ಮಡಿಕೇರಿ (ಮಾ.17): ಇತ್ತೀಚಿಕೆ ರಾಜ್ಯ ಸಾರಿಗೆ KSRTC ಬಸ್ಗಳ ಅಪಘಾತ (Accident) ಸಂಖ್ಯೆ ಹೆಚ್ಚುತ್ತಿದೆ. ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಸಂಪಾಜೆ ಬಳಿ ನಡೆದಿದೆ. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಉರುಳಿ ಬಿದ್ದಿದೆ. ಕಿರು ಹೊಳೆಗೆ ಕೆಎಸ್ಆರ್ಟಿಸಿ ಬಸ್ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರಿಗೆ (Passenger) ಗಂಭೀರ ಗಾಯಗಳಾಗಿವೆ. ಹಾಗೂ 25 ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ (Injured). ಧರ್ಮಸ್ಥಳದಿಂದ ಗುಂಡ್ಲುಪೇಟೆ ತೆರಳುತ್ತಿದ್ದ ಬಸ್, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ನದಿಗೆ ಉರುಳಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇತ್ತೀಚಿಗೆ ಹೆಚ್ಚಾಗಿದೆ ಬಸ್ ಅಪಘಾತಗಳ ಸಂಖ್ಯೆ
ಚಾಮರಾಜನಗರ (ಮಾ. 14): ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಕೆಳಕ್ಕೆ ಬಿದ್ದು ಮೂವರು ಮೃತಪಟ್ಟಿದ್ರು. ಹಾಗೂ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕುಡುವಾಳೆ ಬಳಿ ನಡೆದಿತ್ತು. ಕೊಳ್ಳೇಗಾಲದಿಂದ ಪಿ.ಜಿ.ಪಾಳ್ಯಕ್ಕೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿತ್ತು
ಸೇತುವೆ ಕೆಳಗಿನ ಕಾಲುವೆಗೆ ಬಸ್ ಬಿದ್ದಿದೆ. ಕಾಲುವೆಯಲ್ಲಿನ ನೀರಿಗೆ ಬಸ್ ಬಿದ್ದ ಕಾರಣ ಸದ್ಯ ಸ್ಥಳೀಯರು ಪ್ರಯಾಣಿಕರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮಾಳಿಗನತ್ತ ಗ್ರಾಮದ ಶಿವಮ್ಮ(70), ಪಿ.ಜಿ.ಪಾಳ್ಯದ ರಮೇಶ್(28), ಆಸ್ಪತ್ರೆಗೆ ಸಾಗಿಸ್ತಿದ್ದಾಗ ಮಾರ್ಗಮಧ್ಯೆ ಸಣ್ಣರಾಯಪ್ಪ(60) ಮೃತಪಟ್ಟಿದ್ದಾರೆ. ಶಿವಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ರಮೇಶ್ ಕಾಮಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ರು.
ಇದನ್ನೂ ಓದಿ: Kannada School: ಕನ್ನಡ ಶಾಲೆ ಉಳಿಸಲು ವಿಭಿನ್ನ ಯತ್ನ: Smart Class ಆಗಿ ಬದಲಾದ ಹಳೆ ಸರ್ಕಾರಿ ಬಸ್
ಈ ಸಂಬಂಧ ಮಾತನಾಡಿದ ಚಾಮರಾಜನಗರ ಡಿಎಚ್ಓ ಡಾ.ವಿಶ್ವೇಶ್ವರಯ್ಯ, ಈಗಾಗಲೇ ಪಿಜಿ ಪಾಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಕೊಳ್ಳೆಗಾಲ ಆಸ್ಪತ್ರೆಗೆ ಕರೆತಂದು ಸಂಪೂರ್ಣ ಚಿಕಿತ್ಸೆ ನೀಡಲಾಗಿತ್ತು. ಮೂಳೆ ಮುರಿತಗೊಂಡು ಗಂಭೀರ ಗಾಯಗೊಂಡಿರುವ 6 ಜನರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು ಯಾರೂ ಸಹಾ ಭಯಪಡುವ ಅಗತ್ಯವಿಲ್ಲ ಎಂದರು.
ಗದಗದಲ್ಲೂ ಸಾರಿಗೆ ಬಸ್ ಪಲ್ಟಿ
ಗದಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಜನರಿಗೆ ಗಾಯ ಇನ್ನು ಮತ್ತೊಂದೆಡೆ ಗದಗದಲ್ಲಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿದೆ. ಗದಗ ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಸಾರಿಗೆ ಸಂಸ್ಥೆಯ ಬಸ್ ಇದಾಗಿದ್ದು ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಪೈಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: KSRTC: ನಾಯಿಗೂ ಆಯ್ತು, ಕೋಳಿಗೂ ಆಯ್ತು, ಈಗ ಹಲಸಿನ ಹಣ್ಣು, ಸ್ಟೌವ್ಗೂ ಟಿಕೆಟ್ ಕೊಡ್ಬೇಕಂತೆ!
ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ