• Home
  • »
  • News
  • »
  • district
  • »
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಕೂಡಲ ಸಂಗಮ ಸ್ವಾಮೀಜಿ ಆಗ್ರಹ

ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಕೂಡಲ ಸಂಗಮ ಸ್ವಾಮೀಜಿ ಆಗ್ರಹ

ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಕೂಡಲ ಸಂಗಮ ಮತ್ತು ಬಸವ ಕಲ್ಯಾಣಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಿದ್ದರಿಂದ ಅವುಗಳು ಈಗ ಅಭಿವೃದ್ಧಿಯಾಗಿವೆ. ಈಗ ಬಸವನ ಬಾಗೇವಾಡಿಗೆ ಪ್ರತ್ಯೇಕ ಅಭಿವದ್ಧಿ ಪ್ರಾಧಿಕಾರ ರಚಿಸಿದರೆ ಬಸವಣ್ಣನವರ ವಿಚಾರಗಳನ್ನು ಮತ್ತಷ್ಟು ಜಾಗತಿಕ ಮಟ್ಟದಲ್ಲಿ ಪ್ರಸಾರ ಮಾಡಲು ಅನುಕೂಲವಾಗಲಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಮುಂದೆ ಓದಿ ...
  • Share this:

ವಿಜಯಪುರ: ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಮೂಲ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಈ ತಿಂಗಳಲ್ಲಿ ಬಸವನ ಬಾಗೇವಾಡಿಯಿಂದ ನಿಯೋಗ ಕರೆದುಕೊಂಡು ಹೋಗಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.


ಜಗತ್ತಿಗೆ ಕಾಯಕ ಸಂದೇಶ ಮತ್ತು ಮಹಿಳಾ ಸ್ವಾತಂತ್ರ್ಯವನ್ನು ಕರುಣಿಸಿದ ವಿಶ್ವಗುರು ಬಸವಣ್ಮನವರಿಗೆ ಜನ್ಮ ನೀಡಿದ ಪುಣ್ಯಭೂಮಿ ಬಸವನ ಬಾಗೇವಾಡಿ. ಇದಕ್ಕೆ ಪ್ರತ್ಯೇಕ ಪ್ರಾಧಿಕಾರ ಆಗಲೇಬೇಕು. ಈ ಹಿಂದೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕಳೆದ ಬಾರಿ ಯಡಿಯೂರಪ್ಪ ಅವರು ಕೂಡಲ ಸಂಗಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಬಸವಾನುಯಾಯಿಗಳು ಈ ಕುರಿತು ಅವರಿಗೆ ಮನವಿ ಮಾಡಿದ್ದರು. ಈಗ ಯಡಿಯೂರಪ್ಪ ಅವರೇ ಸಿಎಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಸವನ ಬಾಗೇವಾಡಿ ಮೇಲಿರುವ ತಮ್ಮ ಅಭಿಮಾನ ಮತ್ತು ಇಲ್ಲಿನ ಜನರ ವಿಶ್ವಾಸಕ್ಕೆ ಪೂರಕವಾಗಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಮಹದಾಯಿ ಅಂತಿಮ ತೀರ್ಪು ಬರುವ ಮುನ್ನವೇ ಮಲಪ್ರಭಾ ನದಿ ಒತ್ತುವರಿ ತೆರವುಗೊಳಿಸಿ ; ಅಶೋಕ್ ಚಂದರಗಿ ಆಗ್ರಹ


ಕೂಡಲ ಸಂಗಮ ಮತ್ತು ಬಸವ ಕಲ್ಯಾಣಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸಿದ್ದರಿಂದ ಅವುಗಳು ಈಗ ಅಭಿವೃದ್ಧಿಯಾಗಿವೆ. ವಿಶ್ವವಿಖ್ಯಾತವಾಗಿವೆ. ಈಗ ಬಸವನ ಬಾಗೇವಾಡಿಗೆ ಪ್ರತ್ಯೇಕ ಅಭಿವದ್ಧಿ ಪ್ರಾಧಿಕಾರ ರಚಿಸಿದರೆ ಬಸವಣ್ಣನವರ ಜನ್ಮಸ್ಥಳ ಕೂಡ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಲು ಮತ್ತು ಬಸವಣ್ಣನವರ ವಿಚಾರಗಳನ್ನು ಮತ್ತಷ್ಟು ಜಾಗತಿಕ ಮಟ್ಟದಲ್ಲಿ ಪ್ರಸಾರ ಮಾಡಲು ಅನುಕೂಲವಾಗಲಿದೆ ಎಂದು ಸ್ವಾಮೀಜಿ ಹೇಳಿದರು.


ಬಸವವ ಬಾಗೇವಾಡಿ ಪಟ್ಟಣ ಈಗ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿದೆ. ಈಗಾಗಾಲೇ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಬಸವಣ್ಣನವರ ಮನೆಯನ್ನು ಸ್ವಾಧೀನಪಡಿಸಿಕೊಂಡು ಬಸವ ಸ್ಮಾರಕ ನಿರ್ಮಿಸಲಾಗಿದೆ. ಆದರೆ ಬಸವ ಭಕ್ತರ ಬೇಡಿಕೆಯಂತೆ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ


ಈ ಕುರಿತು ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಸರಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಸಿಎಂ ಬಳಿಗೆ ನಿಯೋಗ ಕರೆದುಕೊಂಡು ಹೋಗಲಾಗುವುದು. ಅಲ್ಲದೇ, ಈ ತಿಂಗಳಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬಸವನ ಬಾಗೇವಾಡಿ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕು ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಮನ್ನಾ ನ. ಶಾಬಾದಿ, ಡಂಬಳ, ದಯಾನಂದ ಜಾಲಗೇರಿ, ರಾಜು ಚಿಕ್ಕೊಂಡ, ಮಕ್ತುಂ ಹೊಕ್ರಾಣಿ, ಬಸವರಾಜ ಹಾರಿವಾ;ಸ ನಿಂಗಪ್ಪ ಅವಟಿ, ಕುಶಾಲ ಬೆನ್ನೂರ, ಪ್ರಶಾಂತ ಮುಂಜಾನೆ, ವಿಶ್ವನಾಥ ಅಕ್ಕಿ, ಆನಂದ ಸುಂಕದ ಸೇರಿದಂತೆ ನಾನಾ ಮುಖಂಡರು ಉಪಸ್ಖಿತರಿದ್ದರು.


ವರದಿ: ಮಹೇಶ ವಿ. ಶಟಗಾರ

Published by:Vijayasarthy SN
First published: