ಅತ್ಯಾಚಾರ ಸಂತ್ರಸ್ತೆಯರು ಆತ್ಮಹತ್ಯೆಗೆ ಶರಣಾಗದಂತೆ ತಡೆಯಲು ಜಿಲ್ಲಾ ಮಟ್ಟದ ಸಮಿತಿ ರಚನೆ‌ ; ಪ್ರಮೀಳಾ ನಾಯ್ಡು

ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ತಕ್ಷಣ ಅವರಿಗೆ ಆಸ್ಪತ್ರೆಯಲ್ಲಿಯೇ ಸಕಲ ವ್ಯವಸ್ಥೆ ಮಾಡಬೇಕು. ವೈದ್ಯಕೀಯ, ಪೊಲೀಸ್, ಮಾನಸಿಕ ತಜ್ಞರು, ಆಪ್ತ ಸಮಾಲೋಚಕರು ಸ್ಥಳದಲ್ಲಿಯೇ ಅವರಿಗೆ ನೆರವು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು

  • Share this:
ಹುಬ್ಬಳ್ಳಿ(ಆಗಸ್ಟ್​. 13): ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ಹೇಳಿದ್ದಾರೆ.

ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿ್ಗೆ ಮಾತನಾಡಿದ ಅವರು, ಧಾರವಾಡದ ಬೋಗೂರ ಗ್ರಾಮದ ಬಾಲಕಿಯು ಅತ್ಯಾಚಾರಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವುದು ದುರದೃಷ್ಟಕರ. ದೌರ್ಜನ್ಯದ ವಿರುದ್ದ ಹೋರಾಟ ನಡೆಸಿ ನ್ಯಾಯ ಪಡೆದುಕೊಳ್ಳಬೇಕು.‌ ಹಲವಾರು ಸಂತ್ರಸ್ತೆಯರು, ಅತ್ಯಾಚಾರ ಘಟನೆಯ ನಂತರ ನವ ಜೀವನ ರೂಪಿಸಿಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಪೋಷಕರು ಧೃತಿಗೆಡದೆ ಮಕ್ಕಳಲ್ಲಿ ಧೈರ್ಯ ತುಂಬಬೇಕು‌ ಎಂದರು.

ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ತಕ್ಷಣ ಅವರಿಗೆ ಆಸ್ಪತ್ರೆಯಲ್ಲಿಯೇ ಸಕಲ ವ್ಯವಸ್ಥೆ ಮಾಡಬೇಕು. ವೈದ್ಯಕೀಯ, ಪೊಲೀಸ್, ಮಾನಸಿಕ ತಜ್ಞರು, ಆಪ್ತ ಸಮಾಲೋಚಕರು ಸ್ಥಳದಲ್ಲಿಯೇ ಅವರಿಗೆ ನೆರವು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಬೋಗೂರ ಹಾಗೂ ಮಾದನಬಾವಿ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ಪ್ರಾಮಾಣಿಕಾಗಿ ನೆರವೇರಿಸಿದೆ‌. ಸಂತ್ರಸ್ತ ಕುಟುಂಬದೊಂದಿಗೆ ಸರ್ಕಾರ, ಆಯೋಗ ಹಾಗೂ ಜಿಲ್ಲಾ ಆಡಳಿತ ಇದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಆಯೋಗದ ಅಧ್ಯಕ್ಷೆ ಸ್ಥಾನದ ಜವಬ್ದಾರಿ ವಹಿಸಿಕೊಂಡ ಸ್ಪಲ್ಪ ದಿನದಲ್ಲಿಯೇ ದೇಶಾದ್ಯಂತ ಲಾಕ್ ಡೌನ್ ಜಾರಿಯಾಯಿತು. ಇದರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುಲು ತೊಡಕಾಯಿತು. ಸಾರ್ವಜನಿಕರು ಮಹಿಳೆಯರ ವಿರುದ್ಧ ದೌರ್ಜನ್ಯ ಪ್ರಕರಣಗಳ ಕುರಿತು ದೂರು ನೀಡಲು ಸಹಾಯವಾಣಿ ಆರಂಭಿಸಲಾಯಿತು.‌ ಲಾಕ್ ಡೌನ್ ಸಂದರ್ಭದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಕಳವಳಕಾರಿಯಾಗಿತ್ತು ಎಂದರು.

ಧಾರವಾಡ ಜಿಲ್ಲಾಡಾಳಿತ ಲಾಕ್ ಡೌನ್ ಸಂದರ್ಭದಲ್ಲಿ ಅತ್ಯತ್ತಮವಾಗಿ ಕೆಲಸ ನಿರ್ವಹಿಸಿದೆ. ಲೈಂಗಿಕ ಅಲ್ಪಸಂಖ್ಯಾತರ ಅರ್ಜಿಗಳನ್ನು ವಾಟ್ಸಪ್ ಮೂಲಕ ಪಡೆದುಕೊಂಡು ಸಹಾಯ ನೀಡಲಾಗಿದೆ. ಮಾಶಾಸನಗಳನ್ನು ಸಹ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಆಶ್ರಯ ವಸತಿ ಯೋಜನೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಲೈಂಗಿಕ ಅಲ್ಪ ಸಂಖ್ಯಾತರಿಗೆ ಉದ್ಯೋಗಿನಿ ಯೋಜನೆ ಹಾಗೂ‌ ವ್ಯಾಪಾರ ನೆಡೆಸಲು 50 ಸಾವಿರ ಸಾಲವನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಶ್ರೀಮಂತ ಪಾಟೀಲ ವಿರುದ್ದ ಭುಗಿಲೆದ್ದ ಆಕ್ರೋಶ ; ಸಚಿವರ ಕ್ಷಮಾಪಣೆಗೆ ಆಗ್ರಹಿಸಿ ಪ್ರತಿಭಟನೆ

ಅತ್ಯಾಚಾರ ಸಂತ್ರಸ್ತರಿಗೆ ಎಲ್ಲಾ ಕಾನೂನು, ವೈದ್ಯಕೀಯ ನೆರವು ನೀಡಲು ಒನ್ ಸ್ಟಾಪ್ ಸೆಂಟರ್ ಗಳನ್ನು ತೆರೆಯಲಾಗಿದೆ. ಸಿಡಿಪಿಒ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಗ್ರಾಮ ಮಟ್ಟದಲ್ಲಿ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆ ಹಾಗೂ ಸುರಕ್ಷತೆ, ಸರ್ಕಾರ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದರು.

ಆಯೋಗದಿಂದ ಹದಿಹರೆಯದ ಮಕ್ಕಳಿಗೆ, ಮುಖ್ಯವಾಗಿ 18 ವರ್ಷದ ಒಳಗಿನ ಬಾಲಕ ಹಾಗೂ ಬಾಲಕಿಯರಿಗೆ ಕಾನೂನಿ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಲಾಗುವುದು. ಆಸ್ತಿಗಾಗಿ ಹಿರಿಯ ಮಹಿಳೆಯರ ಮೇಲೆ ಉಂಟಾಗುವ ದೌರ್ಜನ್ಯ ತಡೆಯಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಹಿರಿಯ ಮಹಿಳೆಯರು ಉಡುಗೊರೆ ರೂಪದಲ್ಲಿ ಆಸ್ತಿ ನೀಡುವುದುನ್ನು ಅವುಗಳ ನೋಂದಣಿಯನ್ನು ತಡೆಯುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
Published by:G Hareeshkumar
First published: