ಕುಕ್ಕೆ‌, ಧರ್ಮಸ್ಥಳ, ಕಟೀಲು: ಆಗಸ್ಟ್ 30 ರವರೆಗೆ ಸಾರ್ವಜನಿಕರಿಗೆ ಸಿಗುವುದಿಲ್ಲ ಯಾವುದೇ ಸೇವೆ

ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72  ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎನ್ನುವ ನಿಯಮವನ್ನು ಹೊರಡಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ

  • Share this:
ಕೇರಳದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳ ಹಿನ್ನಲೆಯಲ್ಲಿ  ಕೇರಳ ಗಡಿಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ.

ಜಿಲ್ಲೆಯ ಪ್ರಮುಖ ಕ್ಷೇತ್ರಗಳಲ್ಲಿ ಭಕ್ತರಿಗೆ ದೇವರ ದರ್ಶನ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಜಿಲ್ಲಾಡಳಿತ ಈಗಾಗಲೇ ನಿಷೇಧಿಸಿ ಆದೇಶ ಹೊರಡಿಸಿದೆ. ವಾರಾಂತ್ಯದ ಶನಿವಾರ ಹಾಗೂ ಭಾನುವಾರ ಕ್ಷೇತ್ರಗಳಿಗೆ ಭಕ್ತರ ಭೇಟಿಯನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಜಿಲ್ಲಾಡಳಿತ ಇದೀಗ ಎಲ್ಲಾ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ಸೇವೆಗಳ ನಿಷೇಧವನ್ನು ಆಗಸ್ಟ್ 30 ವರೆಗೆ ಮುಂದುವರಿಸಿದೆ. ರಾಜ್ಯದ ಹೆಸರಾಂತ ನಾಗಕ್ಷೇತ್ರ ಹಾಗೂ‌ ರಾಜ್ಯದ ಶ್ರೀಮಂತ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಸಹ ಈ ನಿಯಮ ಜಾರಿಗೆ ತರಲಾಗಿದೆ.

ಕುಕ್ಕೆ ದೇವಳದಲ್ಲಿ ಆಗಸ್ಟ್ 30 ರ ತನಕ ಯಾವುದೇ  ಸೇವೆಗಳಿಗೂ ಅವಕಾಶ ಬೇಡ ಎಂದು ನಿರಾಕರಿಸಲಾಗಿದೆ.  ದಕ್ಷಿಣಕನ್ನಡದಲ್ಲಿ ಕೋವಿಡ್ - 19  ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳು ಯಾವುದೇ ಸೇವೆಗಳು ನಡೆಯುವುದಿಲ್ಲ ಎನ್ನುವ ಆದೇಶವನ್ನು ಹೊರಡಿಸಿದ್ದಾರೆ. ಕೇವಲ ಕುಕ್ಕೆ ಸುಬ್ರಮಣ್ಯ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರ್ಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19  ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಠಿಯಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ. ಬೆಳಗ್ಗೆ 7 ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15 ರಿಂದ  1.30 ಹಾಗೂ 2.20 ರಿಂದ ರಿಂದ ಸಂಜೆ 7 ರ ತನಕ ಭಕ್ತರು ಸುಬ್ರಮಣ್ಯ ದೇವರ ದರ್ಶನ ಮಾಡಬಹುದು.

ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72  ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎನ್ನುವ ನಿಯಮವನ್ನು ಹೊರಡಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಜೊತೆಗೆ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೂ ಇದೇ ರೀತಿಯ ನಿಯಮಗಳು ಅನ್ವಯವಾಗಲಿದ್ದು, ಜಿಲ್ಲೆಯ ಕೊರೊನಾ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವ ತನಕ ಇದೇ ರೀತಿಯ ಕಟ್ಟುನಿಟ್ಟಿನ ಮಾರ್ಗಸೂಚಿಗಳು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರಲಿದೆ.

ಇದನ್ನೂ ಓದಿ: ಎಲ್ಲಾ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸಿದ ತಾಲಿಬಾನ್​; ಅರಬ್​ ರಾಷ್ಟ್ರದಲ್ಲಿ ಅಡಗಿಕೊಂಡಿರುವ ಅಧ್ಯಕ್ಷ ಘನಿ

ಪುಣ್ಯಕ್ಷೇತ್ರಗಳಿಗೆ ಈ ನಿಯಮ ಜಾರಿಯಲ್ಲಿದ್ದರೆ, ಕೇರಳ ಭಾಗದಿಂದ ದಕ್ಷಿಣಕನ್ನಡ ಜಿಲ್ಲೆಗೆ ಯಾವುದೇ ವ್ಯಕ್ತಿ ಅಥವಾ ವಾಹನಗಳ ಪ್ರವೇಶ ಮಾಡುವುದಕ್ಕೂ ನಿಷೇಧ ಹೇರಲಾಗಿದೆ. ಕೊರೊನಾ ನೆಗೆಟೀವ್ ವರದಿ ಇದ್ದವರಿಗೆ ಮಾತ್ರ ಜಿಲ್ಲೆಗೆ ಪ್ರವೇಶ ಪಡೆಯುವ ಅವಕಾಶ ಕಲ್ಪಿಸಲಾಗಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:HR Ramesh
First published: