Karnataka SSLC Result 2020: ಸೋಮವಾರ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳ ಮೊಬೈಲ್​ಗೆ  ಬರಲಿದೆ ರಿಸಲ್ಟ್

KSEEB 10th result 2020 ಈ ಬಾರಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

news18-kannada
Updated:August 8, 2020, 4:54 PM IST
Karnataka SSLC Result 2020: ಸೋಮವಾರ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳ ಮೊಬೈಲ್​ಗೆ  ಬರಲಿದೆ ರಿಸಲ್ಟ್
ಸಾಂದರ್ಭಿಕ ಚಿತ್ರ
  • Share this:
Karnataka SSLC Result 2020: ಚಾಮರಾಜನಗರ (ಆಗಸ್ಟ್ 8); ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.  ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು,  ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ  ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಈ ಬಾರಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಳ್ಳೆಯ ಫಲಿತಾಂಶವೂ ಬರಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಸೆಪ್ಟೆಂಬರ್​ನಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು. ಜೂನ್, ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ ಕೊರೋನಾ ಕಾರಣದಿಂದು ಸುಮಾರು 16 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಇವರೆಲ್ಲರನ್ನು ಪೂರಕ ಪರೀಕ್ಷೆಯಲ್ಲಿ ಫ್ರೆಶ್ ಸ್ಟೂಡೆಂಟ್ ಎಂದು  ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲೂ ಸಹ ಅಟೆಂಪ್ಟ್ ಎಂದು ನಮೂದಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ; http://kseeb.kar.nic.in/

ಕಾವೇರಿ ನದಿ ಪಾತ್ರದ ಗ್ರಾಮಗಳ ಪರಿಶೀಲನೆ

ಕಬಿನಿ ಹಾಗೂ ಕೆ.ಆರ್.ಎಸ್. ಜಲಾಶಯಗಳಿಂದ 1 ಲಕ್ಷ 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಇನ್ನೂ  ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆಗಳಿರುವುದರಿಂದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕೆಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕಿನ  ಮುಳ್ಳೂರು, ಹಳೇ ಹಂಪಾಪುರ, ದಾಸನಪುರ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿ: ಮನೆ ಬಾಗಿಲಿಗೆ ಮದ್ಯ ಪೂರೈಸುವುದು ಅವಿವೇಕದ ನಿರ್ಧಾರ; ಸಿಎಂ ವಿರುದ್ಧ ಹೆಚ್​.ಡಿ. ಕುಮಾರಸ್ವಾಮಿ ಆಕ್ರೋಶಕೇರಳದ ವೈನಾಡುವಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಕಬಿನಿ ಹಾಗೂ ಕೆ. ಆರ್.ಎಸ್. ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಜಲಾಶಯಗಳಿಂದ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡುವುದು ಅಪಾಯಕಾರಿ. ಹಾಗಾಗಿ   ಹಂತ ಹಂತವಾಗಿ ಬಿಡುಗಡೆ ಮಾಡುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿ ಈ ಗ್ರಾಮಗಳಲ್ಲಿ ಸಾಕಷ್ಟು ಹಾನಿಯಾಗಿತ್ತು. ಮತ್ತೆ ಅದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನೀರು ನುಗ್ಗುತ್ತದೋ ಅಂತಹ ಕಡೆಗಳಲ್ಲಿ ತಡೆಗೋಡೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
Published by: HR Ramesh
First published: August 8, 2020, 4:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading