HOME » NEWS » District » KODAGU DISTRICT FIVE DAYS A WEEK WITH COMPLETE LOCKDOWN DISTRICT ADMINISTRATION ORDER RHHSN RSK

ಕೊಡಗು ಜಿಲ್ಲೆ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್; ಜಿಲ್ಲಾಡಳಿತ ಆದೇಶ

ಗ್ರಾಮೀಣ ಪ್ರದೇಶದಲ್ಲೂ ಮಹಾಮಾರಿ ತನ್ನ ಕಬಂದ ಬಾಹುಗಳನ್ನು ಚಾಚಿದೆ. ಒಟ್ಟಿನಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣ ಬಂದಿರುವ ಹಳ್ಳಿಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯನ್ನು ವಾರದ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

news18-kannada
Updated:May 4, 2021, 7:04 AM IST
ಕೊಡಗು ಜಿಲ್ಲೆ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್; ಜಿಲ್ಲಾಡಳಿತ ಆದೇಶ
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್
  • Share this:
ಕೊಡಗು: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಜಿಲ್ಲೆಯ ಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿಯೇ ಜಿಲ್ಲಾಡಳಿತ ಕೊಡಗನ್ನು ಸಂಪೂರ್ಣ ಲಾಕ್ ಡೌನ್ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಿಸಿದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ವಾರದಲ್ಲಿ ಕೇವಲ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಿಗ್ಗೆ ಆರರಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇನ್ನು ಹಾಲು ಮತ್ತು ಪೇಪರ್ ಗೆ ಪ್ರತೀ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಇನ್ನು ಉಳಿದಂತೆ ವಾರದ ಐದು ದಿನ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಆರೋಗ್ಯ, ವೈದ್ಯಕೀಯ ಸೇವೆ ಮತ್ತು ಮೆಡಿಕಲ್ ಸಂಬಂಧಿಸಿದಂತೆ ತುರ್ತು ಸೇವೆಗಳಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಮದ್ಯ ಮಾರಾಟಕ್ಕೂ ಮಂಗಳವಾರ ಮತ್ತು ಶುಕ್ರವಾರ ಮಾತ್ರವೇ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದ್ದು ಪಾರ್ಸಲ್ ತೆಗೆದುಕೊಂಡು ಹೋಗಬಹುದು. ಇನ್ನೂ ಹೊಟೇಲ್ ಗಳಿಗೂ ಇದೇ ಆದೇಶ ಅನ್ವಯವಾಗಲಿದೆ. ಜೊತೆಗೆ ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಮತ್ತು ಹೊರ ದೇಶಗಳಿಂದ ಬರುವವರಿಗೆ ಕಡ್ಡಾಯವಾಗಿ ಸೀಲು ಹಾಕಿ ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಕಟ್ಟಡ ನಿರ್ಮಾಣದಂತಹ ಕಾಮಗಾರಿಗಳಿಗೆ ರಾಜ್ಯ ಸರ್ಕಾರದ ಆದೇಶದನ್ವಯ ಅವಕಾಶ ನೀಡಲಾಗಿದೆ. ಉಳಿದ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನೂ ಸಂಪೂರ್ಣ ನಿಷೇಧ ಮಾಡಿರುವುದಾಗಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಸೋಂಕು ಹರಡುತ್ತಿದೆ ಎನ್ನೋದು ಆತಂಕದ ವಿಚಾರ. ಕೊಡಗು ಜಿಲ್ಲೆಯಲ್ಲಿ ನಿತ್ಯ ಐದು ನೂರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದು, ಅವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಗ್ರಾಮೀಣ ಪ್ರದೇಶದಲ್ಲಿನ ಕೇಸುಗಳನ್ನು ಎನ್ನೋದು ಅಚ್ಚರಿಯ ಸಂಗತಿ. ಅದರಲ್ಲೂ ಒಂದೊಂದು ಗ್ರಾಮದಲ್ಲಿ 30 ರಿಂದ 40 ಪ್ರಕರಣಗಳು ದೃಢವಾಗುತ್ತಿವೆ.

ಇದನ್ನು ಓದಿ: Corona Pandemic: ಈ ತಿಂಗಳು ನಿಗದಿಯಾಗಿದ್ದ ಎಲ್ಲ ಆಫ್​ಲೈನ್​ ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರ ಸರ್ಕಾರ

ವಿರಾಜಪೇಟೆ ತಾಲ್ಲೂಕಿನ ಚೂರಿಯಾಲ ಗ್ರಾಮದಲ್ಲಿ ಇರೋದೇ 32 ಕುಟುಂಬಗಳು. ಅದರಲ್ಲಿ 36 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇನ್ನು ಸೋಮವಾರಪೇಟೆ ತಾಲ್ಲೂಕಿನ ಹಂಡ್ಲಿ ಗ್ರಾಮದಲ್ಲಿ 36 ಮನೆಗಳಿವೆ. ಆದರೆ ಗ್ರಾಮದಲ್ಲಿ 42 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪೊನ್ನಂಪೇಟೆ ತಾಲ್ಲೂಕಿನ ಟಿ. ಶೆಟ್ಟಿಗೇರಿಯಲ್ಲೂ ಇದೇ ರೀತಿಯಾಗಿದ್ದು ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಇನ್ನು ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಹೀಗೆ ಹಳ್ಳಿಗಳಿಗೂ ಕೋವಿಡ್ ಮಹಾಮಾರಿ ಹರಡೋದಕ್ಕೆ ಪ್ರಮುಖವಾಗಿ ಜಿಲ್ಲೆಯಲ್ಲಿ ನಡೆದ ಹಬ್ಬಿ ಉತ್ಸವಗಳಿಗೆ ಬೆಂಗಳೂರಿನ ಜನರು ಬಂದಿದ್ದೇ ಕಾರಣ ಎನ್ನುತ್ತಿದ್ದಾರೆ ಕೊಡಗು ಡಿಎಚ್‍ಓ ಮೋಹನ್ ಕುಮಾರ್. ಜಿಲ್ಲೆಯಲ್ಲಿ ನಗರ ಪ್ರದೇಶದಲ್ಲಿ ಜನರ ಸಂಖ್ಯೆ ಜಾಸ್ತಿ ಇರುವುದರಿಂದ ಪ್ರಕರಣಗಳು ಜಾಸ್ತಿ ಇವೆ. ಆದರೆ ಗ್ರಾಮೀಣ ಪ್ರದೇಶದಲ್ಲೂ ಮಹಾಮಾರಿ ತನ್ನ ಕಬಂದ ಬಾಹುಗಳನ್ನು ಚಾಚಿದೆ. ಒಟ್ಟಿನಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣ ಬಂದಿರುವ ಹಳ್ಳಿಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯನ್ನು ವಾರದ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Published by: HR Ramesh
First published: May 4, 2021, 7:03 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories