ಸಿದ್ದರಾಮಯ್ಯ, ಡಿಕೆಶಿಗೆ ಶಿವಮೊಗ್ಗ ನಗರಸಭೆಯಲ್ಲಿ ಕಾಂಗ್ರೆಸ್ ಮಾಡಿದ ಕರ್ಮಕಾಂಡ ನೆನಪಿಸಿದ ಈಶ್ವರಪ್ಪ

ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿ. ವಿರುದ್ಧ ಹರಿಹಾಯ್ದ ಸಚಿವರು,  ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತಹ ಪರಿಸ್ಥಿತಿ ಕಾಂಗ್ರೆಸ್ ಮುಖಂಡರದ್ದಾಗಿದೆ ಎಂದು ಟೀಕಿಸಿದ್ದಾರೆ.

ಸಚಿವ ಕೆ ಎಸ್ ಈಶ್ವರಪ್ಪ

ಸಚಿವ ಕೆ ಎಸ್ ಈಶ್ವರಪ್ಪ

  • Share this:
ಶಿವಮೊಗ್ಗ(ಮೇ.27): ಗ್ರಾಮ ಪಂಚಾಯತ್ ಚುನಾವಣೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಜೂನ್ ತಿಂಗಳಿಗೆ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರದಿ ಮುಗಿಯಲಿದೆ.  ಕೊರೋನಾ ಕಾರಣದಿಂದಾಗಿ ಚುನಾವಣೆ ಮುಂದೂಡುವುದು, ಪಂಚಾಯತ್ ಗಳಿಗೆ ನೂತನ ಸದಸ್ಯರನ್ನು ನಾಮನಿರ್ದೇಶನ ಮಾಡುವುದು ಅಥವಾ ಇರುವ ಸದಸ್ಯರನ್ನೇ ಮುಂದುವರೆಸುವುದು ಈ ಮೂರಕ್ಕೂ ನಾವು ತಾಯಾರಾಗಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. 

ಕೊರೋನಾ ಹಿನ್ನೆಲೆಯಲ್ಲಿ ಚುನಾವಣೆ ನಡೆಯದೇ ಹೋದರೆ ಮುಂದಿನ ದಿನಗಳಲ್ಲಿ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮಕರಣ ಮಾಡಲು ಡಿಸಿಯವರಿಗೆ ಅಧಿಕಾರ ನೀಡುತ್ತೇವೆ.  ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದಿದ್ದಾರೆ.

ಇದೇ ವೇಳೆ ಅವರು, ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿ. ವಿರುದ್ಧ ಹರಿಹಾಯ್ದ ಸಚಿವರು,  ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತಹ ಪರಿಸ್ಥಿತಿ ಕಾಂಗ್ರೆಸ್ ಮುಖಂಡರದ್ದಾಗಿದೆ ಎಂದು ಟೀಕಿಸಿದ್ದಾರೆ.

ಕೇವಲ ಬಿಜೆಪಿ ಸದಸ್ಯರೇ ಪಂಚಾಯತ್​ಗಳಲ್ಲಿ ನಾಮಕರಣವಾಗಬೇಕು ಎಂಬ ಉದ್ದೇಶ ಬಿಜೆಪಿಯದ್ದಲ್ಲ. ಆದರೆ, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರು ಗಾಬರಿಯಲ್ಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್​​ ಸದಸ್ಯರ ಅಧಿಕಾರ ಮೊಟಕುಗೊಳಿಸಲಾಗುತ್ತಿದೆ ಎಂದು ಅವರಿಬ್ಬರು ಆಪಾದಿಸುತ್ತಿದ್ದಾರೆ. ಈ ಮಾತನ್ನು ಹೇಳಲು ಇವರಿಗೆ ನಾಚಿಕೆಯಾಗಬೇಕು.  ಇವರಿಗೆ ಈ ಮಾತನ್ನು ಹೇಳಲು 1 ಪರ್ಸೆಂಟಷ್ಟು ಕೂಡ ಅಧಿಕಾರವಿಲ್ಲ ಎಂದು ಸಚಿವ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ :  Corona Effect - ಪ್ರೀ ಸ್ಕೂಲ್ಸ್ ಮಾರಾಟಕ್ಕಿವೆ... ಶಾಲೆಗಳನ್ನು ನಡೆಸಲಾಗದೇ ಮಾರುತ್ತಿದ್ದಾರೆ ಮಾಲೀಕರು !

ಈ ಹಿಂದೆ ಕಾಂಗ್ರೆಸ್​ನವರು, ಕೇವಲ ಕಾಂಗ್ರೆಸ್ ಸದಸ್ಯರನ್ನೇ ಶಿವಮೊಗ್ಗ ನಗರಸಭೆಗೆ ನಾಮ ನಿರ್ದೇಶನ ಮಾಡಿದ ಉದಾಹರಣೆ ನಮ್ಮ ಮುಂದಿದೆ.  ಹೀಗಾಗಿ, ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಈ ಬಗ್ಗೆ ಪ್ರಶ್ನಿಸಲು ನೈತಿಕತೆ ಇಲ್ಲ. ಇದೇ ಭಯ, ಆತಂಕ ಸಿದ್ಧರಾಮಯ್ಯನವರನ್ನು ಮತ್ತು ಡಿ.ಕೆ.ಶಿ.ಯವರನ್ನು ಕಾಡುತ್ತಿದೆ. ಆದರೆ, ಬಿಜೆಪಿ ಇಂತಹ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
First published: