HOME » NEWS » District » KARNATAKA RAKSHANA VEDIKE WORKERS PROTEST AGAINST UDDHAV THACKERAY STATEMENT RHHSN PTH

ಮಹಾರಾಷ್ಟ್ರ ಸಿಎಂ ಠಾಕ್ರೆ ಗಡಿ ಹೇಳಿಕೆ ವಿರುದ್ಧ ಕರವೇ ಪ್ರತಿಭಟನೆ; ಕನ್ನಡಿಗರ ಕ್ಷಮೆಗೆ ಒತ್ತಾಯ

ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ.‌ ಗಡಿ ವಿಚಾರದಲ್ಲಿ ಪದೇಪದೇ ತಂಟೆ ತೆಗೆಯುವುದು ಖಂಡನೀಯ. ಮಹಾದಾಯಿ ನೀರಿನ ವಿಚಾರದಲ್ಲಿಯೂ ಇದೇ ರೀತಿ ವಿರೋಧ ಮಾಡಿದರು.‌ ಅವರಿಗೆ ಮಾನವೀಯತೆ ಅನ್ನೋದಾದ್ರೂ ಇದೆಯಾ? ಎಂದು ಕುರುಬೂರು ಶಾಂತಕುಮಾರ್ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

news18-kannada
Updated:January 18, 2021, 6:01 PM IST
ಮಹಾರಾಷ್ಟ್ರ ಸಿಎಂ ಠಾಕ್ರೆ ಗಡಿ ಹೇಳಿಕೆ ವಿರುದ್ಧ ಕರವೇ ಪ್ರತಿಭಟನೆ; ಕನ್ನಡಿಗರ ಕ್ಷಮೆಗೆ ಒತ್ತಾಯ
ಹುಬ್ಬಳ್ಳಿಯಲ್ಲಿ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಪ್ರತಿಕೃತಿ ದಹಿಸಿದ ಕರವೇ ಕಾರ್ಯಕರ್ತರು.
  • Share this:
ಹುಬ್ಬಳ್ಳಿ; ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದಿರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಹಾರಾಷ್ಟ್ರದ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಉದ್ಧವ್ ಠಾಕ್ರೆ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿದರು. ‌ನಂತರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯಾಗಿದ್ದವರು ಗಡಿ ವಿಚಾರವನ್ನು ಕೆದಕುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟು ಮಾಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿದ್ದು ಸಿಎಂ ಹುದ್ದೆಗೆ ಗೌರವ ತರುವಂತೆ ನಡೆದುಕೊಳ್ಳಬೇಕು. ವಿನಾಕಾರಣ ವಿವಾದಾತ್ಮಕ ಹೇಳಿಕೆ ನೀಡಿ ಜನರ ಭಾವನೆ ಕೆರಳಿಸಬಾರದು. ಉದ್ಧವ್ ಠಾಕ್ರೆ ತಕ್ಷಣ ಕರ್ನಾಟಕ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜಕಾರಣಕ್ಕಾಗಿ ಗಡಿ ಖ್ಯಾತೆ ತೆಗೆಯುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲ ಎಂದು, ರೈತ ಮುಖಂಡ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಉದ್ಧವ್ ಠಾಕ್ರೆ ಮಹಾರಾಷ್ಟ್ರ ಮತದಾರರ ಓಲೈಕೆಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾರೇ ಆದರೂ ಜನರ ಭಾವನೆ ಕೆರಳಿಸುವ ಹೇಳಿಕೆ ನೀಡಬಾರದು. ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ.‌ ಗಡಿ ವಿಚಾರದಲ್ಲಿ ಪದೇಪದೇ ತಂಟೆ ತೆಗೆಯುವುದು ಖಂಡನೀಯ. ಮಹಾದಾಯಿ ನೀರಿನ ವಿಚಾರದಲ್ಲಿಯೂ ಇದೇ ರೀತಿ ವಿರೋಧ ಮಾಡಿದರು.‌ ಅವರಿಗೆ ಮಾನವೀಯತೆ ಅನ್ನೋದಾದ್ರೂ ಇದೆಯಾ? ಎಂದು ಕುರುಬೂರು ಶಾಂತಕುಮಾರ್ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಜೆಡಿಎಸ್​ಗೆ ಅವಕಾಶ ಕೊಟ್ಟರೆ ಪಂಚರತ್ನ ಯೋಜನೆ ಜಾರಿ; ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಕುರುಬೂರು ಶಾಂತಕುಮಾರ್, ಕೇಂದ್ರ ಸರ್ಕಾರ ಜನತಂತ್ರ ವ್ಯವಸ್ಥೆ ನಾಶ ಮಾಡುತ್ತಿದೆ. ದೇಶದಲ್ಲಿ ಮತ್ತು ನಮ್ಮ ರಾಜ್ಯದಲ್ಲಿ ರೈತರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ.‌ ಕೇಂದ್ರ ಸರ್ಕಾರ ಜನವಿರೋಧಿ ನೀತಿ‌ ಅನುಸರಿಸುತ್ತಿದೆ. ರೈತರ ಹೋರಾಟವನ್ನು ಹತ್ತಿಕ್ಕುವ ಮೂಲಕ ಕೇಂದ್ರ ಸರ್ಕಾರ ಅವಿವೇಕದ‌ ಪರಮಾವಧಿ ಮೆರೆಯುತ್ತಿದೆ.‌ ದೆಹಲಿಯಲ್ಲಿ ಲಕ್ಷಾಂತರ ರೈತರು ಕೊರೆಯುವ ಚಳಿಯಲ್ಲಿಯೂ ಪ್ರತಿಭಟನೆಗೆ ನಡೆಸುತ್ತಿದ್ದಾರೆ. ಈವರೆಗೂ 9 ಸಭೆಗಳನ್ನು‌ ಮಾಡಿ ಸರ್ಕಾರ ನಾಟಕೀಯ ವರ್ತನೆ‌ ತೋರುತ್ತಿದೆ. ರೈತರ ಹೋರಾಟವನ್ನ ಹತ್ತಿಕ್ಕುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕೇಂದ್ರ ಸರ್ಕಾರ ತಪ್ಪು ಸರಿಪಡಿಸುವ ಬದಲು ರೈತ ವಿರೋಧಿ ನೀತಿಗಳನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

ರೈತ ಬೆಳೆದ ಬೆಳೆಗೆ ಸಮರ್ಪಕ‌ ಬೆಂಬಲ‌ ಬೆಲೆ ಸಿಗುತ್ತಿಲ್ಲ. ದೇಶದ ರೈತರನ್ನು ಉದ್ಯಮಿಗಳ ಕಂಪನಿಗಳಿಗೆ ಬಲಿಕೊಡುವ ಕೆಲಸ ಮಾಡುತ್ತಿದೆ. ಜನವರಿ 26 ರಂದು ದೆಹಲಿ ರೈತರಿಗೆ ಬೆಂಬಲ ವ್ಯಕ್ತಪಡಿಸಲಿದ್ದೇವೆ. ಕರ್ನಾಟಕದಿಂದ‌ ಕೆಲ ರೈತ ಸಂಘಟನೆಗಳ ರೈತ  ಮುಖಂಡರು ಸಾಂಕೇತಿಕವಾಗಿ ದೆಹಲಿಗೆ ತೆರಳಲಿದ್ದಾರೆ. 13 ಸಾವಿರಕ್ಕೂ ಹೆಚ್ಚಿನ‌ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್, ಬೈಕ್ ರ್ಯಾಲಿ‌ ನಡೆಸಲಿದ್ದೇವೆ. ಬೃಹತ್ ಸಂಖ್ಯೆಯಲ್ಲಿ ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈತ ಹೋರಾಟಕ್ಕೆ ಬೆಂಬಲ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
Published by: HR Ramesh
First published: January 18, 2021, 6:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories