ಕೊಪ್ಪಳ(ಅಕ್ಟೋಬರ್. 01): ಬುಧವಾರ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ನಾನಾ ಕಡೆ ಅವಘಡಗಳು ಸಂಭವಿಸಿದ ವರದಿಗಳು ಗೋಚರಿಸಿವೆ.ಮಳೆ ಆರ್ಭಟಕ್ಕೆ ತತ್ತರಿಸಿರುವ ಜನ ತತ್ತರಿಸಿದ್ದು, ಕೊಪ್ಪಳ ತಾಲೂಕಿನ ಭೈರಾಪುರ ಹಳ್ಳ ತುಂಬಿ ಹರಿಯುತ್ತಿದ್ದು, ನಿಲೋಗಿಪುರದ ರೈತರೊಬ್ಬರ ಟ್ರ್ಯಾಕ್ಟರ್ ಹಳ್ಳದಲ್ಲಿ ಕೊಚ್ಚಿ ಹೋಗಿದೆ. ಟ್ರ್ಯಾಕ್ಟರ್‌ನ್ನು ಜೆಸಿಬಿ ಮೂಲಕ ಮೇಲೆತ್ತಲು ರೈತರು ಜೀವದ ಹಂಗು ತೊರೆದು ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಟ್ರ್ಯಾಕ್ಟರ್‌ನ್ನು ಮೇಲೆತ್ತಲಾಗಿದೆ. ಬೈರಾಪುರ ಹಳ್ಳ ತಯಂಬಿ ಹರಿಯುತ್ತಿರುವುದರಿಂದ ಕೊಪ್ಪಳ ತಾಲೂಕು ಬೊಚನಹಳ್ಳಿ- ನಿಲೋಗಿಪುರ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇದರಿಂದಾಗಿ ರೈತರು ತಮ್ಮ ಹೊಲಗಳಿಗೆ ತೆರಳಲು ಪರದಾಡುತ್ತಿದ್ದಾರೆ. ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಇಡೀ ಕುಟುಂಬ ಪ್ರಾಣಾಪಾಯದಿಂದ ಪಾರಾದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಹಪುರದಲ್ಲಿ ನಡೆದಿದೆ.ಶಹಪುರದ ಕಳಕೇಶ್ ಚೌಡ್ಕಿ ಎಂಬುವವರ ಮನೆ ಗೋಡೆ ಕುಸಿದಿದ್ದು, ರಾತ್ರಿ ಗಾಢನಿದ್ರೆಯಲ್ಲಿದ್ದ ಕುಟುಂಬ ಗೋಡೆ ಕುಸಿವ ಸದ್ದು ಕೇಳಿ ಎಚ್ಚೆತ್ತುಕೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮನೆಯ ಪರಿಕರ ಮುಗುಚಿದ್ದನ್ನ ಬಿಟ್ಟರೆ ಅದೃಷ್ಟವಶಾತ್ ಜೀವಹಾನಿ ಇಲ್ಲ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುವಂತೆ ಕುಟುಂಬಸ್ಥರ ಮನವಿ ಮಾಡಿಕೊಂಡಿದ್ದಾರ.
ನಿನ್ನೆ ರಾತ್ರಿಯಿಂದ ಬೆಳಗಿನವರೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಅವಾಂತರಗಳು ನಡೆದಿರುವ ಬಗ್ಗೆ ವರದಿಯಾಗುತ್ತಿವೆ. ಸತತ ಮಳೆಯಿಂದ ಅಳವಂಡಿ ಮತ್ತು ಕಂಪ್ಲಿ ಮಾರ್ಗ ಸಂಪರ್ಕಿಸುವ ಹಳ್ಳ ತುಂಬಿ ಹರಿಯುತ್ತಿದೆ.
ಇದನ್ನೂ ಓದಿ : ಖ್ಯಾತ ಕುಸ್ತಿಪಟು ರೇವುನಾಯಕ ಬೆಳಮಗಿಯನ್ನೇ ಹೈರಾಣಾಗಿಸಿದ ಕೊರೋನಾ - ಗದ್ಗದಿತರಾಗಿ ಕಣ್ಣೀರು ಹಾಕಿದ ಮಾಜಿ ಸಚಿವ
ಎರಡು ಗ್ರಾಮಗಳ ಜನರಿಗೆ ಹಳ್ಳದ ದಾರಿ ಬಿಟ್ಟರೆ ಬೇರೆ ಮಾರ್ಗವೇ ಇಲ್ಲ. ಆದರೆ, ಸತತ ಮಳೆಯಿಂದ ಹಳ್ಳ ಭರ್ತಿಯಾಗಿ ಹರಿಯುತ್ತಿದ್ದು, ಜನರು ಅಪಾಯವನ್ನು ಲೆಕ್ಕಿಸದೇ ಸಂಚರಿಸುತ್ತಿದ್ದಾರೆ.
ತಾಯಿಯೊಬ್ಬರು ಮಗುಸಮೇತ ಹಳ್ಳದ ಮತ್ತೊಂದು ಬದಿಗೆ ಹೋಗಬೇಕಿತ್ತು. ಆದರೆ ಹರಿಯುತ್ತಿರುವ ಹಳ್ಳದ ನೀರನ್ನು ಕಂಡು ದಿಕ್ಕು ತೋಚದಂತಾಗಿ ನಿಂತಿದ್ದಾರೆ. ಇದನ್ನು ನೋಡಿದ ಸ್ಥಳೀಯರು ತಾಯಿ ಮತ್ತು ಮಗುವನ್ನು ಎತ್ತಿಕೊಂಡು ದಡಕ್ಕೆ ತಲುಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ