ್. 03): ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ  5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಗೊಂಡ ಹಿನ್ನಲೆಯಲ್ಲಿ ಮಳೆಯ ಪ್ರಮಾಣದಲ್ಲಿ ಭಾರೀ ಕುಸಿತವೂ ಕಂಡಿತ್ತು.

ಈ ನಡುವೆ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮಳೆಯ ಜೊತೆಗೆ ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದ್ದು, ಸಮುದ್ರದಲ್ಲೂ ಇದರ ಪರಿಣಾಮ ಕಂಡು ಬರಲಿದೆ‌.   ಗರಿಷ್ಠ 3.3 ಮೀಟರ್ ಗಳಷ್ಟು ಎತ್ತರದಲ್ಲಿ ಸಮುದ್ರದ  ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಕಡಲ್ಕೊರೆತ


ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯಲಾರಂಭಿಸಿದ್ದು, ಇಂದು ಕೂಡಾ ಮಳೆ ಮುಂದುವರಿದಿದೆ. ಮಳೆಯ ಜೊತೆಗೆ ಗಾಳಿಯೂ ಬೀಸಲಾರಭಿಸಿದ್ದು, ಸಮುದ್ರ ಇನ್ನಷ್ಟು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆಯೂ ಇದೆ. ಇದರಿಂದಾಗಿ ಕರಾವಳಿ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗಲಿದ್ದು, ತೀರದ ಜನ ಎಚ್ಚರಕೆಯಲ್ಲಿರುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ : ಖಾಸಗಿ ವೈದ್ಯರಿಂದ ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆ ; ರಾಜ್ಯಕ್ಕೆ ಮಾದರಿಯಾದ ಹಾವೇರಿ ವೈದ್ಯರು

ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಸಣ್ಣಪುಟ್ಟ ಗುಡ್ಡ ಕುಸಿತ ಘಟನೆಗಳೂ ಸಂಭವಿಸಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲೂ ಮಳೆ ಬಿರುಸುಗೊಂಡಿದ್ದು, ಮಳೆ ಇನ್ನಷ್ಟು ಹೆಚ್ಚಾಗುವ ಸೂಚನೆಯಿರುವ ಕಾರಣ ತಗ್ಗು ಪ್ರದೇಶಗಳ ಜನ ಎಚ್ಚರಿಕೆಯಲ್ಲಿರುವಂತೆಯೂ ಜಿಲ್ಲಾಡಳಿತ ಸೂಚಿಸಿದೆ.ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ನಿನ್ನೆ ರಾತ್ರಿಯಿಂದ ಎಡೆಬಿಡದೆ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ

ಕಳೆದ ಬಾರಿಯೂ ಅಗಸ್ಟ್ ತಿಂಗಳಿನಲ್ಲೇ ಜಿಲ್ಲೆಯಲ್ಲಿ ಭಾರೀ ಮಳೆ‌ ಕಾಣಿಸಿಕೊಂಡಿತ್ತು. ಮಳೆಯಿಂದಾಗಿ ಜಿಲ್ಲೆಯ ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದರೆ, ಚಾರ್ಮಾಡಿ, ದಿಡುಪೆ ಭಾಗದಲ್ಲಿ ಜಲಪ್ರಳಯಕ್ಕೆ ಸಿಕ್ಕಿ ನೂರಾರು ಕುಟುಂಬಗಳು ಬೀದಿ ಪಾಲಾಗಿದ್ದವು.
Published by: G Hareeshkumar
First published: August 3, 2020, 9:30 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading