news18-kannada Updated:October 31, 2020, 8:32 PM IST
ಮಂಡ್ಯದ ಕೆ.ಆರ್.ಪೇಟೆ ಪುರಸಭೆ
ಮಂಡ್ಯ(ಅಕ್ಟೋಬರ್. 31): ಮಂಡ್ಯದ ಕೆ.ಆರ್.ಪೇಟೆ ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಇಂದು ಪಟ್ಟಣ ಪುರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರು ಫಲಿತಾಂಶಕ್ಕೆ ಮಾತ್ರ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆ ಖಚಿತವಾದರು ಫಲಿತಾಂಶ ಮಾತ್ರ ಘೋಷಣೆಯಾಗದೆ ಮತ್ತಷ್ಟು ಕುತೂಹಲ ಮೂಡಿಸಿದೆ. ಇಂದು ಕೆ.ಆರ್.ಪೇಟೆ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನ ಎಸ್ಟಿ ಸ್ಥಾನಕ್ಕೆ ಉಪಾಧ್ಯಕ್ಷ ಸ್ಥಾನ ಬಿಸಿಎಂ(ಎ)ಮಹಿಳೆಗೂ ಮೀಸಲಾಗಿತ್ತು. ಅದರಂತೆ ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ಸಚಿವ ನಾರಾಯಣಗೌಡ ಬಣದಲ್ಲಿ ಗುರುತಿಸಿಕೊಂಡಿದ್ದ ಮಹಾದೇವಿ ಬಿಜೆಪಿ ಸದಸ್ಯರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಗಾಯತ್ರಿ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಸದಸ್ಯರೊಂದಿಗೆ ನಾಮಪತ್ರ ನಾಮಪತ್ರ ಸಲ್ಲಿಸಿದರು. ಎರಡು ಸ್ಥಾನಕ್ಕೆ ಇಬ್ಬರೇ ಮಾತ್ರವೇ ನಾಮಪತ್ರ ಸಲ್ಲಿಸಿ ಅವಿರೋಧ ಆಯ್ಕೆಯಾಗಿದರು. ಫಲಿತಾಂಶಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇರುವ ಕಾರಣ ಫಲಿತಾಂಶ ಪ್ರಕಟಿಸಿಲು ಚುನಾ ವಣಾಧಿಕಾರಿಗಳು ನಿರಾಕರಿಸಿದರು.
ಇನ್ನು 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ವಶದಲ್ಲಿದ್ದ ಪುರಸಭೆ ಈ ಬಾರಿ ಕೈ ತಪ್ಪಿದೆ. ಇಬ್ಬರೇ ಅಭ್ಯರ್ಥಿ ಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ಖಚಿತ ವಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯೆ ಪಂಕಜಾ ಹೈಕೋರ್ಟ್ ನಲ್ಲಿ ಮೀಸಲಾತಿ ಪ್ರಶ್ನಿಸಿ ಪ್ರಕರಣ ದಾಖಲಿಸಿರುವುದರಿಂದ ಫಲಿತಾಂಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೂ ಕೂಡ ಸಚಿವ ನಾರಾಯಣಗೌಡ ಬಣದಲ್ಲಿ ಗುರುತಿಸಿಕೊಂಡು ಬಿಜೆಪಿ ಸದಸ್ಯರೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಮಹಾದೇವಿ ಅಧ್ಯಕ್ಷೆಯಾಗಿ ಆಯ್ಕೆ ಬಹುತೇಕ ಖಚಿತವಾಗಿದೆ.
ಇದನ್ನೂ ಓದಿ :
ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ : 13 ಅವಿರೋಧ, 3 ನಿರ್ದೇಶಕ ಸ್ಥಾನಕ್ಕೆ ಚುನಾವಣೆ
ಅಧ್ಯಕ್ಷೆಯಾದ ಆಯ್ಕೆಯಾಗುವ ಸಂಭವನೀಯ ಅಧ್ಯಕ್ಷೆ ಮಹಾದೇವಿ ಜೊತೆ ಬಂದ ಸಚಿವರು ಗೆಲ್ಲುವ ಇಬ್ಬರಿಗೂ ಅಭಿನಂಧನೆ ಸಲ್ಲಿಸಿ ಇದು ಪಟ್ಟಣದ ಅಭಿವೃದ್ದಿಯ ಚುನಾವಣೆಯಾಗಿದೆ. ಇದರಲ್ಲಿ ಇಬ್ಬರು ಹೆಣ್ಣು ಮಕ್ಕಳು ಗೆದ್ದು ಆಯ್ಕೆಯಾಗಲಿದ್ದಾರೆ. ಮುಂದೆ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಎರಡನೇ ಶಿಕಾರಿಪುರ ಮಾಡುವುದಾಗಿ ತಿಳಿಸಿದರು.
ಒಟ್ಟಾರೆ ಇಂದಿನ ಕೆ.ಆರ್.ಪೇಟೆ ಪಟ್ಟಣದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯು ಪೊಲೀಸ್ ಬಿಗಿ ಭದ್ರತೆಯಲ್ಲಿ ನಡೆದಿದೆ. ಅಲ್ಲದೇ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವು ಕೂಡ ಅವಿರೋಧವಾಗಿ ಆಯ್ಕೆಯಾಗಿದೆ. ಆದರೂ ಕೂಡ ಅಧಿಕೃತ ಫಲಿತಾಂಶ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ ಇರುವ ಕಾರಣ ಇನ್ನು ಒಂದು ತಿಂಗಳು ಕಾಯಬೇಕಿದೆ.
Published by:
G Hareeshkumar
First published:
October 31, 2020, 8:25 PM IST