TalaCauvery: ಕೊಡಗಿನ ತಲಕಾವೇರಿ ತೀರ್ಥೋದ್ಭವದಲ್ಲಿ ಭಾಗವಹಿಸಲು ಜಿಲ್ಲೆಯ ಭಕ್ತರಿಗೆ ಮುಕ್ತ ಅವಕಾಶ

ನಿರ್ಬಂಧಗಳನ್ನು ವಿಧಿಸುತ್ತಿದ್ದಂತೆ ಜಿಲ್ಲೆಯ ವಿವಿಧ ಸಂಘಟನೆಗಳು ಸೇರಿದಂತೆ ಸಾವಿರಾರು ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇಂದು ಮತ್ತೆ ಸಭೆ ನಡೆಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತೀರ್ಥೋದ್ಭವಕ್ಕೆ ಭಾಗವಹಿಸುವವರಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ ಎಂದು ಹೇಳಿದರು.

ತಲಕಾವೇರಿ

ತಲಕಾವೇರಿ

  • Share this:
ಕೊಡಗು: ಕೋವಿಡ್ ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕಾವೇರಿ ತೀರ್ಥೋದ್ಭವದಲ್ಲಿ (TalaCauvery) ಭಾಗವಹಿಸಲು ಭಕ್ತರಿಗೆ ವಿಧಿಸಿದ್ದ ನಿರ್ಬಂಧವನ್ನು ಸರ್ಕಾರ ಸಡಿಲ ಗೊಳಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Minister Kota Srinivasa Poojari) ಹೇಳಿದ್ದಾರೆ. ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಚಿವರ ಸಭೆಯಲ್ಲಿ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಅಕ್ಟೋಬರ್ 17 ರಂದು ನಡೆಯುವ ಕಾವೇರಿ ತೀರ್ಥೋದ್ಭವದಲ್ಲಿ ಎಲ್ಲಾ ಭಕ್ತರು ಮುಕ್ತವಾಗಿ ಭಾಗವಹಿಸಬಹುದು. ಕೋವಿಡ್ ನೆಗೆಟಿವ್ ವರದಿ ಕಡ್ಡಾಯವೇನಲ್ಲ ಎಂದಿದ್ದಾರೆ.

ಅಲ್ಲದೇ, ತೀರ್ಥೋದ್ಭವದಲ್ಲಿ ಭಾಗವಹಿಸುವವರು ವಾಹನಗಳಲ್ಲೇ ತಲಕಾವೇರಿಗೆ ತೆರಳಬಹುದು ಎಂದು ಹೇಳಿದ್ದಾರೆ. ಕೊಳದಲ್ಲಿ ಪುಣ್ಯ ಸ್ನಾನಕ್ಕೆ ಅವಕಾಶ ಇಲ್ಲ. ಆದರೆ ಎಲ್ಲರೂ ತೀರ್ಥ ಕೊಂಡೊಯ್ಯಬಹುದು ಎಂದಿದ್ದಾರೆ. ಇನ್ನು ಈಗಿನ ಸ್ಥಿತಿಯಲ್ಲಿ ಹೊರಗಿನಿಂದ ಹೆಚ್ಚಿನ ಭಕ್ತರು ಬರುವ ನಿರೀಕ್ಷೆ ಇಲ್ಲ. ಹೀಗಾಗಿ ಹೊರಗಿನ ಭಕ್ತರಿಗೂ ಅವಕಾಶ ನೀಡಬೇಕೋ ಬೇಡವೋ ಎಂಬುದಕ್ಕೆ ಇನ್ನೂ ಸಮಯವಿದ್ದು ಬಳಿಕ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಅಕ್ಟೋಬರ್ 2 ರಂದು ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಭಾಗವಹಿಸುವ ಭಕ್ತರಿಗೆ ಹಲವು ನಿಯಮಗಳನ್ನು ಜಾರಿ ಮಾಡಿ ಆದೇಶಿಸಲಾಗಿತ್ತು. ತೀರ್ಥೋದ್ಭವದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ 72 ಗಂಟೆಯೊಳಗೆ ಪಡೆದ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಕನಿಷ್ಠ ಒಂದು ಡೋಸ್ ಆದರೂ ವ್ಯಾಕ್ಸಿನ್ ಪಡೆದಿರಬೇಕು. ವಾಹನಗಳನ್ನು ತಲಕಾವೇರಿಗೆ ಕೊಂಡೊಯ್ಯುವಂತಿಲ್ಲ, ಬದಲಾಗಿ ಭಾಗಮಂಡಲದಲ್ಲೇ ವಾಹನಗಳನ್ನು ನಿಲ್ಲಿಸಿ ಕಾಲ್ನಡಿಗೆಯಲ್ಲಿ ತಲಕಾವೇರಿಗೆ ಹೋಗಬೇಕು ಎಂಬ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಇಂತಹ ನಿರ್ಬಂಧಗಳನ್ನು ವಿಧಿಸುತ್ತಿದ್ದಂತೆ ಜಿಲ್ಲೆಯ ವಿವಿಧ ಸಂಘಟನೆಗಳು ಸೇರಿದಂತೆ ಸಾವಿರಾರು ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇಂದು ಮತ್ತೆ ಸಭೆ ನಡೆಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತೀರ್ಥೋದ್ಭವಕ್ಕೆ ಭಾಗವಹಿಸುವವರಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ ಎಂದು ಹೇಳಿದರು.

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು

ಇನ್ನು ಆರ್ ಎಸ್ ಎಸ್ ನಿಂದ ತರಬೇತಿ ಪಡೆದ ನಾಲ್ಕು ಸಾವಿರಕ್ಕೂ ಹೆಚ್ಚು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿದ್ದಾರೆ ಎನ್ನೋ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಶ್ರೀನಿವಾಸ ಪೂಜಾರಿ ಆರ್ ಎಸ್ ಎಸ್ ಗೆ ಸೇರಿದರೆ ಸಂಘವು ರಾಷ್ಟ್ರಭಕ್ತಿಯನ್ನು ಕಲಿಸುತ್ತದೆ. ಸಂಘದಿಂದ ಬೆಳೆದು ಬಂದವರು ಸೂಕ್ಷ್ಮ ಮತಿಗಳಾಗಿರುತ್ತಾರೆ. ಸಂಘದಿಂದ ಬೆಳೆದು ಬಂದವರು ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳಾಗುತ್ತಾರೆ ಎನ್ನೋದನ್ನು ನಾವು ಹಿಂದಿನಿಂದಲೂ ಹೇಳಿದ್ದೇವೆ. ಆದರೆ ಅದನ್ನೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈಗ ಹೇಳುತ್ತಿದ್ದಾರೆ ಎಂದು ಎಚ್ ಡಿಕೆ ಅವರನ್ನು ಲೇವಡಿ ಮಾಡಿದ್ದಾರೆ.

ಇದನ್ನು ಓದಿ: ಕರಾಳ ಅಮವಾಸ್ಯೆಗೆ ಒಂದೇ ಕುಟುಂಬದ ಏಳು ಜನ ಬಲಿ; ಮಳೆಗೆ ಮನೆ ಬಿದ್ದು ದುರ್ಘಟನೆ

ಜನರು ಅರ್ಥಮಾಡಿಕೊಳ್ಳಿ ನಿಮ್ಮ ಮಕ್ಕಳನ್ನು ಸಂಘಕ್ಕೆ ಸೇರಿಸಿದರೆ ನಿಮ್ಮ ಮಕ್ಕಳು ಐಎಎಸ್ ಅಥವಾ ಐಪಿಎಸ್ ಅಧಿಕಾರಿಗಳಾಗುತ್ತಾರೆ ಎಂದಿದ್ದಾರೆ.  ಆರ್ ಎಸ್ ಎಸ್ ಅಧಿಕಾರಿಗಳಿಗೆ ಲಂಚ ಪಡೆಯುವುದು, ಜನರಿಗೆ ತೊಂದರೆ ಕೊಡುವುದನ್ನು ಅಧಿಕಾರಿಗಳಿಗೆ ಕಲಿಸುತ್ತದೆಯೇ ಎಂದು ಕುಮಾರಸ್ವಾಮಿ ಅವರು ಬುಧವಾರ ಮರು ಪ್ರಶ್ನಿಸಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂಘವು ರಾಷ್ಟ್ರಭಕ್ತಿಯನ್ನು ಕಲಿಸುತ್ತದೆ. ಅದರ ಆಧಾರದಲ್ಲಿಯೇ ಸಂಘವು ಶಿಕ್ಷಣ ನೀಡುತ್ತದೆಯೇ ಹೊರತ್ತುತು ಸಿದ್ದರಾಮಯ್ಯ ಅಥವಾ ಕುಮಾರಸ್ವಾಮಿ ಅವರು ಏನು ಹೇಳುತ್ತಾರೆ ಎಂಬುದರ ಮೇಲೆ ಸಂಘ ಬೆಳೆದು ಬಂದಿಲ್ಲ. ಅವರ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವೂ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
Published by:HR Ramesh
First published: